
India vs New Zealand 1st Odi: ಶ್ರೀಲಂಕಾ ವಿರುದ್ಧ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ (Team India) ಇದೀಗ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಜನವರಿ 18 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಮೊದಲ ಏಕದಿನ ಪಂದ್ಯವು ಹೈದರಾಬಾದ್ನಲ್ಲಿ ಬುಧವಾರ ನಡೆಯಲಿದೆ. ಜನವರಿ 21 ರಂದು ನಡೆಯಲಿರುವ 2ನೇ ಪಂದ್ಯಕ್ಕೆ ರಾಯಪುರದ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಮೂರನೇ ಪಂದ್ಯವು ಜನವರಿ 24 ರಂದು ಇಂಧೋರ್ನಲ್ಲಿ ನಡೆಯಲಿದೆ. ಈ ಸರಣಿಯ ವೇಳಾ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ ಯಾವಾಗ?
ಜನವರಿ 18 ರಂದು ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯವಾಡಲಿದೆ.
ಭಾರತ vs ನ್ಯೂಜಿಲೆಂಡ್ (IND vs NZ) ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ.
ಮೊದಲ ಏಕದಿನ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗುತ್ತದೆ?
ಭಾರತ vs ನ್ಯೂಜಿಲೆಂಡ್ (IND vs NZ) ಮೊದಲ ಏಕದಿನ ಪಂದ್ಯ ಮಧ್ಯಾಹ್ನ 01:30 ಕ್ಕೆ ಶುರುವಾಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು?
ಭಾರತ vs ನ್ಯೂಜಿಲೆಂಡ್ ಸರಣಿಯ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಇನ್ನು ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.
ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ:
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.