AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟಾಸ್ ಗೆದ್ದ ಶ್ರೇಯಸ್; ಬಲಿಷ್ಠ ಪ್ಲೇಯಿಂಗ್ 11 ಕಣಕ್ಕಿಳಿಸಿದ ಭಾರತ

India vs England T20: ಐರ್ಲೆಂಡ್ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ತಂಡವು ಪುಟಿದೇಳಲು ನೋಡುತ್ತಿದೆ. ಬುಮ್ರಾ, ಪಾಂಡ್ಯ ಇಲ್ಲದೆ, ಮೂವರು ಸ್ಪಿನ್ನರ್‌ಗಳೊಂದಿಗೆ ಭಾರತ ಆಡುತ್ತಿದೆ. ವೈಭವ್ ಸೂರ್ಯವಂಶಿ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದು, ಇಂಗ್ಲೆಂಡ್ ಬಲಿಷ್ಠ ತಂಡವನ್ನು ಭಾರತ ಹೇಗೆ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

IND vs ENG: ಟಾಸ್ ಗೆದ್ದ ಶ್ರೇಯಸ್; ಬಲಿಷ್ಠ ಪ್ಲೇಯಿಂಗ್ 11 ಕಣಕ್ಕಿಳಿಸಿದ ಭಾರತ
Ind Vs Eng
ಪೃಥ್ವಿಶಂಕರ
|

Updated on:Jul 01, 2026 | 9:48 PM

Share

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಸೋತ ನಂತರ ಇದೀಗ ಟೀಂ ಇಂಡಿಯಾ ಮತ್ತೆ ಅಖಾಡಕ್ಕಿಳಿದಿದೆ. ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ಆರಂಭವಾಗಿದೆ. ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದಲ್ಲಿ ಮೊದಲ ಸರಣಿಯನ್ನು ಸೋತ ನಂತರ, ಭಾರತ ತಂಡವು ಈ ಪಂದ್ಯದಲ್ಲಿ ಮತ್ತೆ ಪುಟಿದೇಳಲು ನೋಡುತ್ತಿದೆ. ಈ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯರಂತಹ ಸ್ಟಾರ್ ಆಟಗಾರರಿಲ್ಲದೆ ಟೀಂ ಇಂಡಿಯಾ ಆಡುತ್ತಿದೆ. ಹೀಗಾಗಿ ಬಲಿಷ್ಠ ಇಂಗ್ಲೆಂಡ್ ವಿರುದ್ಧ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಭಾರತ ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಇಬ್ಬರು ಬೌಲರ್​ಗಳು ಆಡಲಿದ್ದಾರೆ. ಆದರೆ ಬ್ಯಾಟಿಂಗ್‌ ವಿಭಾಗದಲ್ಲಿ ಯಾವುದೇ ಬದಲಾವಣೆಯಾಗದಿರುವುದು ಟೀಂ ಇಂಡಿಯಾ ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸಿದೆ.

ವೈಭವ್​ಗೆ ಅವಕಾಶ ನೀಡಲಾಗಿಲ್ಲ

ಏಕೆಂದರೆ ಐರ್ಲೆಂಡ್ ವಿರುದ್ಧವೇ ವೈಭವ್ ಸೂರ್ಯವಂಶಿಯ ಪಾದಾರ್ಪಣೆಗೆ ಅವಕಾಶ ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಲ್ಲಿ ಅವರಿಗೆ ಆಡುವ ಅವಕಾಶ ಸಿಗಲಿಲ್ಲ. ಹೀಗಾಗಿ ಇಂಗ್ಲೆಂಡ್‌ ನೆಲದಲ್ಲಿ ವೈಭವ್ ಚೊಚ್ಚಲ ಪಂದ್ಯವನ್ನಾಡಬಹುದು ಎಂದು ನಂಬಲಾಗಿತ್ತು. ಆದರೆ ಸರಣಿಯ ಮೊದಲ ಪಂದ್ಯದಲ್ಲಿ ವೈಭವ್​ಗೆ ಅವಕಾಶ ನೀಡಲಾಗಿಲ್ಲ. ಹೀಗಾಗಿ ಐರ್ಲೆಂಡ್ ವಿರುದ್ಧ ಯಾವ ಬ್ಯಾಟಿಂಗ್‌ ವಿಭಾಗ ಆಡಿತ್ತೋ ಅದೇ ಬ್ಯಾಟಿಂಗ್‌ ವಿಭಾಗ ಇಂಗ್ಲೆಂಡ್‌ ವಿರುದ್ಧ ರನ್ ಕಲೆಹಾಕಲಿದೆ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮತ್ತು ವರುಣ್ ಚಕ್ರವರ್ತಿ.

ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆದಿಲ್ ರಶೀದ್, ಲ್ಯೂಕ್ ವುಡ್ ಮತ್ತು ಸಾಕಿಬ್ ಮಹಮೂದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Wed, 1 July 26

Follow Us
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ