IND vs NZ: ಶಾರ್ದೂಲ್ ಅಥವಾ ಉಮ್ರಾನ್, ತಂಡದಲ್ಲಿ ಯಾರಿಗೆ ಸ್ಥಾನ? 2ನೇ ಪಂದ್ಯಕ್ಕೆ ಸಂಭಾವ್ಯ ತಂಡಗಳು ಹೀಗಿವೆ

IND vs NZ: ಎರಡನೇ ಪಂದ್ಯದಲ್ಲಿ ರೋಹಿತ್ ಮುಂದಿರುವ ಸವಾಲು ಎಂದರೆ ತಂಡದ ಸಂಯೋಜನೆ. ಸಾಮಾನ್ಯವಾಗಿ ಯಾವುದೇ ನಾಯಕ ಗೆಲುವಿನ ಸಂಯೋಜನೆಯನ್ನು ಬದಲಿಸಲು ಹೋಗುವುದಿಲ್ಲ.

IND vs NZ: ಶಾರ್ದೂಲ್ ಅಥವಾ ಉಮ್ರಾನ್, ತಂಡದಲ್ಲಿ ಯಾರಿಗೆ ಸ್ಥಾನ? 2ನೇ ಪಂದ್ಯಕ್ಕೆ ಸಂಭಾವ್ಯ ತಂಡಗಳು ಹೀಗಿವೆ
ಭಾರತ- ನ್ಯೂಜಿಲೆಂಡ್ ಏಕದಿನ ಸರಣಿ
Follow us
TV9 Web
| Updated By: ಪೃಥ್ವಿಶಂಕರ

Updated on:Jan 20, 2023 | 8:53 PM

ನ್ಯೂಜಿಲೆಂಡ್ ವಿರುದ್ಧದ (India Vs New Zealand) ಎರಡನೇ ಏಕದಿನ ಪಂದ್ಯ ಶನಿವಾರ ರಾಯ್‌ಪುರದಲ್ಲಿ ನಡೆಯಲ್ಲಿದ್ದು, ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಟೀಂ ಇಂಡಿಯಾ (Team India) ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಟೀಂ ಇಂಡಿಯಾದ ಕಣ್ಣು ಈ ಸರಣಿಯನ್ನು ತಮ್ಮ ಹೆಸರನ್ನಾಗಿ ಮಾಡಿಕೊಳ್ಳುವತ್ತ ನೆಟ್ಟಿದೆ. ಅದೇ ಸಮಯದಲ್ಲಿ, ನ್ಯೂಜಿಲೆಂಡ್ ತಂಡವು ಈ ಪಂದ್ಯವನ್ನು ಗೆದ್ದು ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಬಯಸುತ್ತಿದೆ. ಆದಾಗ್ಯೂ, ನ್ಯೂಜಿಲೆಂಡ್‌ಗೆ ಇದು ಸುಲಭವಲ್ಲ. ಏಕೆಂದರೆ ಕಿವೀಸ್ ಪಡೆ ಅನುಭವಿಗಳ ಅಲಭ್ಯತೆಯಿಂದ ಬಳಲುತ್ತಿದೆ. ಇತ್ತ ಟೀಂ ಇಂಡಿಯಾ ಮೊದಲ ಪಂದ್ಯದ ಗೆಲುವಿನಿಂದಾಗಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.

ಮೊದಲ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ದ್ವಿಶತಕ ಸಿಡಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಭಾರತದ ಐದನೇ ಆಟಗಾರ ಎನಿಸಿಕೊಂಡರು. ಆದರೆ, ತಂಡದ ಮಧ್ಯಮ ಕ್ರಮಾಂಕ ವಿಫಲವಾಗಿತ್ತು. ಅದೇ ಸಮಯದಲ್ಲಿ, ಬೌಲರ್‌ಗಳು ಕೂಡ ತೀರ ದುಬಾರಿಯಾಗಿದ್ದರು. ಇದರ ಫಲವಾಗಿ 349 ರನ್ ಗಳಿಸಿದ ನಂತರವೂ ಟೀಂ ಇಂಡಿಯಾ ಕೇವಲ 12 ರನ್‌ಗಳಿಂದ ಗೆಲುವು ಸಾಧಿಸಿತ್ತು.

ಟೀಂ ಇಂಡಿಯಾದ ಪ್ಲೇಯಿಂಗ್-11 ಬದಲಾಗುತ್ತಾ?

ಎರಡನೇ ಪಂದ್ಯದಲ್ಲಿ ರೋಹಿತ್ ಮುಂದಿರುವ ಸವಾಲು ಎಂದರೆ ತಂಡದ ಸಂಯೋಜನೆ. ಸಾಮಾನ್ಯವಾಗಿ ಯಾವುದೇ ನಾಯಕ ಗೆಲುವಿನ ಸಂಯೋಜನೆಯನ್ನು ಬದಲಿಸಲು ಹೋಗುವುದಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಮತ್ತು ರೋಹಿತ್ ಜೋಡಿ ಬದಲಾವಣೆ ತರುವ ಸಾಧ್ಯತೆಗಳಿವೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಬಲಪಡಿಸಲು, ಶಾರ್ದೂಲ್ ಠಾಕೂರ್ ಅವರನ್ನು ಪ್ಲೇಯಿಂಗ್-11 ರಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಶಾರ್ದೂಲ್ ಮೊದಲ ಪಂದ್ಯದಲ್ಲಿ ತುಂಬಾ ದುಬಾರಿಯಾದರು. ಮೊದಲ ಪಂದ್ಯದಲ್ಲಿ ಕೇವಲ 7.2 ಓವರ್‌ ಬೌಲ್ ಮಾಡಿದ ಶಾರ್ದೂಲ್ 54 ರನ್ ನೀಡಿ ಎರಡು ವಿಕೆಟ್ ಪಡೆದರು.

IND Vs NZ Live Streaming: ಗೆದ್ದರೆ ಭಾರತಕ್ಕೆ ಸರಣಿ; 2ನೇ ಏಕದಿನ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ

ಹೀಗಾಗಿ ಅವರ ಸ್ಥಾನದಲ್ಲಿ ರೋಹಿತ್, ಬಿರುಗಾಳಿಯ ವೇಗದ ಬೌಲರ್ ಉಮ್ರಾನ್ ಮಲಿಕ್‌ಗೆ ಅವಕಾಶ ನೀಡಬಹುದು. ಉಮ್ರಾನ್ ಅವರ ವೇಗವು ಬ್ಯಾಟ್ಸ್‌ಮನ್‌ಗಳಿಗೆ ತೊಂದರೆ ಉಂಟುಮಾಡುವ ಸಾಧ್ಯತೆ ಹೆಚ್ಚಿದ್ದು, ಇದನ್ನು ಅವರು ಹಲವು ಬಾರಿ ಸಾಬೀತು ಮಾಡಿದ್ದಾರೆ. ಹೀಗಾಗಿ ಶಾರ್ದೂಲ್ ಬದಲಿಗೆ ಉಮ್ರಾನ್​ಗೆ ಪ್ಲೇಯಿಂಗ್-11ರಲ್ಲಿ ಅವಕಾಶ ಸಿಗಬಹುದು. ಇದನ್ನು ಹೊರತುಪಡಿಸಿ ಟೀಂ ಇಂಡಿಯಾದಲ್ಲಿ ಬೇರೆ ಯಾವುದೇ ಬದಲಾವಣೆಯ ಸಾಧ್ಯತೆ ಗೋಚರಿಸುತ್ತಿಲ್ಲ.

ನ್ಯೂಜಿಲೆಂಡ್‌ ತಂಡ ಹೇಗಿರಲಿದೆ?

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ಬೌಲರ್‌ಗಳು ಕೂಡ ದುಬಾರಿಯಾಗಿದ್ದರು. ತಂಡವು ಬ್ಯಾಟಿಂಗ್‌ನಲ್ಲಿಯೂ ಹೆಚ್ಚು ಯಶಸ್ವಿಯಾಗಲಿಲ್ಲ. ಆದರೆ ಕೊನೆಯಲ್ಲಿ, ಮೈಕಲ್ ಬ್ರೇಸ್‌ವೆಲ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರ ಬಿರುಗಾಳಿಯ ಇನ್ನಿಂಗ್ಸ್ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದಿತು. ಆದರೆ, ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ತಂಡದಲ್ಲಿ ಕೇನ್ ವಿಲಿಯಮ್ಸನ್ ಅವರಂತಹ ಬ್ಯಾಟ್ಸ್‌ಮನ್‌ಗಳ ಕೊರತೆಯಿದ್ದು, ಅವರ ಜವಬ್ದಾರಿಯನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ಅಲ್ಲದೆ ಈ ಸರಣಿಯಲ್ಲಿ ತಂಡದ ನಾಯಕರಾಗಿರುವ ಟಾಮ್ ಲ್ಯಾಥಮ್ ಎರಡನೇ ಪಂದ್ಯದಲ್ಲಿ ಯಾವ 11 ಆಟಗಾರರೊಂದಿಗೆ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೂ ಈ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಇಶ್ ಸೋಧಿ ಗಾಯದ ಸಮಸ್ಯೆಯಿಂದ ಮೊದಲ ಪಂದ್ಯ ಆಡಲಿಲ್ಲ. ಆದರೆ ಈಗ ಫಿಟ್ ಆಗಿರುವ ಅವರು ಎರಡನೇ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ.

ಎರಡೂ ಸಂಭಾವ್ಯ ತಂಡಗಳು ಹೀಗಿವೆ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Fri, 20 January 23

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ