KS Bharat: ಭಾರತದ ಮಾನ ಉಳಿಸಿದ ಭರತ್: ಕೊಹ್ಲಿ-ರೋಹಿತ್ ವೈಫಲ್ಯದ ನಡುವೆ ತೊಡೆತಟ್ಟಿನಿಂತ ಶ್ರೀಕರ್

Leicestershire vs India: ನಾಯಕ ರೋಹಿತ್, ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ್ದಾರೆ. ಇವರೆಲ್ಲರ ನಡುವೆ ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಆಡದ ವಿಕೆಟ್ ಕೀಪರ್- ಬ್ಯಾಟರ್ ಶ್ರೀಕರ್ ಭರತ್ ಭಾರತದ ಮಾನ ಉಳಿಸಿದ್ದಾರೆ.

KS Bharat: ಭಾರತದ ಮಾನ ಉಳಿಸಿದ ಭರತ್: ಕೊಹ್ಲಿ-ರೋಹಿತ್ ವೈಫಲ್ಯದ ನಡುವೆ ತೊಡೆತಟ್ಟಿನಿಂತ ಶ್ರೀಕರ್
LEI vs IND KS Bharat and Virat Kohli
Follow us
| Updated By: Vinay Bhat

Updated on:Jun 24, 2022 | 7:35 AM

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ ಬಾಕಿ ಉಳಿದಿರುವ ಐದನೇ ಟೆಸ್ಟ್ ಪಂದ್ಯ ಜುಲೈ 1 ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಲೀಸೆಸ್ಟರ್ಷೈರ್ (India vs Leicestershire) ತಂಡದ ವಿರುದ್ಧ ಅಭ್ಯಾಸವನ್ನು ಆಡುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರೋಹಿತ್ ಶರ್ಮಾ ಪಡೆ ಆಂಗ್ಲರ ನಾಡಲ್ಲಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಅನುಭವಿ ಹಿರಿಯ ಆಟಗಾರರೇ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ನಾಯಕ ರೋಹಿತ್, ವಿರಾಟ್ ಕೊಹ್ಲಿ (Virat Kohli), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ ಹೀಗೆ ಸ್ಟಾರ್ ಆಟಗಾರರು ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ್ದಾರೆ. ಇವರೆಲ್ಲರ ನಡುವೆ ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಆಡದ ವಿಕೆಟ್ ಕೀಪರ್- ಬ್ಯಾಟರ್ ಶ್ರೀಕರ್ ಭರತ್ ಭಾರತದ ಮಾನ ಉಳಿಸಿದ್ದಾರೆ. ಲೀಸೆಸ್ಟರ್ಷೈರ್ ಬೌಲರ್​​ಗಳನ್ನು ಎಚ್ಚರಿಕೆಯಿಂದ ಎದುರಿಸಿದ ಇವರು ತಂಡದ ಮೊತ್ತವನ್ನು 200ರ ಗಡಿ ದಾಟಿಸುವಂತೆ ಮಾಡಿದ್ದಾರೆ.

ಹೌದು, ಭಾರತ 100 ರನ್​ಗೂ ಮೊದಲೇ ತನ್ನ ಮುಖ್ಯ 5 ವಿಕೆಟ್​ಗಳನ್ನು ಕಳೆದುಕೊಂಡಿತು. ಓಪನರ್​​ಗಳಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಮೊದಲ ವಿಕೆಟ್​ಗೆ 35 ರನ್​ಗಳ ಕಾಣಿಕೆ ನೀಡಿದರಷ್ಟೆ. 28 ಎಸೆತಗಳಲ್ಲಿ 21 ರನ್ ಗಳಿಸಿ ಗಿಲ್ ಔಟಾದರೆ, 47 ಎಸೆತಗಳಲ್ಲಿ 25 ರನ್ ಗಳಿಸಿ ಹಿಟ್​ಮ್ಯಾನ್ ಪೆವಿಲಿಯನ್ ಸೇರಿಕೊಂಡರು. ಹನುಮಾ ವಿಹಾರಿ ಆಟ ಕೇವಲ 3 ರನ್​ಗೆ ಅಂತ್ಯವಾಯಿತು. ಭರವಸೆ ಮೂಡಿಸಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಚೆನ್ನಾಗಿಯೇ ಬ್ಯಾಟಿಂಗ್ ಮಾಡಿದರು. ಆದರೆ, ದೊಡ್ಡ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ.

ENG vs NED: ಮುಟ್ಟಿದ್ದೆಲ್ಲ ಚಿನ್ನ; ಧೋನಿ ಹೆಸರಿನಲ್ಲಿದ್ದ 17 ವರ್ಷಗಳ ಹಳೆಯ ದಾಖಲೆ ಮುರಿದ ಬಟ್ಲರ್..!

ಇದನ್ನೂ ಓದಿ
Image
IND vs LEI: ಜೋ ರೂಟ್ ಮ್ಯಾಜಿಕ್ ಕಾಪಿ ಮಾಡುವಲ್ಲಿ ಕೊಹ್ಲಿ ವಿಫಲ; ವಿಡಿಯೋ ಸಖತ್ ವೈರಲ್
Image
Tribute: ಅಗಲಿದ ಪಂಜಾಬಿ ಗಾಯಕ ಸಿಧು ಮೂಸೇವಾಲಗೆ ಭಾವನಾತ್ಮಕ ಶ್ರದ್ಧಾಂಜಲಿ ಸಲ್ಲಿಸಿದ ಸರ್ಫರಾಜ್; ವಿಡಿಯೋ
Image
Ranji Trophy Final 2022: ಎರಡನೇ ದಿನದಾಟ ಅಂತ್ಯ; ಸರ್ಫರಾಜ್ ಶತಕ, ಪಂದ್ಯದಲ್ಲಿ ಬಿಗಿ ಹಿಡಿತ ಸಾಧಿಸಿದ ಮಧ್ಯಪ್ರದೇಶ
Image
CWG 2022: ಕಾಮನ್​ವೆಲ್ತ್ ಕ್ರೀಡಾಕೂಟಕ್ಕೆ ಭಾರತ ಮಹಿಳಾ ಹಾಕಿ ತಂಡ ಪ್ರಕಟ; ರಾಣಿ ರಾಂಪಾಲ್​ ಅಲಭ್ಯ

69 ಎಸೆತಗಳನ್ನು ಎದುರಿಸಿದ ಕೊಹ್ಲಿ 4 ಫೋರ್, 1 ಸಿಕ್ಸರ್​ನೊಂದಿಗೆ 33 ರನ್​ಗೆ ಔಟಾದರು. ಶ್ರೇಯಸ್ ಅಯ್ಯರ್ ಕಳಪೆ ಫಾರ್ಮ್ ಮುಂದುವರೆಸಿ ಸೊನ್ನೆ ಸುತ್ತಿದರು. ರವೀಂದ್ರ ಜಡೇಜಾ ಕೂಡ 13 ರನ್​​ಗೆ ಸುಸ್ತಾದರು. ಈ ಸಂದರ್ಭ ಕ್ರೀಸ್​ಗೆ ಬಂದ ಶ್ರೀಕರ್ ಭರತ್ ಎಚ್ಚರಿಕೆಯ ಆಟಕ್ಕೆ ಮುಂದಾದರು. ಆದರೆ, ಶಾರ್ದೂಲ್ ಥಾಕೂರ್(6) ಇವರಿಗೆ ಸಾಥ್ ನೀಡಲಿಲ್ಲ. ಉಮೇಶ್ ಯಾದವ್ 23 ರನ್ ಗಳಿಸಿ ಕೆಲಹೊತ್ತು ಕ್ರೀಸ್​​ನಲ್ಲಿದ್ದರು. ಇದೀಗ ಮೊಹಮ್ಮದ್ ಶಮಿ ಜೊತೆಯಾಗಿರುವ ಭರತ್​ ಭಾರತಕ್ಕೆ ರನ್ ಕೊಡುಗೆ ನೀಡುತ್ತಿದ್ದಾರೆ.

ಮೊದಲ ದಿನದಾಟದ ಅಂತ್ಯಕ್ಕೆ ಭಾರತ 60.2 ಓವರ್​ನಲ್ಲಿ 8 ವಿಕೆಟ್ ನಷ್ಟಕ್ಕೆ 246 ರನ್ ಕಲೆಹಾಕಿದೆ. ಭರತ್ 111 ಎಸೆತಗಳಲ್ಲಿ 8 ಫೋರ್, 1 ಸಿಕ್ಸರ್​​ನೊಂದಿಗೆ 70 ರನ್ ಗಳಿಸಿ ಕ್ರೀಸ್​​ನಲ್ಲಿದ್ದರೆ, ಶಮಿ 26 ಎಸೆತಗಳಲ್ಲಿ 18 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಲೀಸೆಸ್ಟರ್ಷೈರ್ ಪರ ರೋಮನ್ ವಾಲ್ಕರ್ 5 ವಿಕೆಟ್ ಕಿತ್ತು ಮಿಂಚಿದರೆ, ವಿಲ್ ಡೇವಿಸ್ 2 ಹಾಗೂ ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದರು.

ಭಾರತದ ವಿಕೆಟ್‌ಕೀಪರ್ ರಿಷಭ್ ಪಂತ್, ಚೇತೇಶ್ವರ್ ಪೂಜಾರ, ಜಸ್‌ಪ್ರೀತ್ ಬೂಮ್ರಾ ಮತ್ತು ಪ್ರಸಿದ್ಧ ಕೃಷ್ಣ ಅವರು ಈ ಪಂದ್ಯದಲ್ಲಿ ಲೀಸಿಸ್ಟರ್ ತಂಡವನ್ನು ಪ್ರತಿನಿಧಿಸಿದ್ದಾರೆ. ನಾಲ್ಕು ದಿನಗಳ ಈ ಅಭ್ಯಾಸ ಪಂದ್ಯದಲ್ಲಿ ಮೊದಲ ದಿನವೇ ಭಾರತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು ಚಿಂತೆಗೀಡು ಮಾಡಿದೆ. ಭಾರತ ಈ ಟೆಸ್ಟ್ ಸರಣಿಯಲ್ಲಿ 2-1 ಅಂತರದ ಮುನ್ನಡೆ ಪಡೆದುಕೊಂಡಿದೆ. ಜುಲೈ 1 ರಿಂದ ಬರ್ಮಿಂಗ್​ಹ್ಯಾಮ್​ನಲ್ಲಿ ಐದನೇ ಟೆಸ್ಟ್ ಕದನ ಶುರುವಾಗಲಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Fri, 24 June 22

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್