India vs England: ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್​ ಯಾವಾಗ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್ ನಡುವೆ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 12ಕ್ಕೆ ಆರಂಭವಾಗಲಿದ್ದು ಆಗಸ್ಟ್ 16ರ ವರೆಗೆ ನಡೆಯಲಿದೆ. ಈ ಪಂದ್ಯವನ್ನು ಲಂಡನ್​ನ ಲಾರ್ಡ್ ಮೈದಾನದಲ್ಲಿ ಆಯೋಜಿಸಲಾಗಿದೆ.

India vs England: ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್​ ಯಾವಾಗ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ
IND vs ENG
Follow us
TV9 Web
| Updated By: Vinay Bhat

Updated on:Aug 09, 2021 | 7:24 AM

ನ್ಯಾಟಿಂಗ್​ಹ್ಯಾಮ್​ನ ಟ್ರೆಂಟ್​ಬ್ರಿಡ್ಜ್ ಮೈದಾನದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ (India vs England ) ನಡುವಣ ಮೊದಲ ಟೆಸ್ಟ್​ ಪಂದ್ಯ ಡ್ರಾನಲ್ಲಿ ಅಂತ್ಯಕಂಡಿದೆ. ಸುಲಭವಾಗಿ ಗೆಲುವು ಸಾಧಿಸಬಹುದಾಗಿದ್ದ ಟೀಮ್ ಇಂಡಿಯಾಕ್ಕೆ (Team India) ಮಳೆರಾಯ ಕೃಪೆ ತೋರಲಿಲ್ಲ. ಸತತವಾಗಿ ಸುರಿಯುತ್ತಲೇ ಇದ್ದ ಮಳೆಯಿಂದಾಗಿ ಒಂದೂ ಎಸೆತವಿಕ್ಕಲು ಸಾಧ್ಯವಾಗದೆ ಅಂತಿಮವಾಗಿ ಪಂದ್ಯ ಡ್ರಾಗೊಂಡಿತು. ಗೆದ್ದು 1-0 ಮುನ್ನಡೆ ಸಾಧಿಸುವ ಟೀಮ್‌ ಇಂಡಿಯಾದ ಕನಸೆಲ್ಲ ಮಳೆಯಲ್ಲಿ ಕೊಚ್ಚಿ ಹೋಯಿತು. ಇನ್ನೇನಿದ್ದರು ಎರಡನೇ ಟೆಸ್ಟ್​ ಮೇಲೆ ಕಣ್ಣಿಡಬೇಕಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವೆ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 12ಕ್ಕೆ ಆರಂಭವಾಗಲಿದ್ದು ಆಗಸ್ಟ್ 16ರ ವರೆಗೆ ನಡೆಯಲಿದೆ. ಈ ಪಂದ್ಯವನ್ನು ಲಂಡನ್​ನ ಲಾರ್ಡ್ ಮೈದಾನದಲ್ಲಿ ಆಯೋಜಿಸಲಾಗಿದೆ. ಇದಕೂಡ ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

ಮೊದಲ ಟೆಸ್ಟ್​ನಲ್ಲಿ ಭಾರತ ಬ್ಯಾಟಿಂಗ್ ವಿಭಾಗದಲ್ಲಿ ಸಾಕಷ್ಟು ತಪ್ಪು ಮಾಡಿತ್ತು. ಕೆ. ಎಲ್ ರಾಹುಲ್ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಬಿಟ್ಟರೆ ಉಳಿದ ಬ್ಯಾಟ್ಸ್​ಮನ್​ಗಳು ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅನುಮಾನವಾದರೂ ಲಯಕಂಡುಕೊಳ್ಳಬೇಕಿದೆ. ಪ್ರಮುಖವಾಗಿ ತಂಡದ ನಾಯಕನೇ ಫಾರ್ಮ್​ನಲ್ಲಿ ಇಲ್ಲದಿರುವುದು ಚಿಂತೆಗೀಡು ಮಾಡಿದೆ.

ಇನ್ನೂ ಬೌಲಿಂಗ್ ವಿಭಾಗದಲ್ಲಿ ಭಾರತ ಎರಡನೇ ಟೆಸ್ಟ್​ಗೆ ಮತ್ತೋರ್ವ ಸ್ಪಿನ್ನರ್ ಅನ್ನು ಸೇರಿಸಿಕೊಳ್ಳಬಹುದು. ಮೊಹಮ್ಮದ್ ಸಿರಾಜ್ ಬೌಲಿಂಗ್ ಅಷ್ಟೊಂದು ಪರಿಣಾಮಕಾರಿಯಾಗಿ ಗೋಚರಿಸಿಲ್ಲ. ಹೀಗಾಗಿ ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

ಮೊದಲ ಟೆಸ್ಟ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 65.4 ಓವರ್​ನಲ್ಲಿ 183 ರನ್​ಗೆ ಆಲೌಟ್ ಆಯಿತು. ನಾಯಕ ಜೋ ರೂಟ್ 64 ರನ್ ಗಳಿಸಿದರೆ ಭಾರತ ಪರ ಜಸ್​ಪ್ರೀತ್ ಬುಮ್ರಾ 4 ಹಾಗೂ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು. ಇತ್ತ ತನ್ನ ಮೊದಲ ಇನ್ನಿಂಗ್ಸ್​ ಆರಂಭಿಸಿದ ಭಾರತ ಕೆ. ಎಲ್ ರಾಹುಲ್ ಅವರ 84 ಹಾಗೂ ರವೀಂದ್ರ ಜಡೇಜಾ ಅವರ 56 ರನ್​ಗಳ ನೆರವಿನಿಂದ 278 ರನ್ ಬಾರಿಸಿತು.

95 ರನ್​ಗಳ ಹಿನ್ನಡಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ವಿಕೆಟ್ ಕಳೆದುಕೊಂಡು ಸಾಗಿತಾದರೂ ನಾಯಕ ರೂಟ್ ಶತಕ ಸಿಡಿಸಿ ಮತ್ತೆ ತಂಡಕ್ಕೆ ಆಸರೆಯಾದರು. 172 ಎಸೆತಗಳಲ್ಲಿ 109 ರನ್ ಗಳಿಸಿದ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಇಂಗ್ಲೆಂಡ್ 303 ರನ್ ಗಳಿಸಿ ಭಾರತಕ್ಕೆ 209 ರನ್​ಗಳ ಟಾರ್ಗೆಟ್ ನೀಡಿತು. ಭಾರತ ಪರ ಜಸ್​ಪ್ರೀತ್ ಬುಮ್ರಾ 5 ವಿಕೆಟ್ ಕಿತ್ತ ಸಾಧನೆ ಮಾಡಿದರು.

ಈ ಗುರಿ ಬೆನ್ನಟ್ಟಿದ ಭಾರತ ನಾಲ್ಕನೆ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 52 ರನ್ ಗಳಿಸಿತ್ತು. ರೋಹಿತ್ ಶರ್ಮಾ ಹಾಗೂ ಚೇತೇಶ್ವರ್ ಪೂಜಾರ ತಲಾ 12 ರನ್ ಗಳಿಸಿ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಭಾರತದ ಗೆಲುವಿಗೆ 157 ರನ್​ಗಳ ಅವಶ್ಯಕತೆಯಿತ್ತು. ಆದರೆ, ಎಡಬಿಡದೆ ಸುರಿದ ಮಳೆಯು ಮೊದಲ ಟೆಸ್ಟ್ ನಲ್ಲಿ ಭಾರತದ ಕೈಯಿಂದ ಗೆಲುವನ್ನು ಕಸಿದುಕೊಂಡಿತು. ಒಂದೂ ಎಸೆತ ಕಾಣದೆ ರದ್ದಾದ ಕಾರಣ ಉಭಯ ತಂಡಗಳು ತಲಾ 4 ಅಂಕವನ್ನು ಹಂಚಿಕೊಂಡಿವೆ.

Test Championship: ಮಳೆಯಿಂದ ಮೊದಲ ಟೆಸ್ಟ್ ಡ್ರಾದಲ್ಲಿ ಅಂತ್ಯ; ತಲಾ 4 ಪಾಯಿಂಟ್ ಪಡೆದ ಉಭಯ ದೇಶಗಳು

ಒಲಿಂಪಿಕ್ಸ್​ನಲ್ಲಿ ಶೂನ್ಯ ಸಾಧನೆ; ಬದುಕು ನೀಡಿದ ತನ್ನ ದೇಶವನ್ನೇ ಗೇಲಿ ಮಾಡಿದ ಪಾಕಿಸ್ತಾನದ ಮಾಧ್ಯಮಗಳು! ಹಳೆಯ ವಿಡಿಯೋ ಈಗ ವೈರಲ್

(India vs England When and Where will the India vs England 2nd Test be played)

Published On - 7:24 am, Mon, 9 August 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ