AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಓವಲ್‌ನಲ್ಲಿ ತಮ್ಮ ಕುಟುಂಬದ ಮುಂದೆ ಇತಿಹಾಸ ಸೃಷ್ಟಿಸಿದ ಯಶಸ್ವಿ ಜೈಸ್ವಾಲ್

Yashasvi Jaiswal's Century: ಇಂಗ್ಲೆಂಡ್ ಪ್ರವಾಸದಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡಲು ಹೆಣಗಾಡುತ್ತಿದ್ದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಓವಲ್‌ನಲ್ಲಿ ನಡೆದ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತವಾದ ಶತಕ ಸಿಡಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ಎರಡು ರನ್‌ಗಳಿಗೆ ಔಟ್ ಆಗಿದ್ದ ಜೈಸ್ವಾಲ್, ತಮ್ಮ ಟೀಕಕಾರರಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಇದು ಅವರ ಟೆಸ್ಟ್ ವೃತ್ತಿಜೀವನದ ಆರನೇ ಶತಕವಾಗಿದೆ.

IND vs ENG: ಓವಲ್‌ನಲ್ಲಿ ತಮ್ಮ ಕುಟುಂಬದ ಮುಂದೆ ಇತಿಹಾಸ ಸೃಷ್ಟಿಸಿದ ಯಶಸ್ವಿ ಜೈಸ್ವಾಲ್
Yashasvi Jaiswal
ಪೃಥ್ವಿಶಂಕರ
|

Updated on:Aug 02, 2025 | 7:12 PM

Share

ಇಂಗ್ಲೆಂಡ್‌ ಪ್ರವಾಸದಲ್ಲಿ ಸ್ಥಿರನ ಪ್ರದರ್ಶನ ನೀಡುವಲ್ಲಿ ಎಡವಿದ್ದ ಟೀಂ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಕೊನೆಗೂ ತಂಡ ಸಂಕಷ್ಟದಲ್ಲಿದ್ದಾಗ ಅಮೋಘ ಇನ್ನಿಂಗ್ಸ್ ಆಡಿದ್ದಾರೆ. ಓವಲ್ ಟೆಸ್ಟ್​ನ (Oval Test) ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ ಒಂದಂಕಿಗೆ ಅಂದರೆ ಎರಡು ರನ್​ಗಳಿಗೆ ವಿಕೆಟ್ ಒಪ್ಪಿಸಿದ್ದ ಜೈಸ್ವಾಲ್, ಇದೀಗ ಎರಡನೇ ಇನ್ನಿಂಗ್ಸ್​ನಲ್ಲಿ ಮೂರಂಕಿಯ ಅಂದರೆ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ಟೀಕಕಾರರಿಗೆ ತಮ್ಮ ಬ್ಯಾಟಿಂಗ್ ಮೂಲಕವೇ ಉತ್ತರ ನೀಡಿದ್ದಾರೆ. ವಾಸ್ತವವಾಗಿ ಈ ಪ್ರವಾಸ ಆರಂಭವಾದ ಲೀಡ್ಸ್‌ ಟೆಸ್ಟ್​ನಲ್ಲಿ ಜೈಸ್ವಾಲ್ 101 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇದರ ನಂತರ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಜೈಸ್ವಾಲ್​ಗೆ ಶತಕದ ಇನ್ನಿಂಗ್ಸ್ ಆಡಲು ಸಾಧ್ಯವಾಗಿರಲಿಲ್ಲ. ಇದೀಗ ಜೈಸ್ವಾಲ್ 127 ಎಸೆತಗಳಲ್ಲಿ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಆರನೇ ಶತಕ ಪೂರೈಸಿದ್ದಾರೆ.

ಇಂಗ್ಲೆಂಡ್ ವಿರುದ್ಧವೇ 4 ಶತಕ

ಓವಲ್ ಕ್ರಿಕೆಟ್ ಮೈದಾನದಲ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ ಆರನೇ ಶತಕ ಬಾರಿಸಿರುವ ಜೈಸ್ವಾಲ್, ಈ ಪೈಕಿ ಇಂಗ್ಲೆಂಡ್ ವಿರುದ್ಧವೇ ನಾಲ್ಕು ಶತಕಗಳನ್ನು ಸಿಡಿಸಿದ್ದಾರೆ. ಇಂಗ್ಲೆಂಡ್ ಹೊರತುಪಡಿಸಿ ಆಸ್ಟ್ರೇಲಿಯಾ ವಿರುದ್ಧ ಒಂದು ಶತಕ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಒಂದು ಶತಕ ಬಾರಿಸಿದ್ದಾರೆ.

ಲೀಡ್ಸ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 101 ರನ್ ಬಾರಿಸಿದ್ದ ಜೈಸ್ವಾಲ್ ಎಡ್ಜ್‌ಬಾಸ್ಟನ್ ಮತ್ತು ಮ್ಯಾಂಚೆಸ್ಟರ್‌ನಲ್ಲಿ ಅರ್ಧಶತಕಗಳ ಇನ್ನಿಂಗ್ಸ್ ಆಡಿದ್ದರು. ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಯಶಸ್ವಿ 87 ರನ್ ಬಾರಿಸಿದರೆ, ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 58 ರನ್ ಬಾರಿಸದ್ದರು. ಇದನ್ನು ಹೊರತುಪಡಿಸಿ ಈ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

IND vs ENG: 51 ವರ್ಷಗಳ ಬಳಿಕ ಮ್ಯಾಂಚೆಸ್ಟರ್​ನಲ್ಲಿ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್

 ಸಚಿನ್, ಕೊಹ್ಲಿಯನ್ನು ಹಿಂದಿಕ್ಕಿದ ಜೈಸ್ವಾಲ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಆಟಗಾರರ ಪಟ್ಟಿಯಲ್ಲಿ ಇದೀಗ ಜೈಸ್ವಾಲ್ ದಿಗ್ಗಜರ ದಾಖಲೆ ಮುರಿದಿದ್ದಾರೆ. ಇದುವರೆಗೆ ಜೈಸ್ವಾಲ್ 2000 ಕ್ಕೂ ಹೆಚ್ಚು ರನ್ ಗಳಿಸಿದ್ದು, ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿಯೇ 2000 ರನ್‌ಗಳನ್ನು ಪೂರ್ಣಗೊಳಿಸಿದ ಜೈಸ್ವಾಲ್, ತಮ್ಮ ಟೆಸ್ಟ್ ಕ್ರಿಕೆಟ್‌ನ 40 ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆಯನ್ನು ಪೂರ್ಣಗೊಳಿಸಿದರು.

ಇದರೊಂದಿಗೆ, ಅವರು ಕನಿಷ್ಠ ಇನ್ನಿಂಗ್ಸ್‌ಗಳಲ್ಲಿ ಜಂಟಿಯಾಗಿ ಎರಡು ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಜೈಸ್ವಾಲ್​ಗೂ ಮೊದಲು, ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮತ್ತು ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದೇ ಸಂಖ್ಯೆಯ ಇನ್ನಿಂಗ್ಸ್‌ಗಳಲ್ಲಿ ಎರಡು ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದರು.

Published On - 6:55 pm, Sat, 2 August 25

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ