AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 1 ರನ್​ಗೆ 2 ವಿಕೆಟ್; ಪಾದಾರ್ಪಣೆ ಪಂದ್ಯದಲ್ಲಿ ಸೊನ್ನೆ ಸುತ್ತಿದ ಸುದರ್ಶನ್

India vs England Test: ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ 1 ರನ್ ಅಂತರದಲ್ಲಿ ಎರಡೆರಡು ಆಘಾತ ಎದುರಾಗಿದೆ. ರಾಹುಲ್ (42 ರನ್) ಮತ್ತು ಸುದರ್ಶನ್ (0 ರನ್) ವಿಕೆಟ್ ಒಪ್ಪಿಸಿದ್ದಾರೆ. ಸುದರ್ಶನ್ ಅವರ ಚೊಚ್ಚಲ ಟೆಸ್ಟ್ ನಿರಾಶಾದಾಯಕವಾಗಿದೆ.

IND vs ENG: 1 ರನ್​ಗೆ 2 ವಿಕೆಟ್; ಪಾದಾರ್ಪಣೆ ಪಂದ್ಯದಲ್ಲಿ ಸೊನ್ನೆ ಸುತ್ತಿದ ಸುದರ್ಶನ್
Sudarshan, Rahul
ಪೃಥ್ವಿಶಂಕರ
|

Updated on:Jun 20, 2025 | 6:09 PM

Share

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಟೀಂ ಇಂಡಿಯಾ ಭೋಜನ ವಿರಾಮದ ವೇಳೆಗೆ ಎರಡು ಬ್ಯಾಕ್ ಟು ಬ್ಯಾಕ್ ಆಘಾತ ಎದುರಿಸಿದೆ. ಉತ್ತಮ ಆರಂಭ ಪಡೆದಿದ್ದ ಟೀಂ ಇಂಡಿಯಾ ಕೇವಲ 1 ರನ್ ಅಂತರದಲ್ಲಿ 2 ವಿಕೆಟ್ ಕಳೆದುಕೊಂಡಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಆರಂಭಿಕ ರಾಹುಲ್ (KL Rahul) 42 ರನ್ ಬಾರಿಸಿ ಬ್ರೈಡನ್ ಕಾರ್ಸೆಗೆ ವಿಕೆಟ್ ಒಪ್ಪಿಸಿದರೆ, ಮೂರನೇ ಕ್ರಮಾಂಕದಲ್ಲಿ ಬಂದಿದ್ದ ಸಾಯಿ ಸುದರ್ಶನ್ (Sai Sudharsan) 4 ಎಸೆತಗಳಲ್ಲಿ ಯಾವುದೇ ರನ್ ಬಾರಿಸದೆ ಸೊನ್ನೆಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸುದರ್ಶನ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಸ್ಮರಣೀಯಗೊಳಿಸುವಲ್ಲಿ ವಿಫಲರಾಗಿದ್ದಾರೆ.

ರಾಹುಲ್- ಸುದರ್ಶನ್ ಔಟ್

ವಾಸ್ತವವಾಗಿ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಭಾರತ ತಂಡಕ್ಕೆ ಉತ್ತಮ ಆರಂಭ ನೀಡಿ ಮೊದಲ ವಿಕೆಟ್‌ಗೆ 91 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಆದರೆ ಕೆಎಲ್ ಅವರನ್ನು ಔಟ್ ಮಾಡುವ ಮೂಲಕ ಬ್ರೈಡನ್ ಕಾರ್ಸ್ ಈ ಪಾಲುದಾರಿಕೆಯನ್ನು ಮುರಿದರು. ಆರಂಭದಿಂದಲೂ ಉತ್ತಮವಾಗಿ ಬ್ಯಾಟ್ ಬೀಸಿದ ರಾಹುಲ್ 78 ಎಸೆತಗಳಲ್ಲಿ ಎಂಟು ಬೌಂಡರಿಗಳ ಸಹಾಯದಿಂದ 42 ರನ್ ಗಳಿಸಿ ಔಟಾದರು. ರಾಹುಲ್ ಔಟಾದ ನಂತರ, ಕ್ರೀಸ್‌ಗೆ ಬಂದ ಸುದರ್ಶನ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯದೆಯೇ ಔಟಾದರು. ಊಟದ ವಿರಾಮದ ವೇಳೆಗೆ ಭಾರತ ಎರಡು ವಿಕೆಟ್‌ಗಳಿಗೆ 92 ರನ್ ಗಳಿಸಿದೆ. ಪ್ರಸ್ತುತ ಯಶಸ್ವಿ ಜೈಸ್ವಾಲ್ 74 ಎಸೆತಗಳಲ್ಲಿ ಎಂಟು ಬೌಂಡರಿಗಳ ಸಹಾಯದಿಂದ 42 ರನ್ ಗಳಿಸಿ ಆಟವಾಡುತ್ತಿದ್ದಾರೆ. ಇಲ್ಲಿಯವರೆಗೆ, ಕಾರ್ಸ್ ಮತ್ತು ಸ್ಟೋಕ್ಸ್ ಇಂಗ್ಲೆಂಡ್ ಪರ ತಲಾ ಒಂದು ವಿಕೆಟ್ ಪಡೆದಿದ್ದಾರೆ.

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಭಾರತದ ಪರ ಸುದರ್ಶನ್ ಪಾದಾರ್ಪಣೆ, ಕರುಣ್​ಗೂ ಅವಕಾಶ

ಸುದರ್ಶನ್​ಗೆ ಅವಕಾಶ ನೀಡಲು ಕಾರಣವೇನು?

ವಾಸ್ತವವಾಗಿ ಸಾಯಿ ಸುದರ್ಶನ್ ಅವರಿಗೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹೆಚ್ಚಿನ ಅನುಭವವಿಲ್ಲ. ಆದರೆ ಇದರ ಹೊರತಾಗಿಯೂ ಅವರಿಗೆ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುವ ಅವಕಾಶ ನೀಡಲಾಗಿದೆ. ಇದಕ್ಕೆ ಕಾರಣ ಸುದರ್ಶನ್ ಚೆಂಡನ್ನು ತಡವಾಗಿ ಆಡುವುದರಲ್ಲಿ ನಿಸ್ಸೀಮರು ಹಾಗೆಯೇ ದೀರ್ಘ ಇನ್ನಿಂಗ್ಸ್‌ಗಳನ್ನು ಆಡುವುಲ್ಲಿ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ನೀಡಲಾಗಿದೆ. ಆದಾಗ್ಯೂ ಸುದರ್ಶನ್ ಮೊದಲ ಇನ್ನಿಂಗ್ಸ್​ನಲ್ಲಿ ನಿರಾಶೆ ಮೂಡಿಸಿದ್ದಾರೆ. ಸುದರ್ಶನ್ ಇಲ್ಲಿಯವರೆಗೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 7 ಶತಕಗಳನ್ನು ಬಾರಿಸಿದ್ದು 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಸುದರ್ಶನ್ ಆಯ್ಕೆಗೆ ಮತ್ತೊಂದು ಮುಖ್ಯ ಕಾರಣವೆಂದರೆ ಇತ್ತೀಚೆಗೆ ಮುಗಿದ ಐಪಿಎಲ್​ನಲ್ಲಿ ಅವರ ಪ್ರದರ್ಶನ. ಗುಜರಾತ್ ಪರ ಆರಂಭಿಕನಾಗಿ ಅಮೋಘ ಪ್ರದರ್ಶನ ನೀಡಿದ್ದ ಸುದರ್ಶನ್, ಟೂರ್ನಿಯಲ್ಲಿ 759 ರನ್ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Fri, 20 June 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ