AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NAM Live Streaming: ಭಾರತಕ್ಕೆ ನಮೀಬಿಯಾ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

India vs Namibia T20 World Cup 2026 Live Match Score: ಟಿ20 ವಿಶ್ವಕಪ್ 2026 ರಲ್ಲಿ ಟೀಂ ಇಂಡಿಯಾ ತನ್ನ ಮೊದಲ ಗೆಲುವಿನ ನಂತರ ನಮೀಬಿಯಾ ವಿರುದ್ಧ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಸಂಜೆ 7 ಗಂಟೆಗೆ ಈ ಪಂದ್ಯ ನಡೆಯಲಿದೆ. ನಮೀಬಿಯಾ ತನ್ನ ಮೊದಲ ಪಂದ್ಯದಲ್ಲಿ ಸೋತು, ಈ ಪಂದ್ಯದಲ್ಲಿ ಗೆಲುವಿಗಾಗಿ ಎದುರು ನೋಡುತ್ತಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ಪಂದ್ಯವನ್ನು ಲೈವ್ ವೀಕ್ಷಿಸಿ.

IND vs NAM Live Streaming: ಭಾರತಕ್ಕೆ ನಮೀಬಿಯಾ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
Ind Vs Nam
ಪೃಥ್ವಿಶಂಕರ
|

Updated on: Feb 11, 2026 | 9:56 PM

Share

2026 ರ ಟಿ20 ವಿಶ್ವಕಪ್ (T20 World Cup 2026)​ ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಇದೀಗ ತನ್ನ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡ ಇದೀಗ ತನ್ನ ಎರಡನೇ ಪಂದ್ಯದಲ್ಲಿ ನಮೀಬಿಯಾ (India vs Namibia) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯಾವಳಿಯಲ್ಲಿ ನಮೀಬಿಯಾಕ್ಕೂ ಇದು ಎರಡನೇ ಪಂದ್ಯವಾಗಿದ್ದು, ತನ್ನ ಮೊದಲ ಗೆಲುವಿಗಾಗಿ ಎದುರು ನೋಡುತ್ತಿದೆ. ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಿದ್ದ ನಮೀಬಿಯಾ 7 ವಿಕೆಟ್​ಗಳ ಸೋಲು ಕಂಡಿತ್ತು. ಹೀಗಾಗಿ ಭಾರತದ ವಿರುದ್ಧ ನಮೀಬಿಯಾ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಫೆಬ್ರವರಿ 12 ರಂದು ನಡೆಯಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.

T20 World Cup: ಇಶಾನ್ ಕಿಶನ್ ಕಾಲಿಗೆ ಗಾಯ; ಸಂಕಷ್ಟದಲ್ಲಿ ಟೀಂ ಇಂಡಿಯಾ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ನಮೀಬಿಯಾ ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ರೂಬೆನ್ ಟ್ರಂಪೆಲ್ಮನ್, ಜೆಜೆ ಸ್ಮಿಟ್, ಜಾನ್ ಫ್ರಿಲಿಂಕ್, ಲೌರೆನ್ ಸ್ಟೀನ್‌ಕ್ಯಾಂಪ್, ಮಲನ್ ಕ್ರುಗರ್, ನಿಕೋಲ್ ಲಾಫ್ಟಿ-ಈಟನ್, ಜ್ಯಾಕ್ ಬ್ರಾಸ್ಸೆಲ್, ಬೆನ್ ಶಿಕೊಂಗೊ, ಜೆಸಿ ಬಾಲ್ಟ್, ಡೈಲನ್ ಲೀಚರ್, WP ಮೈಬರ್ಗ್, ಮ್ಯಾಕ್ಸ್ ಹೀಂಗೊ.

ಮೀಸಲು ಆಟಗಾರ: ಅಲೆಕ್ಸಾಂಡರ್ ವೋಲ್ಶೆಂಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!