IND vs IRE: 6 ಎಸೆತಗಳಲ್ಲಿ 6 ಸಿಕ್ಸರ್! ಐಪಿಎಲ್​ನಲ್ಲಿ 413 ರನ್ ಚಚ್ಚಿದ ಬ್ಯಾಟರ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ

| Updated By: ಪೃಥ್ವಿಶಂಕರ

Updated on: Jun 16, 2022 | 7:05 AM

IND vs IRE: ಐಪಿಎಲ್‌ನ ಈ ಸೀಸನ್​ನಲ್ಲಿ ರಾಹುಲ್ ಮುಂಬೈ ವಿರುದ್ಧ 44 ಎಸೆತಗಳಲ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅದೇ ಸಮಯದಲ್ಲಿ, ಅವರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 21 ಎಸೆತಗಳಲ್ಲಿ ಅರ್ಧಶತಕವನ್ನು ಗಳಿಸಿದ್ದರು.

IND vs IRE: 6 ಎಸೆತಗಳಲ್ಲಿ 6 ಸಿಕ್ಸರ್! ಐಪಿಎಲ್​ನಲ್ಲಿ 413 ರನ್ ಚಚ್ಚಿದ ಬ್ಯಾಟರ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ
Team India
Follow us on

ಐರ್ಲೆಂಡ್ ವಿರುದ್ಧದ 2 ಟಿ20 ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸಂಜು ಸ್ಯಾಮ್ಸನ್, ಸೂರ್ಯ ಕುಮಾರ್ ಯಾದವ್ (Sanju Samson, Surya Kumar Yadav) ತಂಡಕ್ಕೆ ಮರಳಿದ್ದಾರೆ. ಅದೇ ಸಮಯದಲ್ಲಿ, ಎರಡು ಬಾರಿ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್, ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. 31 ವರ್ಷದ ರಾಹುಲ್ ತ್ರಿಪಾಠಿ (Rahul Tripathi) ಐಪಿಎಲ್ (IPL) 2022 ರಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ ನಂತರ ಅವರನ್ನು ತಂಡದಲ್ಲಿ ಆಯ್ಕೆ ಮಾಡಲು ಆಯ್ಕೆದಾರರು ಮನಸ್ಸು ಮಾಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ಪರ ಆಡಿದ ರಾಹುಲ್ ಅದ್ಭುತ ಪ್ರದರ್ಶನ ತೋರಿದ್ದರು. ಇದಲ್ಲದೆ ತ್ರಿಪಾಠಿ ಎರಡು ಬಾರಿ ಒಂದು ಓವರ್‌ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ ಸಾಧನೆಯನ್ನು ಮಾಡಿದ್ದಾರೆ.

ಸ್ಥಳೀಯ ಪಂದ್ಯಾವಳಿಯಲ್ಲಿ ಎರಡು ಬಾರಿ ಓವರ್‌ನಲ್ಲಿ 6 ಸಿಕ್ಸರ್‌

ಇದನ್ನೂ ಓದಿ
IND vs IRE: ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಹಾರ್ದಿಕ್​ಗೆ ನಾಯಕತ್ವ! ಹೊಸಬರಿಗೆ ಅವಕಾಶ
ENG vs NZ: ಕಿವೀಸ್ ಮಣಿಸಿದ ಆಂಗ್ಲರಿಗೆ ದಂಡದ ಬರೆ ಎಳೆದ ಐಸಿಸಿ! ಬೆನ್ ಸ್ಟೋಕ್ಸ್ ಬಳಗಕ್ಕೆ ಗೆಲುವಿನಲ್ಲೂ ನಿರಾಸೆ
IND vs SA: 3ನೇ ಟಿ20 ಪಂದ್ಯದ ಗೆಲುವಿನೊಂದಿಗೆ ವೃತ್ತಿಜೀವನದ ವಿಶೇಷ ಶತಕ ಸಿಡಿಸಿದ ರಿಷಭ್ ಪಂತ್..!

ತ್ರಿಪಾಠಿ ಎರಡು ಬಾರಿ ಸ್ಥಳೀಯ ಟೂರ್ನಿಯಲ್ಲಿ ಒಂದೇ ಓವರ್‌ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಐಪಿಎಲ್‌ನ ಈ ಋತುವಿನಲ್ಲಿ ರಾಹುಲ್ ಸರಾಸರಿ 37.54 ಮತ್ತು ಸ್ಟ್ರೈಕ್ ರೇಟ್ 158.23 ರಲ್ಲಿ 413 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿಯಲ್ಲಿ ರಾಹುಲ್‌ಗೆ ಅವಕಾಶ ಸಿಗದಿದ್ದಾಗ ಹರ್ಭಜನ್ ಸಿಂಗ್ ಕೂಡ ಬೇಸರಗೊಂಡಿದ್ದರು. ಈ ಋತುವಿನ ಐಪಿಎಲ್‌ನಲ್ಲಿ ರಾಹುಲ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು. ಈ ಹಿಂದೆ ಅವರು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ನ ಭಾಗವಾಗಿದ್ದರು.

ಇದನ್ನೂ ಓದಿ:IND vs SA: 3ನೇ ಟಿ20 ಪಂದ್ಯದ ಗೆಲುವಿನೊಂದಿಗೆ ವೃತ್ತಿಜೀವನದ ವಿಶೇಷ ಶತಕ ಸಿಡಿಸಿದ ರಿಷಭ್ ಪಂತ್..!

21 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ರಾಹುಲ್

ಐಪಿಎಲ್‌ನ ಈ ಸೀಸನ್​ನಲ್ಲಿ ರಾಹುಲ್ ಮುಂಬೈ ವಿರುದ್ಧ 44 ಎಸೆತಗಳಲ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅದೇ ಸಮಯದಲ್ಲಿ, ಅವರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 21 ಎಸೆತಗಳಲ್ಲಿ ಅರ್ಧಶತಕವನ್ನು ಗಳಿಸಿದ್ದರು. ರಾಹುಲ್ ಐಪಿಎಲ್‌ನ ಈ ಸೀಸನ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅನ್‌ಕ್ಯಾಪ್ ಆಟಗಾರರಾಗಿದ್ದಾರೆ. ಕಳೆದ ಕೆಲ ಸೀಸನ್​ಗಳಿಂದ ರಾಹುಲ್ ಐಪಿಎಲ್‌ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇದಕ್ಕೆ ಪ್ರತಿಫಲ ಕೂಡ ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯ ನಾಯಕ

ಭಾರತ ಜೂನ್ 26 ಮತ್ತು 28 ರಂದು ಐರ್ಲೆಂಡ್ ವಿರುದ್ಧ 2 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಪಾಂಡ್ಯ ಇತ್ತೀಚೆಗೆ ತಮ್ಮ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಆಗಿದ್ದರು. ಅದೇ ಹೊತ್ತಿಗೆ ದಕ್ಷಿಣ ಆಫ್ರಿಕಾ ವಿರುದ್ಧದ 5 ಟಿ20 ಪಂದ್ಯಗಳ ಸರಣಿಯಲ್ಲಿ ಬ್ಯುಸಿಯಾಗಿರುವ ದಿನೇಶ್ ಕಾರ್ತಿಕ್ ಕೂಡ ಐರ್ಲೆಂಡ್ ವಿರುದ್ಧದ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ಭಾರತ ತಂಡ: ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್