India vs Ireland: ಭಾರತ vs ಐರ್ಲೆಂಡ್ ಪಂದ್ಯಕ್ಕೆ ಮಳೆ ಭೀತಿ: ಇಲ್ಲಿದೆ ಹವಾಮಾನ ವರದಿ

India vs Ireland: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಒಟ್ಟು 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಅಂದರೆ ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡ ಜಯ ಸಾಧಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಹೀಗಾಗಿ ಭಾರತದ ವಿರುದ್ಧ ಚೊಚ್ಚಲ ಗೆಲುವನ್ನು ಐರ್ಲೆಂಡ್ ಪಡೆ ಎದುರು ನೋಡುತ್ತಿದೆ.

India vs Ireland: ಭಾರತ vs ಐರ್ಲೆಂಡ್ ಪಂದ್ಯಕ್ಕೆ ಮಳೆ ಭೀತಿ: ಇಲ್ಲಿದೆ ಹವಾಮಾನ ವರದಿ
IND vs IRE
Follow us
ಝಾಹಿರ್ ಯೂಸುಫ್
|

Updated on: Jun 05, 2024 | 10:07 AM

T20 World Cup 2024: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನಲ್ಲಿ ಇಂದು ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಏಕೆಂದರೆ ಹವಾಮಾನ ವರದಿ ಪ್ರಕಾರ ನ್ಯೂಯಾರ್ಕ್​ ಭಾಗದಲ್ಲಿ ಇಂದು (ಜೂನ್ 5) ಮಳೆಯಾಗುವ ಸಾಧ್ಯತೆಯಿದೆ.

ಬುಧವಾರ ನ್ಯೂಯಾರ್ಕ್‌ನಲ್ಲಿ ದಿನವಿಡೀ ಸುಮಾರು 10 ಪ್ರತಿಶತದಷ್ಟು ಮಳೆಯಾಗಲಿದೆ ಎಂದು ವರದಿಯಾಗಿದೆ. ಆದರೆ ಬೆಳಗಿನ ವೇಳೆ ಮಳೆ ಪ್ರಮಾಣವು ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ತಿಳಿಸಲಾಗಿದೆ.

ಅಂದರೆ ಭಾರತ ಮತ್ತು ಐರ್ಲೆಂಡ್ ನಡುವಣ ಪಂದ್ಯವು ಅಮೆರಿಕ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಈ ವೇಳೆಗೆ ಮಳೆಯಾಗುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಪಂದ್ಯ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

ಇನ್ನು ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯುಂಟಾದರೆ ಓವರ್​ಗಳ ಕಡಿತದೊಂದಿಗೆ ಮ್ಯಾಚ್ ಮುಂದುವರೆಯಲಿದೆ. ಇದಾಗ್ಯೂ ಈ ಪಂದ್ಯಕ್ಕೆ ಮೀಸಲು ದಿನದಾಟವಿರುವುದಿಲ್ಲ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಳ್ಳಲಿದೆ.

ಇತ್ತ ಈ ಪಂದ್ಯದಲ್ಲಿ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿದ್ದು, ಹೀಗಾಗಿ ಇಂದಿನ ಪಂದ್ಯವು ಮಳೆಯಿಂದಾಗಿ ರದ್ದಾದರೆ ಐರ್ಲೆಂಡ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಹಾಗಾಗಿ 2 ಅಂಕಗಳನ್ನು ಪಡೆಯಲು ಟೀಮ್ ಇಂಡಿಯಾಗೆ ಇಂದು ಪಂದ್ಯ ನಡೆಯಲೇಬೇಕು.

ಮಳೆಯಿಂದಾಗಿ ಪಂದ್ಯ ರದ್ದು:

ಈಗಾಗಲೇ ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಬಾರ್ಬಡೋಸ್​ನಲ್ಲಿ ನಡೆಯುತ್ತಿದ್ದ ಪಂದ್ಯದ ಮೊದಲ ಇನಿಂಗ್ಸ್​ನ ವೇಳೆ ಮಳೆ ಬಂದು ಸಂಪೂರ್ಣ ಪಂದ್ಯ ಕೊಚ್ಚಿ ಹೋಗಿದೆ. ಹಾಗೆಯೇ ಡಲ್ಲಾಸ್​ನಲ್ಲಿ ನಡೆದ ಕೆಲ ಪಂದ್ಯಗಳ ವೇಳೆಯು ಮಳೆ ಅಡಚಣೆಯನ್ನುಂಟು ಮಾಡಿತ್ತು. ಹೀಗಾಗಿ ಈ ಬಾರಿಯ ಟಿ20 ವಿಶ್ವಕಪ್​ನ ಕೆಲ ಪಂದ್ಯಗಳು ಮಳೆಗಾಹುತಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಐರ್ಲೆಂಡ್ ನಡುವಣ ಪಂದ್ಯವು ಯುಎಸ್​ಎ ಕಾಲಮಾನ ಬೆಳಿಗ್ಗೆ 10.30 ರಿಂದ ಆರಂಭವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ನೇರ ಪ್ರಸಾರ ಇರಲಿದೆ. ಹಾಗೆಯೇ ಈ ಪಂದ್ಯದ ಟಾಸ್ ಪ್ರಕ್ರಿಯೆ 7.30 ಕ್ಕೆ ನಡೆಯಲಿದೆ.

ಇದನ್ನೂ ಓದಿ: Yusuf Pathan: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಯೂಸುಫ್ ಪಠಾಣ್

ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಈ ಪಂದ್ಯವನ್ನು ಸ್ಟಾರ್​ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ದೂರದರ್ಶನ (DD) ಚಾನೆಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಇದಲ್ಲದೆ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲೂ ಈ ಪಂದ್ಯದ ನೇರ ಪ್ರಸಾರವನ್ನು ಉಚಿತವಾಗಿ ವೀಕ್ಷಿಸಬಹುದು.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ