AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಟೀಮ್ ಇಂಡಿಯಾ

India vs England: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಟೀಮ್ ಇಂಡಿಯಾ
India vs England
TV9 Web
| Edited By: |

Updated on:Sep 30, 2023 | 2:48 PM

Share

ಏಕದಿನ ವಿಶ್ವಕಪ್​ನ ನಾಲ್ಕನೇ ಅಭ್ಯಾಸ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಆದರೆ ಗುವಾಹಟಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ ಪಂದ್ಯ ಇನ್ನೂ ಕೂಡ ಪ್ರಾರಂಭವಾಗಿಲ್ಲ.

ಉಭಯ ತಂಡಗಳಿಗೂ ಇದು ಮೊದಲ ಅಭ್ಯಾಸ ಪಂದ್ಯವಾಗಿದ್ದು, ಏಕದಿನ ವಿಶ್ವಕಪ್​ನ ಅಸಲಿ ಆಟ ಶುರುವಾಗುವ ಮುನ್ನವೇ ಮೇಲುಗೈ ಸಾಧಿಸಲು ಎರಡೂ ತಂಡಗಳು ಭರ್ಜರಿ ಪ್ಲ್ಯಾನ್ ರೂಪಿಸಿದೆ. ಏಕೆಂದರೆ ಅಕ್ಟೋಬರ್ 29 ರಂದು ನಡೆಯಲಿರುವ ವಿಶ್ವಕಪ್ ಪೈಪೋಟಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಎದುರಾಳಿ ತಂಡದ ತಂತ್ರಗಳಿಗೆ ಪ್ರತಿತಂತ್ರಗಳನ್ನು ಹೂಡಲು ಉಭಯ ತಂಡಗಳಿಗೆ ಇದು ಉತ್ತಮ ಅವಕಾಶ ಎನ್ನಬಹುದು.

ಪ್ಲೇಯಿಂಗ್ ಇಲೆವೆನ್ ಇಲ್ಲ:

ಇನ್ನು ಅಭ್ಯಾಸ ಪಂದ್ಯಗಳಲ್ಲಿ ಪ್ಲೇಯಿಂಗ್ ಇಲೆವೆನ್ ಇರುವುದಿಲ್ಲ. ಇಲ್ಲಿ ತಂಡದಲ್ಲಿರುವ 15 ಆಟಗಾರರಿಗೂ ಕಣಕ್ಕಿಳಿಯುವ ಅವಕಾಶ ದೊರೆಯಲಿದೆ. ಅಂದರೆ ಬ್ಯಾಟಿಂಗ್ ಮಾಡುವಾಗ ತನ್ನೆಲ್ಲಾ ಬ್ಯಾಟರ್​ಗಳನ್ನು ಕಣಕ್ಕಿಳಿಸಿ ಪ್ರಯೋಗ ನಡೆಸಲಾಗುತ್ತದೆ. ಅದೇ ಬೌಲಿಂಗ್ ವೇಳೆ ಹೆಚ್ಚಿನ ಬೌಲರ್​ಗಳಿಗೆ ತಂಡದಲ್ಲಿ ಅವಕಾಶ ನೀಡಬಹುದು.

ಹಾಗೆಯೇ ಯಾವುದೇ ಸಮಯದಲ್ಲೂ ಬೇಕಿದ್ದರೂ ಬ್ಯಾಟರ್​ಗಳು ನಿವೃತ್ತಿ ಘೋಷಿಸಿ ಉಳಿದ ಬ್ಯಾಟ್ಸ್​ಮನ್​ಗಳಿಗೆ ಆಡಲು ಅವಕಾಶ ನೀಡಬಹುದಾಗಿದೆ. ಹೀಗಾಗಿಯೇ ಅಭ್ಯಾಸ ಪಂದ್ಯಗಳಲ್ಲಿ ಆಡುವ ಬಳಗವನ್ನು ಘೋಷಿಸಲಾಗುವುದಿಲ್ಲ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಇದನ್ನೂ ಓದಿ: ಈ ಸಲ ವಿಶ್ವಕಪ್ ನಮ್ದೆ​: ಟೀಮ್ ಇಂಡಿಯಾ ಅಭಿಮಾನಿಗಳ​ ಹೀಗೊಂದು ಲೆಕ್ಕಾಚಾರ

ಇಂಗ್ಲೆಂಡ್ ತಂಡ: ಡೇವಿಡ್ ಮಲಾನ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಬೆನ್ ಸ್ಟೋಕ್ಸ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಏಕದಿನ ವಿಶ್ವಕಪ್​ನ ಅಭ್ಯಾಸ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ಲೈವ್ ವೀಕ್ಷಿಸಬಹುದು. ಇದರ ಜೊತೆಗೆ ಡಿಸ್ನಿ ಹಾಟ್​ ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಪಂದ್ಯದ ನೇರ ಪ್ರಸಾರ ಇರಲಿದೆ.

ಏಕದಿನ ವಿಶ್ವಕಪ್​ ಯಾವಾಗ ಶುರು?

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:26 pm, Sat, 30 September 23

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ