ಇಂದು ಭಾರತ- ಇಂಗ್ಲೆಂಡ್ ಮುಖಾಮುಖಿ; ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್ನಲ್ಲಿ ನೇರಪ್ರಸಾರ? ಇಲ್ಲಿದೆ ಮಾಹಿತಿ
India vs England World Cup Warm-up match: ಇಂದು ಅಂದರೆ ಸೆಪ್ಟೆಂಬರ್ 30 ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಮೊದಲ ಅಭ್ಯಾಸ ಪಂದ್ಯ ನಡೆಯಲ್ಲಿದೆ. ಈ ಅಭ್ಯಾಸ ಪಂದ್ಯಕ್ಕಾಗಿ ಉಭಯ ತಂಡದ ಆಟಗಾರರು ಈಗಾಗಲೇ ಗುವಾಹಟಿ ತಲುಪಿದ್ದಾರೆ.
ವಿಶ್ವಕಪ್ನ (ODI World Cup 2023) ಎರಡನೇ ದಿನದ ಅಭ್ಯಾಸದ ಪಂದ್ಯದಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗುತ್ತಿವೆ. ನಿನ್ನೆಯಿಂದ ಆರಂಭವಾಗಿರುವ ಈ ಅಭ್ಯಾಸ ಪಂದ್ಯಗಳಲ್ಲಿ ಮೊದಲ ದಿನ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ (New Zealand, Bangladesh) ಗೆಲುವಿನೊಂದಿಗೆ ತಮ್ಮ ಪ್ರಯಾಣವನ್ನು ಆರಂಭಿಸಿದರೆ, ಇತ್ತ ಪಾಕಿಸ್ತಾನ ಹಾಗೂ ಶ್ರೀಲಂಕಾ ಸೋಲಿನೊಂದಿಗೆ ತಮ್ಮ ಪ್ರಯಾಣವನ್ನು ಆರಂಭಿಸಿವೆ. ಇಂದು ಅಂದರೆ ಸೆಪ್ಟೆಂಬರ್ 30 ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಮೊದಲ ಅಭ್ಯಾಸ ಪಂದ್ಯ ನಡೆಯಲ್ಲಿದೆ. ಈ ಅಭ್ಯಾಸ ಪಂದ್ಯಕ್ಕಾಗಿ ಉಭಯ ತಂಡದ ಆಟಗಾರರು ಈಗಾಗಲೇ ಗುವಾಹಟಿ ತಲುಪಿದ್ದಾರೆ.
ಇನ್ನು ಇಂದು ತನ್ನ ಮೊದಲ ಅಭ್ಯಾಸ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾ, ನೆದರ್ಲ್ಯಾಂಡ್ಸ್ ವಿರುದ್ಧ ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ತನ್ನ ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಆ ನಂತರ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮೂಲಕ ರೋಹಿತ್ ಪಡೆ ತನ್ನ ವಿಶ್ವಕಪ್ ಪ್ರಯಾಣವನ್ನು ಆರಂಭಿಸಲಿದೆ.
ಬೃಹತ್ ಟಾರ್ಗೆಟ್ ನೀಡಿಯೂ ಸೋತ ಪಾಕಿಸ್ತಾನ; ಸೋಲಿನೊಂದಿಗೆ ವಿಶ್ವಕಪ್ ಪ್ರಯಾಣ ಆರಂಭ..!
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯ ಯಾವಾಗ ನಡೆಯಲ್ಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯ ಸೆಪ್ಟೆಂಬರ್ 30 ರಂದು ನಡೆಯಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯ ಎಲ್ಲಿ ನಡೆಯಲ್ಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ 1:30 ಕ್ಕೆ ನಡೆಯಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಸ್ಟಾರ್ ಸ್ಫೋಟ್ರ್ಸ್ ನೆಟ್ವರ್ಕ್ನ ವಿವಿಧ ಚಾನೆಲ್ಗಳಲ್ಲಿ ವೀಕ್ಷಿಸಬಹುದಾಗಿದೆ. ಇದಲ್ಲದೆ ಹಾಟ್‌ಸ್ಟಾರ್ ಆ್ಯಪ್‌ನಲ್ಲಿಯೂ ನೀವು ಲೈವ್ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತೀಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ