AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE 2nd T20 Match Live Streaming: ಸರಣಿ ಗೆಲ್ಲುವ ತವಕದಲ್ಲಿ ಭಾರತ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

Watch IND Vs IRE T20 Today Match Live: ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವತ್ತ ಕಣ್ಣಿಟ್ಟಿದೆ.

IND vs IRE 2nd T20 Match Live Streaming: ಸರಣಿ ಗೆಲ್ಲುವ ತವಕದಲ್ಲಿ ಭಾರತ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
IND vs IRE
TV9 Web
| Edited By: |

Updated on:Jun 27, 2022 | 5:37 PM

Share

ಮಂಗಳವಾರ ಭಾರತ ಮತ್ತು ಐರ್ಲೆಂಡ್ (India and Ireland) ನಡುವೆ ಎರಡನೇ ಮತ್ತು ಕೊನೆಯ ಟಿ20 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವತ್ತ ಕಣ್ಣಿಟ್ಟಿದೆ. ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸಿತ್ತು. ಈಗ ಪಾಂಡ್ಯ ಹೆಸರಿನಲ್ಲಿ ಹೊಸ ಸಾಧನೆ ಮಾಡುವ ಅವಕಾಶವಿದೆ. ಪಾಂಡ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸುತ್ತಿದ್ದು, ನಾಯಕನಾಗಿಯೂ ಮೊದಲ ಸರಣಿ ಗೆಲ್ಲಲು ಪ್ರಯತ್ನಿಸಲಿದ್ದಾರೆ. ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಅನೇಕ ಹೆಸರುಗಳಿಗೆ ಅವಕಾಶ ನೀಡಲಾಗಿದೆ. ಅವರು ಈ ಸರಣಿಯಲ್ಲಿ ತಮ್ಮನ್ನು ತಾವು ಸಾಬೀತುಪಡಿಸಿ T20 ವಿಶ್ವಕಪ್‌ಗಾಗಿ ತಮ್ಮ ಹಕ್ಕನ್ನು ಮಂಡಿಸಬಹುದು.

ಉಮ್ರಾನ್ ಮಲಿಕ್ ಮೊದಲ ಪಂದ್ಯದಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆದರು. ಆದರೆ, ಚೊಚ್ಚಲ ಪಂದ್ಯದಲ್ಲಿ ನಿರೀಕ್ಷೆಯಷ್ಟು ಅದ್ಭುತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಚೊಚ್ಚಲ ಪಂದ್ಯದಲ್ಲಿ, ಉಮ್ರಾನ್‌ಗೆ ಕೇವಲ ಒಂದು ಓವರ್ ಬೌಲ್ ಮಾಡುವ ಅವಕಾಶ ಸಿಕ್ಕಿತು. ಅದರಲ್ಲಿಯೂ ಅವರು ತುಂಬಾ ದುಬಾರಿ ಎಂದು ಸಾಬೀತುಪಡಿಸಿದರು. ಅಕ್ಸರ್ ಪಟೇಲ್ ಕೂಡ ಐರ್ಲೆಂಡ್ ವಿರುದ್ಧ ಅದ್ಭುತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಫೆಬ್ರುವರಿ ನಂತರ ಟೀಂ ಇಂಡಿಯಾಗೆ ಮರಳಿದ್ದ ಸೂರ್ಯಕುಮಾರ್ ಯಾದವ್ ಕೂಡ ಮೊದಲ ಟಿ20 ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾದರು. ಇಂತಹ ಪರಿಸ್ಥಿತಿಯಲ್ಲಿ ಈ ಆಟಗಾರರು ಎರಡನೇ ಪಂದ್ಯದಲ್ಲಿ ಫಾರ್ಮ್‌ಗೆ ಮರಳುವ ನಿರೀಕ್ಷೆಯಿದೆ.

ಇದನ್ನೂ ಓದಿ: IND vs IRE: ಐರ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ದಾಖಲೆ ನಿರ್ಮಿಸಲಿರುವ ಟೀಂ ಇಂಡಿಯಾದ 6 ಆಟಗಾರರಿವರು

ಇದನ್ನೂ ಓದಿ
Image
Virat Kohli: ಸಹ ಆಟಗಾರನನ್ನು ನಿಂಧಿಸಿದ ಭಾರತದ ಅಭಿಮಾನಿಗಳ ಬೆವರಿಳಿಸಿದ ಕಿಂಗ್ ಕೊಹ್ಲಿ; ವಿಡಿಯೋ ನೋಡಿ
Image
ENG vs IND: ಮಂಡಳಿಯ ಸಲಹೆ ತಿರಸ್ಕರಿಸಿದ ರೋಹಿತ್ ಶರ್ಮಾ ಮೇಲೆ ಕೆಂಡಕಾರಿದ ಬಿಸಿಸಿಐ..!
Image
IRE vs IND: ಪವರ್‌ಪ್ಲೇಯಲ್ಲಿ ಪವರ್​ಫುಲ್ ಬೌಲಿಂಗ್; ಟಿ20 ಕ್ರಿಕೆಟ್​ನಲ್ಲಿ ಭುವಿ ಈಗ ನಂ.1 ಬೌಲರ್..!

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ T20 ಅಂತಾರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಮಂಗಳವಾರ, ಜೂನ್ 28 ರಂದು ನಡೆಯಲಿದೆ.

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ T20 ಅಂತಾರಾಷ್ಟ್ರೀಯ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಮಲಾಹಿಡೆ ಡಬ್ಲಿನ್‌ನ ದಿ ವಿಲೇಜ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಯಾವಾಗ ಆರಂಭವಾಗಲಿದೆ?

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ರಾತ್ರಿ 8:30ಕ್ಕೆ ನಡೆಯಲಿದೆ.

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ T20 ಅಂತರಾಷ್ಟ್ರೀಯ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ 20 ಅಂತಾರಾಷ್ಟ್ರೀಯ ಪಂದ್ಯವನ್ನು ಸೋನಿ ಸಿಕ್ಸ್ ಮತ್ತು ಸೋನಿ ಸಿಕ್ಸ್ ಎಚ್‌ಡಿ ವೀಕ್ಷಿಸಬಹುದು.

ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ T20 ಅಂತರಾಷ್ಟ್ರೀಯ ಪಂದ್ಯವನ್ನು ಆನ್‌ಲೈನ್ ಲೈವ್ ಸ್ಟ್ರೀಮಿಂಗ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಚಂದಾದಾರಿಕೆಯೊಂದಿಗೆ ಸೋನಿ LIV ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9kannada.com ನಲ್ಲಿಯೂ ಓದಬಹುದು.

Published On - 5:37 pm, Mon, 27 June 22