India Vs England: ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಶುರು?

India Vs England Test Series: ಭಾರತದ ವಿರುದ್ಧದ ಟೆಸ್ಟ್ ಸರಣಿಗಾಗಿ ಈಗಾಗಲೇ ಇಂಗ್ಲೆಂಡ್ ತಂಡ ಹೈದರಾಬಾದ್​ಗೆ ಆಗಮಿಸಿದೆ. ಬೆನ್ ಸ್ಟೋಕ್ಸ್ ನಾಯಕತ್ವದ ಆಂಗ್ಲರ ಪಡೆಯನ್ನು ಎದುರಿಸಲು ಇತ್ತ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಸಜ್ಜಾಗಿದೆ. ಆದರೆ ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿರುವುದು ಭಾರತ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.

India Vs England: ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಶುರು?
India Vs England
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 24, 2024 | 8:48 AM

ಭಾರತ ಮತ್ತು ಇಂಗ್ಲೆಂಡ್ (India vs England) ಬಹುನಿರೀಕ್ಷಿತ ನಡುವಣ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನಾಳೆಯಿಂದ (ಜ.25) ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇದೀಗ ಮೊದಲ ಪಂದ್ಯದ ಸೆಷನ್ ಅನ್ನು ನಿಗದಿಪಡಿಸಲಾಗಿದ್ದು, ಅದರಂತೆ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ.

  • ಮೊದಲ ಸೆಷನ್ ​ಬೆಳಿಗ್ಗೆ 9.30 ರಿಂದ 11.30 ರವರೆಗೆ ನಡೆಯಲಿದೆ.
  • ಎರಡನೇ ಸೆಷನ್ ಮಧ್ಯಾಹ್ನ 12.10 ರಿಂದ ಆರಂಭವಾದರೆ, 2.10 ಕ್ಕೆ ಮುಗಿಯಲಿದೆ.
  • ಮೂರನೇ ಸೆಷನ್ ಮಧ್ಯಾಹ್ನ 2.30 ರಿಂದ 4.30 ರವರೆಗೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಪೋಟ್ಸ್​ 18 ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ.

ಲೈವ್ ಸ್ಟ್ರೀಮಿಂಗ್ ಆ್ಯಪ್ ಯಾವುದು?

ಜಿಯೋ ಸಿನಿಮಾ ಆ್ಯಪ್​ನಲ್ಲಿ ಈ ಟೆಸ್ಟ್ ಸಿರೀಸ್​ನ ಎಲ್ಲಾ ಮ್ಯಾಚ್​ಗಳನ್ನು ಉಚಿತವಾಗಿ ಲೈವ್​ ವೀಕ್ಷಿಸಬಹುದು.

ಭಾರತ ತಂಡ ಹೇಗಿದೆ?

ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ಮಾತ್ರ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಹಿರಿಯ ಆಟಗಾರರಿಗೆ ಮಣೆ ಹಾಕಿಲ್ಲ ಎಂಬುದು ವಿಶೇಷ. ಅಂದರೆ ಭಾರತ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಅವರನ್ನು ಮೊದಲೆರಡು ಪಂದ್ಯಗಳಿಂದ ಕೈ ಬಿಡಲಾಗಿದೆ. ಅಲ್ಲದೆ ತಂಡದಲ್ಲಿ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ.

ವಿರಾಟ್ ಕೊಹ್ಲಿ ಬದಲಿ ಆಟಗಾರ ಯಾರು?

ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಅವರು ತಂಡದಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿ ಆಟಗಾರನಾಗಿ ರಜತ್ ಪಾಟಿದಾರ್​ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಭಾರತ ಎ ತಂಡದ ಭಾಗವಾಗಿರುವ ರಜತ್ ಪಾಟಿದಾರ್ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ಮೊದಲ ಪಂದ್ಯ ಎಲ್ಲಿ? ಯಾವಾಗ ಶುರು?

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಹೈದಾರಾಬಾದ್​ನಲ್ಲಿ ನಡೆಯಲಿದೆ. ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ.

ಇದನ್ನೂ ಓದಿ: Rohit Sharma: 5 ಮ್ಯಾಚ್ 15 ಸಿಕ್ಸ್​: ಸೆಹ್ವಾಗ್ ದಾಖಲೆ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ

ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

Published On - 8:47 am, Wed, 24 January 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ