
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ನೆದರ್‌ಲ್ಯಾಂಡ್ಸ್ ತಂಡವನ್ನು ಸೋಲಿಸಿತು. ಇದರೊಂದಿಗೆ, ಟೀಂ ಇಂಡಿಯಾ ಗುಂಪು ಹಂತದಲ್ಲಿ ಆಡಿದ ತನ್ನ ನಾಲ್ಕು ಪಂದ್ಯಗಳನ್ನು ಗೆದ್ದು, ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್‌ಲ್ಯಾಂಡ್ಸ್ 176 ರನ್ ಕಲೆಹಾಕಲಷ್ಟೇ ಶಕ್ತವಾಗಿ 17 ರನ್‌ಗಳಿಂದ ಸೋಲೊಪ್ಪಿಕೊಂಡಿತು.
ಭಾರತ ತನ್ನ ಕೊನೆಯ ಲೀಗ್ ಪಂದ್ಯದಲ್ಲೂ ಗೆದ್ದು, ನೆದರ್ಲ್ಯಾಂಡ್ಸ್ ತಂಡವನ್ನು 17 ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 193 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ನೆದರ್ಲ್ಯಾಂಡ್ಸ್ ಕೂಡ ಉತ್ತಮ ಪ್ರದರ್ಶನ ನೀಡಿ 176 ರನ್ ಗಳಿಸಿತು. ವರುಣ್ ಚಕ್ರವರ್ತಿ ಮೂರು ವಿಕೆಟ್ ಮತ್ತು ಶಿವಂ ದುಬೆ ಎರಡು ವಿಕೆಟ್ ಪಡೆದರು. ದುಬೆ ಕೂಡ 66 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.
ಕೊನೆಗೂ ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಅವರು ನೆದರ್ಲ್ಯಾಂಡ್ಸ್ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದರು. ಲ್ಯಾಪ್ ಶಾಟ್ ಹೊಡೆಯುವ ಪ್ರಯತ್ನದಲ್ಲಿ ಅವರು ಬೌಲ್ಡ್ ಆದರು.
ನೆದರ್ಲ್ಯಾಂಡ್ಸ್ 9 ಓವರ್‌ಗಳಲ್ಲಿ ಕೇವಲ 58 ರನ್ ಗಳಿಸಿದೆ. ಗೆಲುವಿಗೆ 66 ಎಸೆತಗಳಲ್ಲಿ 136 ರನ್‌ಗಳ ಅಗತ್ಯವಿದೆ.
ಭಾರತವು ಮೈಕೆಲ್ ಲೆವಿಟ್ ರೂಪದಲ್ಲಿ ನೆದರ್ಲ್ಯಾಂಡ್ಸ್‌ನ ಎರಡನೇ ವಿಕೆಟ್ ಪಡೆದುಕೊಂಡಿತು. ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಬೌಂಡರಿಯಲ್ಲಿ ವಾಷಿಂಗ್ಟನ್ ಸುಂದರ್ ಅದ್ಭುತ ಕ್ಯಾಚ್ ಪಡೆದರು.
ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 193 ರನ್ ಗಳಿಸಿತು. ಭಾರತದ ಇನ್ನಿಂಗ್ಸ್‌ನಲ್ಲಿ ಒಟ್ಟು 13 ಸಿಕ್ಸರ್‌ಗಳು ಸೇರಿದ್ದವು. ಭಾರತದ ಪರ ಶಿವಂ ದುಬೆ ಆರು ಸಿಕ್ಸರ್‌ಗಳು ಸೇರಿದಂತೆ 66 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಆಗಿದ್ದರು. ಹಾರ್ದಿಕ್ ಪಾಂಡ್ಯ 21 ಎಸೆತಗಳಲ್ಲಿ ಮೂರು ಸಿಕ್ಸರ್‌ಗಳೊಂದಿಗೆ 30 ರನ್ ಗಳಿಸಿದರು. ನೆದರ್ಲ್ಯಾಂಡ್ಸ್ ಗೆಲ್ಲಲು ಈಗ 194 ರನ್‌ಗಳ ಅಗತ್ಯವಿದೆ.
ಭಾರತದ ಸ್ಕೋರ್ ಈಗಾಗಲೇ 150 ದಾಟಿದೆ. ಶಿವಂ ದುಬೆ ಇದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನೊಂದು ತುದಿಯಲ್ಲಿ ಹಾರ್ದಿಕ್ ಪಾಂಡ್ಯ ಅವರಿಂದ ಅವರಿಗೆ ಅತ್ಯುತ್ತಮ ಬೆಂಬಲ ಸಿಗುತ್ತಿದೆ.
ಸೂರ್ಯಕುಮಾರ್ ಯಾದವ್ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಜೀವದಾನದ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. 27 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರು.
ನೆದರ್ಲ್ಯಾಂಡ್ಸ್ ವಿರುದ್ಧ ಭಾರತದ ಸ್ಕೋರ್ 100 ರನ್ ದಾಟಿದೆ. 13ನೇ ಓವರ್ ನಲ್ಲಿ ಭಾರತ 100 ರನ್ ಗಳ ಗಡಿ ದಾಟಿದೆ. ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಪ್ರಸ್ತುತ ಮೈದಾನದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಭಾರತದ ಅಗ್ರ ಬ್ಯಾಟ್ಸ್‌ಮನ್‌ಗಳು ನೆದರ್ಲ್ಯಾಂಡ್ಸ್ ವಿರುದ್ಧ ಬೇಗನೇ ಔಟಾದರು. ಭಾರತವು 10 ಓವರ್‌ಗಳಲ್ಲಿ ಅಭಿಷೇಕ್, ಇಶಾನ್ ಮತ್ತು ತಿಲಕ್ ಅವರ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಮಧ್ಯೆ, ಸೂರ್ಯಕುಮಾರ್ ಯಾದವ್ 13 ರನ್‌ಗಳಲ್ಲಿದ್ದಾಗ ಅವರಿಗೆ ಜೀವದಾನ ನೀಡಲಾಯಿತು.
ಪವರ್‌ಪ್ಲೇ ಒಳಗೆ ಭಾರತದ ಇಬ್ಬರೂ ಆರಂಭಿಕರು ಡಗೌಟ್‌ಗೆ ಮರಳಿದರು. ಅಭಿಷೇಕ್ ಶರ್ಮಾ ಒಂದೇ ಒಂದು ರನ್ ಗಳಿಸದೆ ಔಟಾದರೆ, ಇಶಾನ್ ಕಿಶನ್ 7 ಎಸೆತಗಳಲ್ಲಿ 18 ರನ್ ಗಳಿಸಿದರು. ಇಬ್ಬರನ್ನೂ ಆರ್ಯನ್ ದತ್ ಔಟ್ ಮಾಡಿದರು.
2026 ರ ಟಿ20 ವಿಶ್ವಕಪ್‌ನಲ್ಲಿ ಸತತ ಮೂರನೇ ಪಂದ್ಯದಲ್ಲೂ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾದರು. ನೆದರ್ಲ್ಯಾಂಡ್ಸ್ ವಿರುದ್ಧವೂ ಅವರು ರನ್ ಗಳಿಸುವಲ್ಲಿ ವಿಫಲರಾದರು. ಮೂರು ಎಸೆತಗಳನ್ನು ಎದುರಿಸಿದ ನಂತರ ಅವರು ಶೂನ್ಯಕ್ಕೆ ಔಟಾದರು.
ಮೈಕೆಲ್ ಲೆವಿಟ್, ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೇಡೆ, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಜ್ಯಾಕ್ ಲಿಯಾನ್-ಕ್ಯಾಚೆಟ್, ನೋಹ್ ಕ್ರೂಸ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ಕೈಲ್ ಕ್ಲೈನ್.
ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ನೆದರ್ಲ್ಯಾಂಡ್ಸ್ ವಿರುದ್ದ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
Published On - 6:33 pm, Wed, 18 February 26