IND vs NZ, 1st ODI: ಉಮ್ರಾನ್, ಸಂಜು, ಅರ್ಷದೀಪ್​ಗೆ ಅವಕಾಶ; ಮೊದಲ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ

| Updated By: ಪೃಥ್ವಿಶಂಕರ

Updated on: Nov 25, 2022 | 7:18 AM

India VS New Zealand 1st ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಆಕ್ಲೆಂಡ್‌ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

IND vs NZ, 1st ODI: ಉಮ್ರಾನ್, ಸಂಜು, ಅರ್ಷದೀಪ್​ಗೆ ಅವಕಾಶ; ಮೊದಲ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ
india vs new zealand 3rd ODI
Follow us on

ಹಾರ್ದಿಕ್ ಪಾಂಡ್ಯ (Hardik Pandya) ನಂತರ ಇದೀಗ ಶಿಖರ್ ಧವನ್ (Shikhar Dhawan) ನೇತೃತ್ವದ ಭಾರತ ತಂಡ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್​ಗೆ ಸವಾಲೊಡ್ಡಲು ಸಜ್ಜಾಗಿದೆ. ಪಾಂಡ್ಯ ನಾಯಕತ್ವದಲ್ಲಿ ಭಾರತ ಆತಿಥೇಯರ ವಿರುದ್ಧ ಟಿ20 ಸರಣಿಯನ್ನು ಗೆದ್ದುಕೊಂಡಿತು. ಇದೀಗ ಧವನ್ ನೇತೃತ್ವದ ಭಾರತ ತಂಡವು ಶುಕ್ರವಾರದಿಂದ ಪ್ರಾರಂಭವಾಗುವ 3 ಪಂದ್ಯಗಳ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್ (India and New Zealand) ನಡುವಿನ ಮೊದಲ ಏಕದಿನ ಪಂದ್ಯ ಆಕ್ಲೆಂಡ್‌ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಹೊಸ ಮುಖಗಳಿಗೆ ಅವಕಾಶ ಸಿಕ್ಕಿದೆ. ಅದರ ಫಲವಾಗಿ ಇದೀಗ ಅರ್ಷದೀಪ್ ಸಿಂಗ್‌ಗೆ ಟಿ20 ಬಳಿಕ ಏಕದಿನ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಅವಕಾಶ ಸಿಕ್ಕಿದೆ. ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಆಕ್ಲೆಂಡ್‌ನಲ್ಲಿ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಲಿದ್ದಾರೆ. ಟಾಸ್‌ಗೂ ಮುನ್ನ ಇಬ್ಬರಿಗೂ ಕ್ಯಾಪ್ ನೀಡಲಾಯಿತು. ಹಾಗೆಯೇ ಸಂಜು ಸ್ಯಾಮ್ಸನ್​ಗೂ ಕೂಡ ಮೊದಲ ಏಕದಿನ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿದೆ.

ಅನುಭವಿಗಳಿಗೆ ವಿಶ್ರಾಂತಿ

ಟಿ20ಯಂತೆ ಏಕದಿನ ಸರಣಿಯಲ್ಲೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್​ರಂತಹ ಸ್ಟಾರ್ ಬ್ಯಾಟ್ಸ್​ಮನ್​ಗಳ ಅನುಪಸ್ಥಿತಿಯಲ್ಲಿ ಭಾರತ ಕಣಕ್ಕಿಳಿಯುತ್ತಿದೆ. ಕಳೆದ ಬಾರಿ ಎರಡೂ ತಂಡಗಳು ನ್ಯೂಜಿಲೆಂಡ್‌ನಲ್ಲಿ ಮುಖಾಮುಖಿಯಾದಾಗ ಭಾರತ 0-3 ಅಂತರದಲ್ಲಿ ಸೋಲನುಭವಿಸಿತ್ತು.

ಧವನ್ ಪಡೆ ಯುವ ಪ್ರತಿಭೆಗಳಿಂದ ಕೂಡಿದ್ದು, ಟಿ20 ಸರಣಿಯ ಸೋಲನ್ನು ಸರಿಗಟ್ಟಲು ಹವಣಿಸುತ್ತಿರುವ ಕೇನ್ ವಿಲಿಯಮ್ಸನ್ ತಂಡ ಸ್ಟಾರ್ ಆಟಗಾರರಿಂದ ಅಲಂಕರಿಸಲ್ಪಟ್ಟಿದೆ. ವಾಸ್ತವವಾಗಿ, ಟಿ20ಯಲ್ಲಿ ಆತಿಥೇಯರ ಸೋಲಿಗೆ ಮಳೆ ಪ್ರಮುಖ ಕಾರಣವಾಯಿತು. ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಬಳಿಕ ಭಾರತ ಎರಡನೇ ಪಂದ್ಯವನ್ನು ದೊಡ್ಡ ಅಂತರದಿಂದ ಗೆದ್ದುಕೊಂಡಿತು. ಹಾಗೆಯೇ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಮಳೆಯಿಂದಾಗಿ ಟೈ ಆಗಿದ್ದರಿಂದಾಗಿ ಪಾಂಡ್ಯ ತಂಡವು ಸರಣಿಯನ್ನು ವಶಪಡಿಸಿಕೊಂಡಿತ್ತು.

ಉಭಯ ತಂಡಗಳು ಹೀಗಿವೆ

ಭಾರತದ ಆಡುವ ಇಲೆವೆನ್: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರಿಷಭ್ ಪಂತ್ (ಉಪನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಟಾಮ್ ಲ್ಯಾಥಮ್, ಡಾರೆಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್

Published On - 7:14 am, Fri, 25 November 22