AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಚಿನ್ನಸ್ವಾಮಿಯಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳು ಹೀಗಿವೆ

IND vs NED: ವಿಶ್ವಕಪ್ 2023 ರ ಕೊನೆಯ ಲೀಗ್ ಪಂದ್ಯ ಇಂದು ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದ ಟಾಸ್ ಕೂಡ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

IND vs NED: ಚಿನ್ನಸ್ವಾಮಿಯಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳು ಹೀಗಿವೆ
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on:Nov 12, 2023 | 1:57 PM

Share

ವಿಶ್ವಕಪ್ 2023 ರ (ICC ODI World Cup 2023) ಕೊನೆಯ ಲೀಗ್ ಪಂದ್ಯ ಇಂದು ಭಾರತ ಮತ್ತು ನೆದರ್ಲ್ಯಾಂಡ್ಸ್ (India Vs Netherlands) ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದ ಟಾಸ್ ಕೂಡ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಸತತ ಒಂಬತ್ತನೇ ಗೆಲುವು ಸಾಧಿಸಲು ಸಜ್ಜಾಗಿದೆ. ಇತ್ತ ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ನೆದರ್ಲೆಂಡ್ಸ್ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ನೀಡಿದ ಪ್ರದರ್ಶನವನ್ನೇ ಭಾರತದ ವಿರುದ್ಧ ನೀಡುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ. ಹೀಗಾಗಿ ಇಡೀ ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಭಾರತಕ್ಕೆ ಕಠಿಣ ಹೋರಾಟ ನೀಡಲು ನೆದರ್ಲೆಂಡ್ಸ್ ಕಠಿಣ ಪ್ರಯತ್ನ ನಡೆಸಲಿದೆ. ಇಂದಿನ ಪಂದ್ಯದಲ್ಲಿ ವಿರಾಟ್ ಶತಕ ಸಿಡಿಸಿದರೆ ಏಕದಿನದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ ಮನ್ ಎನಿಸಿಕೊಳ್ಳಲಿದ್ದಾರೆ.

ಮುಖಾಮುಖಿ ವರದಿ

ಇದು ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಮೂರನೇ ಮುಖಾಮುಖಿಯಾಗಿದೆ. ಇದಕ್ಕೂ ಮುನ್ನ ಎರಡೂ ತಂಡಗಳು 2003 ಮತ್ತು 2011ರ ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಿದ್ದವು. ಹಿಂದಿನ ಎರಡೂ ಸಂದರ್ಭಗಳಲ್ಲಿ ಭಾರತವು ನೆದರ್ಲೆಂಡ್ಸ್ ತಂಡವನ್ನು ಸೋಲಿಸಿತ್ತು.

IND vs NED, ICC World Cup: ಚಿನ್ನಸ್ವಾಮಿ ಸ್ಟೇಡಿಯಂ ಎದುರು ವಿರಾಟ್ ಕೊಹ್ಲಿಯ ಶತಕಗಳ ಕಟೌಟ್: ವಿಡಿಯೋ

ಸೆಮಿಫೈನಲ್ ಫೈಟ್

ವಾಸ್ತವವಾಗಿ ಇಂದು ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯ ನಡೆಯುತ್ತಿದ್ದು, ಸೆಮಿಫೈನಲ್ ಪಂದ್ಯಗಳು ನವೆಂಬರ್ 15 ರಂದು ವಾಂಖೆಡೆಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮತ್ತು ನವೆಂಬರ್ 16 ರಂದು ಈಡನ್ ಗಾರ್ಡನ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿವೆ. ಎರಡೂ ಸೆಮಿಫೈನಲ್‌ಗಳ ವಿಜೇತ ತಂಡಗಳು ನವೆಂಬರ್ 19 ರಂದು ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರಶಸ್ತಿಗಾಗಿ ಸೆಣಸಲಿವೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್​, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ನೆದರ್ಲ್ಯಾಂಡ್ಸ್ ತಂಡ: ವೆಸ್ಲಿ ಬರೇಸಿ, ಮ್ಯಾಕ್ಸ್ ಒ’ಡೌಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಬಾಸ್ ಡಿ ಲೀಡೆ, ತೇಜಾ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್ತ್, ಪಾಲ್ ವ್ಯಾನ್ ಮೀಕೆರೆನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:42 pm, Sun, 12 November 23

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ