AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಸೆಮೀಸ್ ಕಾಳಗಕ್ಕೆ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ ಭಾರತ

India vs England T20 World Cup 2026 Semi-Final: 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಆತಿಥೇಯ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಇದು ಉಭಯ ತಂಡಗಳ ನಡುವಿನ ಮೂರನೇ ಸೆಮಿಫೈನಲ್ ಹಣಾಹಣಿಯಾಗಿದ್ದು, ಈ ಪಂದ್ಯದಲ್ಲಿ ಗೆದ್ದವರು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದಾರೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಬಲಿಷ್ಠ ಭಾರತೀಯ ತಂಡವು ಗೆಲುವಿನ ನೆಚ್ಚಿನ ತಂಡವಾಗಿದೆ, ಇತಿಹಾಸ ಮತ್ತು ತವರು ನೆಲದ ಅನುಕೂಲವನ್ನು ಹೊಂದಿದೆ.

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಸೆಮೀಸ್ ಕಾಳಗಕ್ಕೆ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ ಭಾರತ
Ind Vs Eng Toss
ಪೃಥ್ವಿಶಂಕರ
|

Updated on:Mar 05, 2026 | 6:46 PM

Share

2026 ರ ಐಸಿಸಿ ಟಿ20 ವಿಶ್ವಕಪ್‌ನ (T20 World Cup 2026 semi-final) ಎರಡನೇ ಸೆಮಿಫೈನಲ್‌ನಲ್ಲಿ ಆತಿಥೇಯ ಮತ್ತು ಹಾಲಿ ಚಾಂಪಿಯನ್ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡ ಎದುರಾಳಿಯಾಗಲಿದೆ. ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಇದಕ್ಕೂ ಮೊದಲು ನಡೆದಿದ್ದ ಎರಡು ಮುಖಾಮುಖಿಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ 2-1 ಅಂತರದ ಮುನ್ನಡೆ ಸಾಧಿಸಿ ಫೈನಲ್ ತಲುಪುತ್ತದೆ.

ಟಾಸ್ ಗೆದ್ದ ಇಂಗ್ಲೆಂಡ್

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಈ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ನಾಯಕ ಹ್ಯಾರಿ ಬ್ರೂಕ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ತಂಡದಲ್ಲಿ ಒಂದು ಬದಲಾವಣೆಯನ್ನು ಸಹ ಮಾಡಿದ್ದಾರೆ. ಇತ್ತ ಟಾಸ್ ಸೋತು ಮಾತನಾಡಿದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಟಾಸ್ ಗೆದ್ದಿದ್ದರೆ, ನಾವು ಕೂಡ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡುತ್ತಿದ್ದೇವು ಎಂದಿದ್ದಾರೆ. ಅಂದರೆ ಟಾಸ್ ಸೋತರೂ ಭಾರತ ತಂಡಕ್ಕೆ ಬೇಕಾಗಿದ್ದೆ ಸಿಕ್ಕಿದೆ. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿ ಟೀಂ ಇಂಡಿಯಾ ಎಷ್ಟು ರನ್ ಕಲೆಹಾಕುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಅಂದಹಾಗೆ ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಮುಖಾಮುಖಿ ದಾಖಲೆ

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಉಭಯ ತಂಡಗಳ ಮುಖಾಮುಖಿ ದಾಖಲೆ ನೋಡುವುದಾದರೆ.. ಭಾರತ ಇಂಗ್ಲೆಂಡ್‌ ವಿರುದ್ಧ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದೆ. ಇದುವರೆಗೆ ಎರಡು ತಂಡಗಳ ನಡುವೆ ನಡೆದಿರುವ 17 ಪಂದ್ಯಗಳಲ್ಲಿ ಭಾರತ ಗೆದ್ದಿದ್ದರೆ, ಇಂಗ್ಲೆಂಡ್ 12 ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಏಳು ಮುಖಾಮುಖಿಯಲ್ಲಿ ಭಾರತ, ಇಂಗ್ಲೆಂಡ್‌ ತಂಡವನ್ನು ತವರಿನಲ್ಲಿ ಆರು ಬಾರಿ ಸೋಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.

IND vs ENG, T20 Semi Final Live Score: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಮೀ ಓವರ್ಟನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Thu, 5 March 26

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು