IND vs ENG: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ

| Updated By: ಝಾಹಿರ್ ಯೂಸುಫ್

Updated on: Jan 07, 2024 | 7:59 AM

India vs England: ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡವನ್ನು (England) ಆಯ್ಕೆ ಮಾಡಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ.

IND vs ENG: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ
IND vs ENG
Follow us on

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. 5 ಪಂದ್ಯಗಳ ಈ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ (Team India) ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿ ಆಡಲಿದೆ. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
  2. ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  3. ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  4. ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  5. ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಇಂಗ್ಲೆಂಡ್ ತಂಡದ ಘೋಷಣೆ:

ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡವನ್ನು (England) ಆಯ್ಕೆ ಮಾಡಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ.

ಇನ್ನುಳಿದಂತೆ ತಂಡದಲ್ಲಿ ಸ್ಟಾರ್ ಆಟಗಾರರಾದ ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್ಸ್ಟೋವ್, ಜೋ ರೂಟ್, ಝಾಕ್ ಕ್ರಾಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಇಂಗ್ಲೆಂಡ್ ಟೆಸ್ಟ್​ ತಂಡ ಈ ಕೆಳಗಿನಂತಿದೆ.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಇದನ್ನೂ ಓದಿ: 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ

ಭಾರತ-ಅಫ್ಘಾನಿಸ್ತಾನ್ ಸರಣಿ ಯಾವಾಗ ಶುರು?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3 ಪಂದ್ಯಗಳ ಟಿ20 ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಮೊಹಾಲಿ ಆತಿಥ್ಯವಹಿಸಿದರೆ, 2ನೇ ಪಂದ್ಯ ಇಂದೋರ್​ನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಜರುಗಲಿದೆ. ಈ ಸರಣಿ ವೇಳಾಪಟ್ಟಿ ಈ ಕೆಳಗಿನಂತಿದೆ…

  1. ಜನವರಿ 11: ಮೊದಲ ಟಿ20 ಪಂದ್ಯ (ಮೊಹಾಲಿ)
  2. ಜನವರಿ 14: ಎರಡನೇ ಟಿ20 ಪಂದ್ಯ (ಇಂದೋರ್)
  3. ಜನವರಿ 17: ಮೂರನೇ ಟಿ20 ಪಂದ್ಯ (ಬೆಂಗಳೂರು)