AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಜಪಾನ್ ಪಂದ್ಯ ಯಾವಾಗ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಸಾಂಪ್ರದಾಯಿಕ ಕ್ರಿಕೆಟ್ ಮೈದಾನಗಳಿಂದ ದೂರವಿರುವ ಜಪಾನ್‌ನ ಸಾನೊ ಕ್ರೀಡಾಂಗಣವೀಗ ಜಾಗತಿಕ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯುತ್ತಿದೆ. ಜಪಾನ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾದ ಯುವ ಬಲ, ಅಲ್ಲಿನ ಉದಯೋನ್ಮುಖ ಆಟಗಾರರ ವಿರುದ್ಧ ಸೆಣಸಾಡಲು ಸಂಪೂರ್ಣ ಸಜ್ಜಾಗಿದೆ. ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಈ ರೋಮಾಂಚನಕಾರಿ ಪಂದ್ಯದ ಕ್ಷಣಗಳು ನಾಳೆ ಅನಾವರಣಗೊಳ್ಳಲಿವೆ.

ಭಾರತ vs ಜಪಾನ್ ಪಂದ್ಯ ಯಾವಾಗ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?
ಭಾರತ vs ಜಪಾನ್Image Credit source: cricketnmore
ಝಾಹಿರ್ ಯೂಸುಫ್
|

Updated on: Sep 21, 2026 | 8:50 AM

Share

ವಿಶ್ವ ಕ್ರಿಕೆಟ್‌ನ ಬಲಿಷ್ಠ ತಂಡವಾದ ಭಾರತ ಮತ್ತು ಉದಯೋನ್ಮುಖ ಜಪಾನ್ ಕ್ರಿಕೆಟ್ ತಂಡದ ನಡುವೆ ಸೆಪ್ಟೆಂಬರ್ 22 ರಂದು ಐತಿಹಾಸಿಕ ಟಿ20 ಪಂದ್ಯ ನಡೆಯಲಿದೆ. ಭಾರತ ಹಾಗೂ ಜಪಾನ್ ದೇಶಗಳ ನಡುವಿನ 75 ವರ್ಷಗಳ ಸುದೀರ್ಘ ರಾಜತಾಂತ್ರಿಕ ಬಾಂಧವ್ಯದ ನೆನಪಿಗಾಗಿ ಮತ್ತು ಜಪಾನ್‌ನಲ್ಲಿ ಕ್ರಿಕೆಟ್ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ಈ ವಿಶೇಷ ಪಂದ್ಯವನ್ನು ಆಯೋಜಿಸಲಾಗಿದೆ. ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಜಪಾನ್ ನಡುವಣ ಟಿ20 ಪಂದ್ಯವು ಭಾರತೀಯ ಕಾಲಮಾನ (IST) ಬೆಳಗ್ಗೆ 9:30 ಕ್ಕೆ ಆರಂಭವಾಗಲಿದೆ. ಅಂದರೆ ಜಪಾನ್‌ನ ಸ್ಥಳೀಯ ಸಮಯ ಮಧ್ಯಾಹ್ನ 1:00 ಗಂಟೆಗೆ ಶುರುವಾಗಲಿದೆ.

ಪಂದ್ಯ ನಡೆಯುವುದು ಎಲ್ಲಿ?

ಈ ಏಕೈಕ ಟಿ20 ಪಂದ್ಯವು ಜಪಾನ್‌ನ ಟೊಚಿಗಿ ಪ್ರಾಂತ್ಯದ ಸುಂದರ ಸಾನೊ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆಯೋಜನೆಗೊಳ್ಳಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಜಪಾನ್ ನಡುವಣ ಪಂದ್ಯದ ನೇರ ಪ್ರಸಾರವು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಇರಲಿದೆ.

ಹಾಗೆಯೇ ಫ್ಯಾನ್‌ಕೋಡ್ (FanCode) ಆ್ಯಪ್ ಹಾಗೂ ವೆಬ್‌ಸೈಟ್‌ನಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಪಂದ್ಯದ ಹಿನ್ನೆಲೆ ಮತ್ತು ಪ್ರಾಮುಖ್ಯತೆ:

ಸಾಮಾನ್ಯವಾಗಿ ಏಷ್ಯನ್ ಗೇಮ್ಸ್‌ನಂತಹ ಬಹು ಕ್ರೀಡಾಕೂಟಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿದ್ದ ಈ ಎರಡೂ ತಂಡಗಳು, ಇದೀಗ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಯ ಮಾದರಿಯಲ್ಲಿ ಪರಸ್ಪರ ಸೆಣಸಾಡುತ್ತಿವೆ.

ಟಿ20 ಮಾದರಿಯಲ್ಲಿ ಜಪಾನ್ ಇತ್ತೀಚಿನ ದಿನಗಳಲ್ಲಿ ಗಮನಾರ್ಹ ಪ್ರದರ್ಶನ ನೀಡುತ್ತಾ ಬೆಳೆಯುತ್ತಿದ್ದು, ವಿಶ್ವ ಚಾಂಪಿಯನ್ ಭಾರತ ತಂಡದ ವಿರುದ್ಧ ಆಡುತ್ತಿರುವುದು ಆ ದೇಶದ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮೈಲಿಗಲ್ಲಾಗಿದೆ.

ಇದನ್ನೂ ಓದಿ: ನೀವಿಲ್ಲಿ ಕಡ್ಲೆಕಾಯಿ ಮಾರಲು ಬಂದಿದ್ದಾ?: ಬಾಬರ್ ಆಝಂ ವಿರುದ್ಧ ವಾಗ್ದಾಳಿ!

ಭಾರತೀಯ ತಂಡವು ಕೂಡ ಯುವ ಆಟಗಾರರ ದಂಡಿನೊಂದಿಗೆ ಜಪಾನ್ ಪ್ರವಾಸ ಕೈಗೊಂಡಿದ್ದು, ನಾಳೆಯ ಪಂದ್ಯವು ಭಾರಿ ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಈ ಕೆಳಗಿನಂತಿದೆ…

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು