ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11

ನ್ಯೂಝಿಲೆಂಡ್ ವಿರುದ್ಧ ಟಿ20 ಸರಣಿ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಇಂದಿನಿಂದ ಆರಂಭವಾಗಲಿರುವ ಈ ಸರಣಿಯಲ್ಲಿ ಒಟ್ಟು ಐದು ಮ್ಯಾಚ್ ಗಳು ನಡೆಯಲಿದ್ದು, ಈ ಸರಣಿಯಲ್ಲಿ ಗೆಲ್ಲುವ ಮೂಲಕ ಟಿ20 ಸರಣಿ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಆತಿಥೇಯ ನ್ಯೂಝಿಲೆಂಡ್ ಪಡೆ.

ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11
Team India
Image Credit source: BCCI

Updated on: Nov 04, 2026 | 7:29 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಏಕದಿನ ಸರಣಿ ಶುರುವಾಗಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಮ್ಯಾಚ್ ನಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ನ್ಯೂಝಿಲೆಂಡ್ ಮೊದಲು ಬ್ಯಾಟ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಿದ್ದು, ಅದರಂತೆ ಎರಡೂ ತಂಡಗಳ ಆಡುವ ಬಳಗದಲ್ಲಿ ಅನುಭವಿ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಅದರಲ್ಲೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯುತ್ತಿರುವುದು ಭಾರತ ತಂಡದ ಬಲವನ್ನು ಹೆಚ್ಚಿಸಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಭಾರತ (ಪ್ಲೇಯಿಂಗ್ XI): ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ಅನ್ಶುಲ್ ಕಂಬೋಜ್, ಆಖಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್.

ನ್ಯೂಝಿಲೆಂಡ್ (ಪ್ಲೇಯಿಂಗ್ XI): ಟಿಮ್ ಸೈಫರ್ಟ್, ವಿಲ್ ಯಂಗ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.

ಇಂಡೊ-ಕಿವೀಸ್ ಮುಖಾಮುಖಿ:

ಭಾರತ ಮತ್ತು ನ್ಯೂಝಿಲೆಂಡ್ ಏಕದಿನ ಕ್ರಿಕೆಟ್‌ ನಲ್ಲಿ ಈವರೆಗೆ 123 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 63 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 52 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 7 ಪಂದ್ಯಗಳು ಕಾರಣಾಂತರದಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯಗೊಂಡಿತ್ತು.

ಭಾರತದ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಕುಲ್ದೀಪ್ ಯಾದವ್.

ಇದನ್ನೂ ಓದಿ: 17 ವರ್ಷಗಳ ದಾಖಲೆ ಪತನ… ಟೀಮ್ ಇಂಡಿಯಾಗೆ ಮುಖಭಂಗ!

ನ್ಯೂಝಿಲೆಂಡ್ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್, ನಾಥನ್ ಸ್ಮಿತ್, ವಿಲ್ ಯಂಗ್, ಬ್ಲೇರ್ ಟಿಕ್ನರ್.

Published On - 7:28 am, Wed, 4 November 26

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us