IND vs NZ: ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ XI

India vs New Zealand, 1st ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 120 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 62 ಮ್ಯಾಚ್​ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7 ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾದರೆ, ಒಂದು ಪಂದ್ಯವು ಟೈನಲ್ಲಿ ಅಂತ್ಯಗೊಂಡಿತ್ತು.

IND vs NZ: ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ XI
Team India

Updated on: Jan 11, 2026 | 1:08 PM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರದಲ್ಲಿ ಬಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಇನ್ನು ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಿಲ್ ಅಲಭ್ಯರಾಗಿದ್ದರು. ಹೀಗಾಗಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದರು.

ಇದೀಗ ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿದೆ. ಅದರಂತೆ ಭಾರತ ತಂಡದ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.

ಇನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಅದರಂತೆ ಇಂದಿನ ಪಂದ್ಯದಲ್ಲಿ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ನ್ಯೂಝಿಲೆಂಡ್ ಪ್ಲೇಯಿಂಗ್ XI: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್(ನಾಯಕ), ಝಕಾರಿ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಆದಿತ್ಯ ಅಶೋಕ್.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).

ಇದನ್ನೂ ಓದಿ: ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.