IND vs NZ: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ
India Predicted Playing 11 vs New Zealand: ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಮುಂದುವರೆದರೆ, 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಆಡಲಿದ್ದಾರೆ.

India vs New Zealand 1st ODI: ಭಾರತ-ನ್ಯೂಜಿಲೆಂಡ್ ನಡುವಣ ಏಕದಿನ ಸರಣಿ ಬುಧವಾರದಿಂದ (ಜ.18) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿ ಮೊದಲ ಮ್ಯಾಚ್ಗೆ ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಶ್ರೀಲಂಕಾ ತಂಡವನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಮ್ ಇಂಡಿಯಾ (Team India) ಗೆಲುವಿನ ಲಯವನ್ನು ಮುಂದುವರೆಸುವ ಇರಾದೆಯಲ್ಲಿದ್ದು, ಈ ಮೂಲಕ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ. ಇನ್ನು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹಾಗೆಯೇ ಬೆನ್ನುನೋವಿನ ಕಾರಣ ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ತಂಡದಲ್ಲಿ ಮೂರು ಬದಲಾವಣೆ ಕಂಡು ಬರುವುದು ಖಚಿತ.
ಇಲ್ಲಿ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸ್ಥಾನದಲ್ಲಿ ಇಶಾನ್ ಕಿಶನ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಅಕ್ಷರ್ ಪಟೇಲ್ ಸ್ಥಾನದಲ್ಲಿ ಆಲ್ರೌಂಡರ್ ಆಗಿ ವಾಷಿಂಗ್ಟನ್ ಸುಂದರ್ಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ.
ಅದರಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಮುಂದುವರೆದರೆ, 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಆಡಲಿದ್ದಾರೆ. ಇನ್ನು ಇಶಾನ್ ಕಿಶನ್ 5ನೇ ಸ್ಥಾನದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಒಂದು ವೇಳೆ ಶುಭ್ಮನ್ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಿದ್ರೆ ಇಶಾನ್ ಕಿಶನ್ ಆರಂಭಿಕರಾಗಬಹುದು.
Also Read: Sarfaraz Khan: ಟೀಮ್ ಇಂಡಿಯಾದಲ್ಲಿ ಸಿಕ್ಕಿಲ್ಲ ಚಾನ್ಸ್: ಮತ್ತೊಂದು ಶತಕ ಸಿಡಿಸಿದ ಸರ್ಫರಾಝ್
ಇನ್ನು ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಸ್ಪಿನ್ನರ್ ಸ್ಥಾನದಲ್ಲಿ ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ನಡುವೆ ಪೈಪೋಟಿ ಇದೆ. ಇದಾಗ್ಯೂ ಕಳೆದ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕುಲ್ದೀಪ್ಗೆ ಆಡುವ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
ತಂಡದ ವೇಗದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಶಮಿ ಮುನ್ನಡೆಸಲಿದ್ದು, ಇವರ ಜೊತೆ ಉಮ್ರಾನ್ ಮಲಿಕ್ ಹಾಗೂ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮೊದಲ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.
- ರೋಹಿತ್ ಶರ್ಮಾ
- ಶುಭ್ಮನ್ ಗಿಲ್
- ವಿರಾಟ್ ಕೊಹ್ಲಿ
- ಸೂರ್ಯಕುಮಾರ್ ಯಾದವ್
- ಇಶಾನ್ ಕಿಶನ್
- ಹಾರ್ದಿಕ್ ಪಾಂಡ್ಯ
- ವಾಷಿಂಗ್ಟನ್ ಸುಂದರ್
- ಕುಲದೀಪ್ ಯಾದವ್
- ಮೊಹಮ್ಮದ್ ಸಿರಾಜ್
- ಮೊಹಮ್ಮದ್ ಶಮಿ
- ಉಮ್ರಾನ್ ಮಲಿಕ್
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.




