
ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಏಕದಿನ ಸರಣಿ ನಾಳೆಯಿಂದ ಅಂದರೆ ಜನವರಿ 11 ರಿಂದ ಆರಂಭವಾಗುತ್ತಿದೆ. ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಒಟ್ಟು 3 ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಯೊಂದಿಗೆ ನಾಯಕ ಶುಭಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ಇಬ್ಬರೂ ತಂಡಕ್ಕೆ ಮರಳಿದ್ದಾರೆ. ಅನುಭವಿ ಜೋಡಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಈ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅದಕ್ಕೂ ಮುನ್ನ ಈ ಪಂದ್ಯ ಎಲ್ಲಿ ಎಷ್ಟು ಗಂಟೆಗೆ ಆರಂಭವಾಗುತ್ತದೆ ಮತ್ತು ಈ ಪಂದ್ಯವನ್ನು ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ.
ಜನವರಿ 11 ರ ಭಾನುವಾರದಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ವಡೋದರಾದ ಕೋಟಂಬಿಯ ಬಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.
ನ್ಯೂಜಿಲೆಂಡ್ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಜ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ