ಭಾರತ ಮತ್ತು ಇಂಗ್ಲೆಂಡ್ (India vs England) ಬಹುನಿರೀಕ್ಷಿತ ನಡುವಣ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನಾಳೆಯಿಂದ (ಜ.25) ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇದೀಗ ಮೊದಲ ಪಂದ್ಯದ ಸೆಷನ್ ಅನ್ನು ನಿಗದಿಪಡಿಸಲಾಗಿದ್ದು, ಅದರಂತೆ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ.
ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಪೋಟ್ಸ್ 18 ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ.
ಜಿಯೋ ಸಿನಿಮಾ ಆ್ಯಪ್ನಲ್ಲಿ ಈ ಟೆಸ್ಟ್ ಸಿರೀಸ್ನ ಎಲ್ಲಾ ಮ್ಯಾಚ್ಗಳನ್ನು ಉಚಿತವಾಗಿ ಲೈವ್ ವೀಕ್ಷಿಸಬಹುದು.
ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ಮಾತ್ರ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಹಿರಿಯ ಆಟಗಾರರಿಗೆ ಮಣೆ ಹಾಕಿಲ್ಲ ಎಂಬುದು ವಿಶೇಷ. ಅಂದರೆ ಭಾರತ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಅವರನ್ನು ಮೊದಲೆರಡು ಪಂದ್ಯಗಳಿಂದ ಕೈ ಬಿಡಲಾಗಿದೆ. ಅಲ್ಲದೆ ತಂಡದಲ್ಲಿ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ.
ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಅವರು ತಂಡದಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಭಾರತ ಎ ತಂಡದ ಭಾಗವಾಗಿರುವ ರಜತ್ ಪಾಟಿದಾರ್ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಹೈದಾರಾಬಾದ್ನಲ್ಲಿ ನಡೆಯಲಿದೆ. ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ.
ಇದನ್ನೂ ಓದಿ: Rohit Sharma: 5 ಮ್ಯಾಚ್ 15 ಸಿಕ್ಸ್: ಸೆಹ್ವಾಗ್ ದಾಖಲೆ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ
ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
Published On - 8:47 am, Wed, 24 January 24