IND vs IRE: ಟೀಂ ಇಂಡಿಯಾ ಪರ ಇಬ್ಬರ ಪಾದಾರ್ಪಣೆ; ವೈಭವ್​ಗೆ ಸಿಕ್ಕಿತಾ ಅವಕಾಶ?

India vs Ireland T20 2nd Match: ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿಯ 2ನೇ ಪಂದ್ಯದಲ್ಲಿ, ಮೊದಲ ಪಂದ್ಯ ಸೋತಿದ್ದ ಭಾರತ ಸರಣಿ ಸಮಬಲಗೊಳಿಸಲು ಯತ್ನಿಸುತ್ತಿದೆ. ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಬೌಲಿಂಗ್ ಆರಿಸಿದ್ದಾರೆ. ಭಾರತ ತಂಡದಲ್ಲಿ ಪ್ರಿನ್ಸ್ ಯಾದವ್ ಮತ್ತು ಸೂರ್ಯಾಂಶ್ ಶೆಡ್ಗೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಸುಂದರ್ ಹಾಗೂ ಪ್ರಸಿದ್ಧ್ ಕೃಷ್ಣ ಬದಲಿಗೆ ಇವರಿಗೆ ಅವಕಾಶ ಸಿಕ್ಕಿದೆ.

IND vs IRE: ಟೀಂ ಇಂಡಿಯಾ ಪರ ಇಬ್ಬರ ಪಾದಾರ್ಪಣೆ; ವೈಭವ್​ಗೆ ಸಿಕ್ಕಿತಾ ಅವಕಾಶ?
Ind Vs Ire Toss

Updated on: Jun 28, 2026 | 5:53 PM

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯವನ್ನು ಭಾರತ ತಂಡ ಸೋತಿತ್ತು. ಹೀಗಾಗಿ ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸಲು ಪ್ರಯತ್ನಿಸಲಿದೆ. ಈ ಸರಣಿ ನಿರ್ಧಾರಕ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಅದರಂತೆ ಮಳೆ ಕೂಡ ಸುರಿಯಿತು. ಆದರೆ ಪಂದ್ಯದ ವೇಳೆಗೆ ಮಳೆ ನಿಂತಿದ್ದು, ನಿಗಧಿತ ಸಮಯಕ್ಕೆ ಟಾಸ್ ಕೂಡ ನಡೆದಿದೆ. ಮೊದಲ ಪಂದ್ಯದಂತೆ ಈ ಪಂದ್ಯದಲ್ಲೂ ಟಾಸ್ ಗೆದ್ದಿರುವ ಶ್ರೇಯಸ್ ಅಯ್ಯರ್ (Shreyas Iyer), ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಟೀಂ ಇಂಡಿಯಾದಲ್ಲಿ 2 ಬದಲಾವಣೆ

ನಿರೀಕ್ಷೆಯಂತೆಯೇ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಅದರಂತೆ ಟೀಂ ಇಂಡಿಯಾ ಪರ ಇಬ್ಬರು ಯುವ ಕ್ರಿಕೆಟಿಗರು ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆದರೆ ಈ ಇಬ್ಬರು ಯುವ ಕ್ರಿಕೆಟಿಗರಲ್ಲಿ ವೈಭವ್ ಸೂರ್ಯವಂಶಿ ಅವರ ಹೆಸರು ಸೇರಿಲ್ಲ ಎಂಬುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಅಂದರೆ ಸರಣಿಯ ಕೊನೆಯ ಪಂದ್ಯದಲ್ಲೂ ವೈಭವ್​ಗೆ ಆಡುವ ಅವಕಾಶ ಸಿಕ್ಕಿಲ್ಲ. ಹೀಗಾಗಿ ವೈಭವ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಸಾಧ್ಯತೆಗಳಿವೆ.

ಇನ್ನು ಟೀಂ ಇಂಡಿಯಾ ಪರ ಯುವ ವೇಗೆ ಪ್ರಿನ್ಸ್ ಯಾದವ್ ಮತ್ತು ಆಲ್‌ರೌಂಡರ್ ಸೂರ್ಯಾಂಶ್ ಶೆಡ್ಗೆ ಅಂತರರಾಷ್ಟ್ರೀಯ ಕ್ರಿಕೆಟ್​​ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಕಳಪೆ ಪ್ರದರ್ಶ ನೀಡಿದ್ದ ವಾಷಿಂಗ್ಟನ್ ಸುಂದರ್ ಹಾಗೂ ಪ್ರಸಿದ್ಧ್ ಕೃಷ್ಣರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ. ಇತ್ತ ಐರ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

IND vs IRE Live Score: ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್.

ಐರ್ಲೆಂಡ್ ತಂಡ: ಟಿಮ್ ಟೆಕ್ಟರ್, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ನಾಯಕ), ಬೆಂಜಮಿನ್ ಕ್ಯಾಲಿಟ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಲಿಯಾಮ್ ಮೆಕಾರ್ಥಿ, ಮ್ಯಾಥ್ಯೂ ಹಂಫ್ರೀಸ್, ಜೇ ಮುಂದ್ರಾ, ಮ್ಯಾಥ್ಯೂ ಹೊಲ್ಲಾರ್ಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Sun, 28 June 26

Follow Us