India vs Netherlands: ಟಾಸ್ ಗೆದ್ದ ಭಾರತ: ರೋಹಿತ್ ಪಡೆಯ ಪ್ಲೇಯಿಂಗ್ XI ಇಲ್ಲಿದೆ ನೋಡಿ
IND vs NED, ICC T20 World Cup 2022: ಐಸಿಸಿ ಟಿ20 ವಿಶ್ವಕಪ್ನಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹಿಂದಿನ ಪಾಕಿಸ್ತಾನ ವಿರುದ್ಧ ಕಣಕ್ಕಿಳಿದ ಆಟಗಾರರೇ ಇಂದುಕೂಡ ಆಡಲಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ನಲ್ಲಿಂದು (T20 World Cup) ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ (India vs Netherlands) ಮಧ್ಯೆ ಮಹತ್ವದ ಪಂದ್ಯ ನಡೆಯುತ್ತಿದೆ. ಈಗಾಗಲೇ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ರೋಹಿತ್ (Rohit Sharma) ಪಡೆ ಈ ಮ್ಯಾಚ್ ಅನ್ನೂ ಜಯಿಸುವ ಯೋಜನೆಯಲ್ಲಿದೆ. ಅತ್ತ ನೆದರ್ಲೆಂಡ್ಸ್ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವಿನ ಅಂಚಿನಲ್ಲಿ ಎಡವಿತ್ತು. ಸೋತ ಪರಿಣಾಮ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಉಭಯ ತಂಡಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ.
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹಿಂದಿನ ಪಾಕಿಸ್ತಾನ ವಿರುದ್ಧ ಕಣಕ್ಕಿಳಿದ ಆಟಗಾರರೇ ಇಂದುಕೂಡ ಆಡಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಆರ್. ಅಶ್ವಿನ್ ಬದಲು ಯುಜ್ವೇಂದ್ರ ಚಹಲ್ ಬರುವ ನಿರೀಕ್ಷೆಯಿತ್ತು. ಆದರೆ, ಕೋಚ್ ಮತ್ತು ನಾಯಕ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಭಾರತದ ಆಡುವ ಬಳಗ ಇಲ್ಲಿದೆ.
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ನೆದರ್ಲೆಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಓಡೌಡ್, ವಿಕ್ರಮಜಿತ್ ಸಿಂಗ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಟಿಮ್ ಪ್ರಿಂಗಲ್, ಪಾಲ್ ವ್ಯಾನ್ ಮೀಕೆರೆನ್, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್, ಶರೀಜ್ ಅಹ್ಮದ್.
ನೆದರ್ಲೆಂಡ್ಸ್ ಭಾರತಕ್ಕೆ ಹೋಲಿಸಿದರೆ ದುರ್ಬಲ ಎಂದು ಹೇಳಬಹುದು. ಆದರೆ, ಬಾಂಗ್ಲಾದೇಶದ ವಿರುದ್ಧ ಅವರು ಯಾವ ರೀತಿ ಆಡಿದರು ಎನ್ನುವುದನ್ನು ಗಮನಿಸ ಬೇಕಿದೆ. ಯಾವುದೇ ತಂಡವನ್ನು ಹಗುರವಾಗಿ ಪರಿಣಿಸಲು ಸಾಧ್ಯವಿಲ್ಲದ ಕಾರಣ, ಭಾರತವು ಇನ್ನೂ ಜಾಗರೂಕತೆಯಿಂದ ಕೂಡಿರಬೇಕು. ಸೆಮಿಫೈನಲ್ಗೆ ಪೈಪೋಟಿ ಬಿಗಿಯಾಗಿರುವುದರಿಂದ, ನೆದರ್ಲೆಂಡ್ಸ್ ವಿರುದ್ಧ ಹೆಚ್ಚಿನ ಅಂತರದಲ್ಲಿ ಗೆಲ್ಲುವ ಮೂಲಕ ರನ್ರೇಟ್ ಉತ್ತಮಪಡಿಸಿಕೊಳ್ಳ ಬೇಕಿದೆ.
ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಣೆ ಕಾಣಬೇಕಿದೆ. ಓಪನರ್ಗಳಾದ ಕೆಎಲ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಸೂರ್ಯಕುಮಾರ್ ಯಾದವ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ. ಕೊಹ್ಲಿ ಹಾರ್ದಿಕ್ ಉತ್ತಮ ಫಾರ್ಮ್ನಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಕೊಡುಗೆ ತಂಡಕ್ಕೆ ಇನ್ನೂ ಬೇಕಾಗಿದೆ. ಬೌಲಿಂಗ್ ವಿಭಾಗದಲ್ಲಿ ಕೂಡ ಭಾರತ ಬಿಗಿಯಾಗಬೇಕಿದೆ. ಡೆತ್ ಓವರ್ ಸಮಸ್ಯೆ ದೊಡ್ಡ ಚಿಂತೆಯಾಗಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.
ಮಳೆ ಇದೆಯೇ?:
ಕಳೆದ ಭಾರತ- ಪಾಕಿಸ್ತಾನ ಪಂದ್ಯಕ್ಕೆ ಮೆಲ್ಬೋರ್ನ್ನಲ್ಲಿ ವರುಣನ ಕಾಟ ಇರಲಿದೆ ಎಂದು ಹೇಳಲಾಗಿತ್ತು. ಆದರೆ, ಪಂದ್ಯ ಸರಾಗವಾಗಿ ಸಾಗಿತು. ಇಂದು ಕೂಡ ಇಂಡೋ- ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಲಿದೆ ಎನ್ನಲಾಗಿದೆ. ಗುರುವಾರ ಸಿಡ್ನಿ ಸುತ್ತಮುತ್ತ ಮಳೆಯಾಗುವ ಸಾಧ್ಯತೆಯಿರುವ ಕಾರಣ ಪಂದ್ಯಕ್ಕೂ ಸಣ್ಣ ಪ್ರಮಾಣದಲ್ಲಿ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶ ಪಂದ್ಯಕ್ಕೂ ಆರಂಭದಲ್ಲಿ ವರುಣ ಅಡ್ಡಿಪಡಿಸಿದ್ದ.
ಇನ್ನು ಸಿಡ್ನಿ ಕ್ರಿಕೆಟ್ ಮೈದಾನ ಬ್ಯಾಟಿಂಗ್ಗೆ ಉತ್ತಮವಾಗಿರುವ ಪಿಚ್ ಹೊಂದಿದೆ. ಚೆಂಡು ಬ್ಯಾಟ್ಗೆ ಚೆನ್ನಾಗಿ ಬರುವ ಕಾರಣ ಆರಂಭದಿಂದಲೇ ಬ್ಯಾಟರ್ಗಳು ಯಶಸ್ಸು ಸಾಧಿಸುತ್ತಾರೆ. ಈಗಾಗಲೇ ಈ ಪಿಚ್ನಲ್ಲಿ ದಕ್ಷಿಣ ಆಫ್ರಿಕಾ ಬಾಂಗ್ಲಾ ವಿರುದ್ಧ 200ಕ್ಕೂ ಅಧಿಕ ರನ್ ಕಲೆಹಾಕಿದೆ. ಹೀಗಾಗಿ ಭಾರತ-ನೆದರ್ಲೆಂಡ್ಸ್ ಮ್ಯಾಚ್ ಕೂಡ ಹೈವೋಲ್ಟೇಜ್ ಆಗುವ ನಿರೀಕ್ಷೆಯಿದೆ.
Published On - 12:27 pm, Thu, 27 October 22