AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

India vs England: ಭಾರತದ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗೆ ಉಭಯ ತಂಡಗಳನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ.

IND vs ENG: ಭಾರತದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ
Team India
TV9 Web
| Edited By: |

Updated on: Jan 18, 2024 | 7:13 AM

Share

ಭಾರತ ಮತ್ತು ಅಫ್ಘಾನಿಸ್ತಾನ್ (India vs Afghanistan) ನಡುವಣ ಟಿ20 ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ (Team India) 3-0 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಭಾರತ ತಂಡವು ಟೆಸ್ಟ್​ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಇದೇ ತಿಂಗಳ 25 ರಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇನ್ನು 2ನೇ ಪಂದ್ಯವು ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಜರುಗಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
  2. ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  3. ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  4. ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  5. ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಉಭಯ ತಂಡಗಳ ಘೋಷಣೆ:

ಭಾರತದ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗೆ ಉಭಯ ತಂಡಗಳನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಸ್ಟಾರ್ ಆಟಗಾರರಾದ ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್ಸ್ಟೋವ್, ಜೋ ರೂಟ್, ಝಾಕ್ ಕ್ರಾಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಆಯ್ಕೆಯಾಗಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಯುವ ಆಟಗಾರ ಧ್ರುವ್​ ಜುರೇಲ್ ಚೊಚ್ಚಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಸರಣಿಯಿಂದ ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ ಹಾಗೂ ಇಶಾನ್ ಕಿಶನ್ ಅವರನ್ನು ಕೈ ಬಿಡಲಾಗಿದೆ. ಬದಲಿಗೆ ಅವೇಶ್ ಖಾನ್, ಧ್ರುವ್ ಜುರೇಲ್ ಹಾಗೂ ಕುಲ್ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಇದನ್ನೂ ಓದಿ: 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ

ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್