India vs England: ಟೀಮ್ ಇಂಡಿಯಾದ ಈ ವೈಫಲ್ಯಕ್ಕೆ ಅತಿಯಾದ ಕ್ರಿಕೆಟ್ ಕಾರಣ: ಸಲ್ಮಾನ್ ಬಟ್

ಭಾರತ ತಂಡ ಅತಿಯಾಗಿ ಕ್ರಿಕೆಟ್‌ ಆಡುತ್ತಿರುವುದೇ ಈ ವೈಫಲ್ಯಕ್ಕೆ ಕಾರಣ. ಟೀಮ್ ಇಂಡಿಯಾ ತನ್ನ ಆಟಗಾರರನ್ನು ಪಂದ್ಯದಿಂದ ಪಂದ್ಯಕ್ಕೆ ಬದಲಾಯಿಸುವ ಅಗತ್ಯವಿದೆ ಎಂದು ಸಲ್ಮಾನ್ ಬಟ್ ಹೇಳಿದ್ದಾರೆ.

India vs England: ಟೀಮ್ ಇಂಡಿಯಾದ ಈ ವೈಫಲ್ಯಕ್ಕೆ ಅತಿಯಾದ ಕ್ರಿಕೆಟ್ ಕಾರಣ: ಸಲ್ಮಾನ್ ಬಟ್
Salman Butt and Team India
Follow us
TV9 Web
| Updated By: Vinay Bhat

Updated on: Aug 27, 2021 | 7:16 AM

ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ (India) ತಂಡ ಬ್ಯಾಟಿಂಗ್​ನಲ್ಲಿ ಮಾತ್ರವಲ್ಲದೆ ಬೌಲಿಂಗ್ ವಿಭಾಗದಲ್ಲೂ ವೈಫಲ್ಯ ಅನುಭವಿಸಿದೆ. ಆಂಗ್ಲರ ಮೊತ್ತ 400ರ ಗಡಿ ದಾಟಿದರೂ ಆಲೌಟ್ ಮಾಡುವಲ್ಲಿ ಕೊಹ್ಲಿ (Virat Kohli) ಪಡೆ ವಿಫಲವಾಗಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ನಾಯಕ ಜೋ ರೂಟ್ (Hoe Root) ಅವರ ಆಕರ್ಷಕ ಶತಕ ಹಾಗೂ ಡೇವಿಡ್ ಮಲನ್ ಅವರ ಅರ್ಧಶತಕದ ನೆರವಿನಿಂದ 129 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 423 ರನ್ ಗಳಿಸಿದೆ. ಜೊತೆಗೆ 345 ರನ್​ಗಳ ಬೃಹತ್ ಮುನ್ನಡೆಯಲ್ಲಿದೆ.

ಟೀಮ್ ಇಂಡಿಯಾದ ಪ್ರದರ್ಶನಕ್ಕೆ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ. ಅದರಲ್ಲೂ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 78 ರನ್​ಗೆ ಆಲೌಟ್ ಆಗಿದ್ದು ವಿರಾಟ್ ಪಡೆಯ ವೈಫಲ್ಯವನ್ನು ಎತ್ತಿ ತೋರಿಸುವಂತೆ ಮಾಡಿದೆ. ಇದರ ಬೆನ್ನಲ್ಲೆ ಸದ್ಯ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಸಲ್ಮಾನ್ ಬಟ್, ಭಾರತ ಈರೀತಿಯ ವೈಫಲ್ಯ ಅನುಭವಿಸಲು ಕಾರಣ ಏನು ಎಂಬುದನ್ನು ಬಹಿರಂಗ ಪಡಿಸಿದ್ದಾರೆ.

ಭಾರತ ತಂಡ ಅತಿಯಾಗಿ ಕ್ರಿಕೆಟ್‌ ಆಡುತ್ತಿರುವುದೇ ಈ ವೈಫಲ್ಯಕ್ಕೆ ಕಾರಣ. ಟೀಮ್ ಇಂಡಿಯಾ ತನ್ನ ಆಟಗಾರರನ್ನು ಪಂದ್ಯದಿಂದ ಪಂದ್ಯಕ್ಕೆ ಬದಲಾಯಿಸುವ ಅಗತ್ಯವಿದೆ ಎಂದು ಹೇಳಿರುವ ಬಟ್, ಬಿಡುವಿಲ್ಲದ ಕ್ರಿಕೆಟ್‌ನಿಂದಾಗಿ ಭಾರತ ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದು ಇವರ ಅಭಿಪ್ರಾಯ.

“ನೀವು ಎಷ್ಟೇ ವೃತ್ತಿಪರ ಹಾಗೂ ಅತ್ಯುತ್ತಮ ಆಟಗಾರನಾಗಿದ್ದರೂ ಕೂಡ ಅತಿಯಾದ ಕ್ರಿಕೆಟ್‌ ಆಡಿದ್ದಲ್ಲಿ, ಮಾನಸಿಕವಾಗಿ ಪಂದ್ಯಕ್ಕೆ ಸಜ್ಜಾಗುವುದು ಕಷ್ಟವಾಗುತ್ತದೆ. ನಿಮ್ಮ ಏಕಾಗ್ರತೆ ಕುಸಿದಲ್ಲಿ ವೈಫಲ್ಯ ಸಹಜವಾಗಿಯೇ ಎದುರಾಗುತ್ತದೆ. ಹೀಗಾಗಿ ಟೀಮ್ ಇಂಡಿಯಾ ತನ್ನ ಆಟಗಾರರನ್ನು ಪಂದ್ಯದಿಂದ ಪಂದ್ಯಕ್ಕೆ ಬದಲಾಯಿಸುವ ಅಗತ್ಯವಿದೆ. ಟೀಮ್ ಇಂಡಿಯಾದ ವೇಳಾಪಟ್ಟಿ ಬಿಗುವಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಟೂರ್ನಿಗಳನ್ನು ಆಡಲಿದೆ.”

“ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಫೈನಲ್‌ ಸಲುವಾಗಿ ಇಂಗ್ಲೆಂಡ್‌ ತಲುಪಿ ಈಗ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪೈಪೋಟಿ ನಡೆಸುತ್ತಿದೆ. ಈ ಸರಣಿ ನಂತರ ಯುಎಇನಲ್ಲಿ ಐಪಿಎಲ್‌ ಮತ್ತು ಟಿ20 ವಿಶ್ವಕಪ್‌ಗಳನ್ನು ಆಡಲಿದೆ. ಇದು ಆಟಗಾರರನ್ನು ಮಾನಸಿಕವಾಗಿ ದಣಿಯುವಂತೆ ಮಾಡುತ್ತಿದೆ. ಇತ್ತೀಚೆಗೆ ತನ್ನ ಎರಡನೇ ತಂಡವನ್ನು ಶ್ರೀಲಂಕಾಕ್ಕೂ ಕಳುಹಿಸಿತ್ತು. ಭಾರತ ತಂಡದ ಆಟಗಾರರ ಗುಣಮಟ್ಟದ ಬಗ್ಗೆ ಅನುಮಾನ ಬೇಡ. ಆದರೆ ಅತಿಯಾದ ಕ್ರಿಕೆಟ್‌ ಅವರ ಪ್ರದರ್ಶನ ಮಟ್ಟದ ಮೇಲೆ ಪ್ರಭಾವ ಬೀರುತ್ತಿದೆ ಎಂಬುದು ನನ್ನ ಅಭಿಪ್ರಾಯ ಎಂದು” ಎಂದು ಸಲ್ಮಾನ್‌ ಬಟ್‌ ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಹೇಳಿದ್ದಾರೆ.

ರೋಹಿತ್ ಶರ್ಮ ಬಿಟ್ಟ ಕ್ಯಾಚ್ ಕಷ್ಟಕರವಾಗೇನೂ ಇರಲಿಲ್ಲ, ಹಿಡಿಯಬಹುದಿತ್ತು ಅಂದರು ನೆಟ್ಟಿಗರು!

ಇಂಗ್ಲೆಂಡ್​ನ ಸರ್ವಕಾಲಿಕ ಶ್ರೇಷ್ಠ ‘ಲಾರ್ಡ್ ಟೆಡ್’ ತಮ್ಮ ಬದುಕಿನ ಇನ್ನಿಂಗ್ಸ್ ಅಂತ್ಯಗೊಳಿಸಿದರು

(India vs England Team India plays a lot of cricket and their schedule is completely crammed Salman Butt)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ