AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೊದಲ ಟೆಸ್ಟ್‌ನಲ್ಲಿ 4 ಕ್ಯಾಚ್ ಕೈಚೆಲ್ಲಿದ ಯಶಸ್ವಿ ಜೈಸ್ವಾಲ್​ಗೆ ಬಿಗ್ ರಿಲೀಫ್

Yashasvi Jaiswal Dropped From Slip Fielding: ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಲ್ಕು ಕ್ಯಾಚ್‌ಗಳನ್ನು ಕೈಬಿಟ್ಟ ಯಶಸ್ವಿ ಜೈಸ್ವಾಲ್ ಅವರನ್ನು ಎರಡನೇ ಟೆಸ್ಟ್ ಪಂದ್ಯದ ಸ್ಲಿಪ್ ಫೀಲ್ಡಿಂಗ್‌ನಿಂದ ತೆಗೆದುಹಾಕಲಾಗಿದೆ. ಸಾಯಿ ಸುದರ್ಶನ್ ಅಥವಾ ಕರುಣ್ ನಾಯರ್ ಅವರು ಅವರ ಸ್ಥಾನವನ್ನು ತುಂಬುವ ಸಾಧ್ಯತೆಯಿದೆ. ಜೈಸ್ವಾಲ್ ಅವರಿಗೆ ಫ್ಲಾಟ್ ಕ್ಯಾಚ್ ಅಭ್ಯಾಸ ನೀಡಲಾಗುತ್ತಿದೆ, ಇದರಿಂದ ಅವರು ಶಾರ್ಟ್ ಲೆಗ್ ಅಥವಾ ಸಿಲ್ಲಿ ಪಾಯಿಂಟ್‌ನಲ್ಲಿ ಫೀಲ್ಡಿಂಗ್ ಮಾಡಬಹುದು.

IND vs ENG: ಮೊದಲ ಟೆಸ್ಟ್‌ನಲ್ಲಿ 4 ಕ್ಯಾಚ್ ಕೈಚೆಲ್ಲಿದ ಯಶಸ್ವಿ ಜೈಸ್ವಾಲ್​ಗೆ ಬಿಗ್ ರಿಲೀಫ್
Yashasvi Jaiswal
ಪೃಥ್ವಿಶಂಕರ
|

Updated on: Jun 30, 2025 | 6:55 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಇದೇ ಜುಲೈ 2 ರಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಯಶಸ್ವಿ ಜೈಸ್ವಾಲ್​ಗೆ (Yashasvi Jaiswal) ಬಿಗ್ ರಿಲೀಪ್ ಸಿಕ್ಕಿದೆ. ವಾಸ್ತವವಾಗಿ, ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಲಿಪ್‌ನಲ್ಲಿ ಫೀಲ್ಡಿಂಗ್‌ ಮಾಡುವ ವೇಳೆ ಜೈಸ್ವಾಲ್ ಬರೋಬ್ಬರಿ 4 ಕ್ಯಾಚ್‌ಗಳನ್ನು ಕೈಚೆಲ್ಲಿದರು. ಇದು ಅವರ ಬ್ಯಾಟಿಂಗ್‌ ಮೇಲೂ ಪರಿಣಾಮ ಬೀರಿತ್ತು. ಹೀಗಾಗಿ ಜೈಸ್ವಾಲ್ ಅವರ ಕ್ಯಾಚ್ ಡ್ರಾಪ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಂಡಿರುವ ಆಡಳಿತ ಮಂಡಳಿ, ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜೈಸ್ವಾಲ್​ರನ್ನು ಸ್ಲಿಪ್‌ನಲ್ಲಿ ಫೀಲ್ಡಿಂಗ್​ಗೆ ನಿಲ್ಲಿಸದಿರಲು ತೀರ್ಮಾನಿಸಿದೆ.

ಎಡ್ಜ್‌ಬಾಸ್ಟನ್‌ನಿಂದ ಕೇಳಿಬಂದಿರುವ ವರದಿಗಳ ಪ್ರಕಾರ, ಯಶಸ್ವಿ ಜೈಸ್ವಾಲ್ ಬದಲಿಗೆ ಮತ್ತೊಬ್ಬ ಯುವ ಆಟಗಾರ ಸಾಯಿ ಸುದರ್ಶನ್ ಅವರನ್ನು ಸ್ಲಿಪ್​ನಲ್ಲಿ ಫೀಲ್ಡಿಂಗ್​ಗೆ ನಿಲ್ಲಿಸಬಹುದು. ಮೇಲೆ ಹೇಳಿದಂತೆ ಯಶಸ್ವಿ ಜೈಸ್ವಾಲ್ ಮೊದಲ ಟೆಸ್ಟ್‌ನಲ್ಲಿ ಒಟ್ಟು 4 ಕ್ಯಾಚ್‌ಗಳನ್ನು ಕೈಬಿಟ್ಟಿದ್ದರು. ಇವುಗಳಲ್ಲಿ ಮೂರು ಕ್ಯಾಚ್‌ಗಳನ್ನು ಜೈಸ್ವಾಲ್ ವಿಕೆಟ್ ಹಿಂದೆಯೇ ಕೈಬಿಟ್ಟಿದ್ದರು. ಫೀಲ್ಡಿಂಗ್ ಸ್ಥಾನವನ್ನು ಬದಲಾಯಿಸುವುದು ದೊಡ್ಡ ವಿಷಯವಲ್ಲದಿದ್ದರೂ, ಸಮಯ ಮತ್ತು ಈ ನಿರ್ಧಾರವನ್ನು ತೆಗೆದುಕೊಂಡ ರೀತಿ, ಜೈಸ್ವಾಲ್ ವಿರುದ್ಧ ಎಲ್ಲೋ ಕ್ರಮ ಎಂದು ಪರಿಗಣಿಸಲಾಗುತ್ತಿದೆ.

ಜೈಸ್ವಾಲ್ ಈಗ ಎಲ್ಲಿ ಫೀಲ್ಡಿಂಗ್ ಮಾಡುತ್ತಾರೆ?

ರೆವ್‌ಸ್ಪೋರ್ಟ್ಸ್ ವರದಿಯ ಪ್ರಕಾರ, ಯಶಸ್ವಿ ಜೈಸ್ವಾಲ್ ಇನ್ನು ಮುಂದೆ ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುವುದಿಲ್ಲ. ಅವರ ಸ್ಥಾನದಲ್ಲಿ ಸಾಯಿ ಸುದರ್ಶನ್, ಕರುಣ್ ನಾಯರ್ ಸ್ಲಿಪ್‌ನಲ್ಲಿರುತ್ತಾರೆ. ಮೊದಲ ಟೆಸ್ಟ್‌ನಲ್ಲಿ ಕರುಣ್ ನಾಯರ್ ಕೂಡ ಸ್ಲಿಪ್‌ನಲ್ಲಿದ್ದರು, ಆದರೆ ಎರಡನೇ ಟೆಸ್ಟ್‌ನಲ್ಲಿ ಸಾಯಿ ಸುದರ್ಶನ್ ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಸಾಯಿ ಸುದರ್ಶನ್ ಸೋಮವಾರ ಸ್ಲಿಪ್ ಕ್ಯಾಚಿಂಗ್ ಅಭ್ಯಾಸ ಮಾಡಿದರು. ಇವರಲ್ಲದೆ, ನಿತೀಶ್ ಕುಮಾರ್ ರೆಡ್ಡಿ ಮತ್ತು ಶುಭ್​ಮನ್ ಗಿಲ್ ಕೂಡ ಸ್ಲಿಪ್ ಕ್ಯಾಚಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂದಿತು.

ಕೆಎಲ್ ರಾಹುಲ್ ಕೂಡ ಸ್ಲಿಪ್ ಫೀಲ್ಡಿಂಗ್ ಅಭ್ಯಾಸ ಮಾಡಿದ್ದಾರೆ. ಮತ್ತೊಂದೆಡೆ, ಯಶಸ್ವಿ ಜೈಸ್ವಾಲ್ ಅವರಿಗೆ ಸಹಾಯಕ ತರಬೇತುದಾರರಾದ ರಯಾನ್ ಟೆನ್ ದೋಸ್ಕಾಥೆ ಮತ್ತು ಗೌತಮ್ ಗಂಭೀರ್ ಅವರು ಫೀಲ್ಡಿಂಗ್ ಅಭ್ಯಾಸವನ್ನು ನೀಡಿದರು. ಜೈಸ್ವಾಲ್ ಅವರಿಗೆ ಫ್ಲಾಟ್ ಕ್ಯಾಚ್ ಸೆಷನ್ ನೀಡಲಾಯಿತು, ಇದರಿಂದ ಅವರು ಶಾರ್ಟ್ ಲೆಗ್ ಅಥವಾ ಸಿಲ್ಲಿ ಪಾಯಿಂಟ್‌ನಲ್ಲಿ ಫೀಲ್ಡಿಂಗ್ ಮಾಡುವುದನ್ನು ಕಾಣಬಹುದು ಎಂದು ಊಹಿಸಲಾಗಿದೆ.

IND vs ENG: ಎರಡೇ ಎರಡು ಸಿಕ್ಸರ್; ನಾಲ್ವರು ದಿಗ್ಗಜ ಆಟಗಾರರನ್ನು ಹಿಂದಿಕ್ಕಲಿದ್ದಾರೆ ಜೈಸ್ವಾಲ್

ಜೈಸ್ವಾಲ್ ಕಳಪೆ ಫೀಲ್ಡಿಂಗ್ ಸೋಲಿಗೆ ಕಾರಣ

ಲೀಡ್ಸ್ ಟೆಸ್ಟ್ ಪಂದ್ಯದಲ್ಲಿ, ಜೈಸ್ವಾಲ್ ಮೊದಲ ಇನ್ನಿಂಗ್ಸ್‌ನಲ್ಲಿ ಓಲಿ ಪೋಪ್ ಅವರ ಕ್ಯಾಚ್ ಅನ್ನು ಕೈಬಿಟ್ಟರು. ಇದರ ಲಾಭ ಪಡೆದ ಪೋಪ್ ಶತಕ ಗಳಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ ಬೆನ್ ಡಕೆಟ್ ಅವರ ಕ್ಯಾಚ್ ಅನ್ನು ಜೈಸ್ವಾಲ್ ಕೈಬಿಟ್ಟರು. ಮೊದಲ ಇನ್ನಿಂಗ್ಸ್‌ನಲ್ಲಿ ಹ್ಯಾರಿ ಬ್ರೂಕ್ 99 ರನ್ ಗಳಿಸುವಲ್ಲಿ ಜೈಸ್ವಾಲ್ ಅವರ ಕ್ಯಾಚ್ ಡ್ರಾಪ್ ಪ್ರಮುಖ ಕಾರಣವಾಗಿತ್ತು. ಜೈಸ್ವಾಲ್ ಅವರ ಈ ಕಳಪೆ ಫೀಲ್ಡಿಂಗ್‌ನಿಂದಾಗಿ ಟೀಮ್ ಇಂಡಿಯಾ ಸಾಕಷ್ಟು ನಷ್ಟ ಅನುಭವಿಸಿತು, ಇದರ ಪರಿಣಾಮವಾಗಿ ಭಾರತ ಲೀಡ್ಸ್ ಟೆಸ್ಟ್‌ನಲ್ಲಿ ಸೋಲನುಭವಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ