
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯ ಇಂದು ನಡೆಯುತ್ತಿದೆ. ಈಗಾಗಲೇ ಸರಣಿ ಸೋತಿರುವ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಕ್ಲೀನ್ ಸ್ವೀಪ್ ತಪ್ಪಿಸಲು ಪ್ರಯತ್ನಿಸಲಿದೆ. ಇತ್ತ ಆತಿಥೇಯ ಇಂಗ್ಲೆಂಡ್ ಕೊನೆಯ ಪಂದ್ಯವನ್ನು ಗೆದ್ದು ಸರಣಿಗೆ ಅಂತ್ಯ ಹಾಡಲು ಯತ್ನಿಸಲಿದೆ. ಟೀಂ ಇಂಡಿಯಾ ಒಂದು ವೇಳೆ ಈ ಪಂದ್ಯವನ್ನು ಸೋತರೆ ಟಿ20 ರ್ಯಾಂಕಿಂಗ್ನಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ಅಲ್ಲದೆ ಸರಣಿಯನ್ನು ಒಂದು ಪಂದ್ಯವನ್ನಾದರೂ ಗೆದ್ದು ಪ್ರವಾಸಕ್ಕೆ ಅಂತ್ಯಹಾಡುವ ಇರಾದೆಯಲ್ಲಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲಿದೆ. ವಾಸ್ತವವಾಗಿ ಶ್ರೇಯಸ್ ಅಯ್ಯರ್ ನಾಯಕನಾಗಿ ಸತತ 5ನೇ ಪಂದ್ಯದಲ್ಲೂ ಟಾಸ್ ಗೆದ್ದಿದ್ದಾರೆ. ಆದರೆ ಟಾಸ್ ಗೆದ್ದವರು ಪಂದ್ಯ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇದೀಗ ಈ ಪಂದ್ಯದಲ್ಲೂ ಶ್ರೇಯಸ್ ಟಾಸ್ ಗೆದ್ದಿದ್ದು ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಇನ್ನು ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆಡಿದ ಮೂರು ಪಂದ್ಯಗಳಲ್ಲಿ ನಿರಸ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿಯವರನ್ನು ಈ ಪಂದ್ಯದಿಂದ ಹೊರಗಿಡಲಾಗಿದೆ. ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ಗೆ ಮತ್ತೆ ಅವಕಾಶ ನೀಡಲಾಗಿದೆ. ಹಾಗೆಯೇ ವಾಷಿಂಗ್ಟನ್ ಸುಂದರ್ ಅವರನ್ನು ಈ ಪಂದ್ಯದಿಂದ ಹೊರಗಿಟ್ಟು, ಸೂರ್ಯಾಂಶ್ ಶೆಡ್ಗೆ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಈ ಮೈದಾನದಲ್ಲಿ ಟೀಂ ಇಂಡಿಯಾ ಇದುವರೆಗೆ ಒಂದೇ ಒಂದು ಟಿ20 ಪಂದ್ಯವನ್ನು ಆಡಿದೆ. ಈ ಪಂದ್ಯವನ್ನು 2022 ರಲ್ಲಿ ಆಡಲಾಗಿದ್ದು, ಭಾರತ ತಂಡವು ಇಂಗ್ಲೆಂಡ್ ತಂಡವನ್ನು 50 ರನ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 198 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಇಂಗ್ಲೆಂಡ್ 148 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಬಾರಿಯೂ ಟೀಂ ಇಂಡಿಯಾದಿಂದ ಇದೇ ರೀತಿಯ ಪ್ರದರ್ಶನವನ್ನು ಭಾರತೀಯ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
IND vs ENG: 14 ವರ್ಷಗಳ ನಂತರ ಭಾರತದ ವಿರುದ್ಧ ಟಿ20 ಸರಣಿ ಗೆದ್ದ ಇಂಗ್ಲೆಂಡ್
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಸೂರ್ಯಾಂಶ್ ಶೆಡ್ಗೆ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ಧ್ ಕೃಷ್ಣ.
ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್ (ರೆಹಾನ್ ಅಹ್ಮದ್ ಬದಲಿಗೆ), ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಜೋಶ್ ಟಂಗ್.
Published On - 7:27 pm, Sat, 11 July 26