ಏಕದಿನ ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ನ ಫೈನಲ್ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (117) ಹಾಗೂ ಶ್ರೇಯಸ್ ಅಯ್ಯರ್ (105) ಶತಕ ಸಿಡಿಸಿ ಮಿಂಚಿದರು. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಕಲೆಹಾಕಿತು.
398 ರನ್ಗಳ ಬೃಹತ್ ಗುರಿಯನ್ನು ಪಡೆದ ನ್ಯೂಝಿಲೆಂಡ್ ಪರ ಡೇರಿಲ್ ಮಿಚೆಲ್ (134) ಶತಕ ಬಾರಿಸಿದರು. ಇದಾಗ್ಯೂ 50 ಓವರ್ಗಳಲ್ಲಿ ನ್ಯೂಝಿಲೆಂಡ್ ತಂಡವು 327 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಟೀಮ್ ಇಂಡಿಯಾ 70 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು 118 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 60 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ಟೈನಲ್ಲಿ ಅಂತ್ಯಕಂಡರೆ, 7 ಮ್ಯಾಚ್ಗಳು ಫಲಿತಾಂಶರಹಿತವಾಗಿತ್ತು.
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
48ನೇ ಓವರ್ನಲ್ಲಿ 2 ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ.
48.5 ಓವರ್ಗಳಲ್ಲಿ 327 ರನ್ಗಳಿಸಿ ಆಲೌಟ್ ಆದ ನ್ಯೂಝಿಲೆಂಡ್.
70 ರನ್ಗಳ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ.
ಈ ಗೆಲುವಿನೊಂದಿಗೆ 2023 ರ ವಿಶ್ವಕಪ್ನ ಫೈನಲ್ಗೇರಿದ ಭಾರತ ತಂಡ.
9.5 ಓವರ್ಗಳಲ್ಲಿ 57 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದ ಮೊಹಮ್ಮದ್ ಶಮಿ.
ಮೊಹಮ್ಮದ್ ಸಿರಾಜ್ ಎಸೆದ 48ನೇ ಓವರ್ನ 5ನೇ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಮಿಚೆಲ್ ಸ್ಯಾಂಟ್ನರ್.
ನ್ಯೂಝಿಲೆಂಡ್ ತಂಡದ 8ನೇ ವಿಕೆಟ್ ಪತನ. ಗೆಲುವಿನತ್ತ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಟ್ರೆಂಟ್ ಬೌಲ್ಟ್ ಹಾಗೂ ಟಿಮ್ ಸೌಥಿ ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 46ನೇ ಓವರ್ನ 2ನೇ ಎಸೆತದಲ್ಲಿ ಲೆಗ್ ಸೈಡ್ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಡೇರಿಲ್ ಮಿಚೆಲ್.
119 ಎಸೆತಗಳಲ್ಲಿ 134 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಮಿಚೆಲ್.
ಈ ಬಾರಿಯ ವಿಶ್ವಕಪ್ನಲ್ಲಿ 3ನೇ ಬಾರಿ 5 ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ.
45 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 306 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕೊನೆಯ 5 ಓವರ್ಗಳಲ್ಲಿ 92 ರನ್ಗಳ ಅವಶ್ಯಕತೆ.
ಗೆಲುವಿನತ್ತ ಸಾಗುತ್ತಿರುವ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಮಿಚೆಲ್ ಸ್ಯಾಂಟ್ನರ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ಕುಲ್ದೀಪ್ ಯಾದವ್ ಎಸೆದ 44ನೇ ಓವರ್ನ 5ನೇ ಎಸೆತದಲ್ಲಿ ಕ್ಯಾಚ್ ನೀಡಿ ಹೊರ ನಡೆದ ಮಾರ್ಕ್ ಚಾಪ್ಮನ್ (2).
ನ್ಯೂಝಿಲೆಂಡ್ ತಂಡಕ್ಕೆ ಗೆಲ್ಲಲು 36 ಎಸೆತಗಳಲ್ಲಿ 99 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಮಿಚೆಲ್ ಸ್ಯಾಂಟ್ನರ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ 43ನೇ ಓವರ್ನ 5ನೇ ಎಸೆತದಲ್ಲಿ ಲಾಂಗ್ ಆಫ್ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಗ್ಲೆನ್ ಫಿಲಿಪ್ಸ್ (41).
ಕ್ರೀಸ್ನಲ್ಲಿ ಮಾರ್ಕ್ ಚಾಪ್ಮನ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ನ್ಯೂಝಿಲೆಂಡ್ ಗೆಲುವಿಗೆ 42 ಎಸೆತಗಳಲ್ಲಿ 103 ರನ್ಗಳ ಅವಶ್ಯಕತೆ.
ಮೊಹಮ್ಮದ್ ಸಿರಾಜ್ ಎಸೆದ 41ನೇ ಓವರ್ನ 2ನೇ ಮತ್ತು 3ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಗ್ಲೆನ್ ಫಿಲಿಪ್ಸ್.
ಕ್ರೀಸ್ ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 40ನೇ ಓವರ್ನ 5ನೇ ಎಸೆತದಲ್ಲಿ ಹಿಂಬದಿಯತ್ತ ಸಿಕ್ಸ್ ಬಾರಿಸಿದ ಡೇರಿಲ್ ಮಿಚೆಲ್.
40 ಓವರ್ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ ತಂಡದ ಸ್ಕೋರ್ 266 ರನ್ಗಳು.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ನ್ಯೂಝಿಲೆಂಡ್ಗೆ 60 ಎಸೆತಗಳಲ್ಲಿ 132 ರನ್ಗಳ ಅವಶ್ಯಕತೆ
85 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 8 ಫೋರ್ಗಳೊಂದಿಗೆ ಶತಕ ಪೂರೈಸಿದ ಡೇರಿಲ್ ಮಿಚೆಲ್.
ಮೊಹಮ್ಮದ್ ಶಮಿ ಎಸೆದ 33ನೇ ಓವರ್ನ 2ನೇ ಎಸೆತದಲ್ಲಿ ಲೆಗ್ ಸೈಡ್ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಕೇನ್ ವಿಲಿಯಮ್ಸನ್.
73 ಎಸೆತಗಳಲ್ಲಿ 69 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ವಿಲಿಯಮ್ಸನ್.
4ನೇ ಎಸೆತದಲ್ಲಿ ಟಾಮ್ ಲಾಥಮ್ (0) ರನ್ನು ಎಲ್ಬಿಡಬ್ಲ್ಯೂ ಮಾಡಿದ ಶಮಿ.
ಕುಲ್ದೀಪ್ ಯಾದವ್ ಎಸೆದ 30ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಕೇನ್ ವಿಲಿಯಮ್ಸನ್.
ಐದನೇ ಎಸೆತದಲ್ಲಿ ರಿವರ್ಸ್ ಸ್ವೀಪ್ ಶಾಟ್ ಮೂಲಕ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಡೇರಿಲ್ ಮಿಚೆಲ್.
30 ಓವರ್ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ ತಂಡದ ಸ್ಕೋರ್ 199 ರನ್ಗಳು.
ರವೀಂದ್ರ ಜಡೇಜಾ ಎಸೆದ 27ನೇ ಓವರ್ನ 5ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಬಾರಿಸಿದ ಡೇರಿಲ್ ಮಿಚೆಲ್.
ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ನ್ಯೂಝಿಲೆಂಡ್ ಬ್ಯಾಟರ್ಗಳು.
ಕ್ರೀಸ್ನಲ್ಲಿ ಕೇನ್ ವಿಲಿಯಮ್ಸನ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 25ನೇ ಓವರ್ನ 4ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಡೇರಿಲ್ ಮಿಚೆಲ್.
25 ಓವರ್ಗಳಲ್ಲಿ 161 ರನ್ ಕಲೆಹಾಕಿದ ನ್ಯೂಝಿಲೆಂಡ್.
2 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿರುವ ಟೀಮ್ ಇಂಡಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಕೇನ್ ವಿಲಿಯಮ್ಸನ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
49 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 5 ಫೋರ್ಗಳೊಂದಿಗೆ ಅರ್ಧಶತಕ ಪೂರೈಸಿದ ಡೇರಿಲ್ ಮಿಚೆಲ್.
3ನೇ ವಿಕೆಟ್ಗೆ ಶತಕದ ಜೊತೆಯಾಟವಾಡಿರುವ ಕೇನ್ ವಿಲಿಯಮ್ಸನ್ ಹಾಗೂ ಡೇರಿಲ್ ಮಿಚೆಲ್.
23 ಓವರ್ ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ ತಂಡದ ಸ್ಕೋರ್ 148 ರನ್ಗಳು.
ಕುಲ್ದೀಪ್ ಯಾದವ್ ಎಸೆದ 20ನೇ ಓವರ್ನ 4ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಡೇರಿಲ್ ಮಿಚೆಲ್.
20 ಓವರ್ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ ತಂಡದ ಸ್ಕೋರ್ 124 ರನ್ಗಳು.
ಕ್ರೀಸ್ನಲ್ಲಿ ಕೇನ್ ವಿಲಿಯಮ್ಸನ್ (32) ಹಾಗೂ ಡೇರಿಲ್ ಮಿಚೆಲ್ (41) ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 17ನೇ ಓವರ್ನಲ್ಲಿ ಭರ್ಜರಿ ಸಿಕ್ಸ್ ಹಾಗೂ ಫೋರ್ ಬಾರಿಸಿದ ಡೇರಿಲ್ ಮಿಚೆಲ್.
ಈ ಸಿಕ್ಸ್-ಫೋರ್ಗಳೊಂದಿಗೆ ಶತಕ ಪೂರೈಸಿದ ನ್ಯೂಝಿಲೆಂಡ್ ತಂಡ.
ಕ್ರೀಸ್ನಲ್ಲಿ ಕೇನ್ ವಿಲಿಯಮ್ಸನ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 15ನೇ ಓವರ್ನ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸಿದ ಕೇನ್ ವಿಲಿಯಮ್ಸನ್.
15 ಓವರ್ಗಳ ಮುಕ್ತಾಯದ ವೇಳೆಗೆ 87 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ಕೇನ್ ವಿಲಿಯಮ್ಸನ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
10 ಓವರ್ಗಳ ಮುಕ್ತಾಯದ ವೇಳೆಗೆ ಕೇವಲ 46 ರನ್ ಕಲೆಹಾಕಿದ ನ್ಯೂಝಿಲೆಂಡ್.
2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಮೊಹಮ್ಮದ್ ಶಮಿ.
ಕ್ರೀಸ್ನಲ್ಲಿ ಕೇನ್ ವಿಲಿಯಮ್ಸನ್ (4) ಹಾಗೂ ಡೇರಿಲ್ ಮಿಚೆಲ್ (1) ಬ್ಯಾಟಿಂಗ್.
ನ್ಯೂಝಿಲೆಂಡ್ ಆರಂಭಿಕರಾದ ಡೆವೊನ್ ಕಾನ್ವೆ ಹಾಗೂ ರಚಿನ್ ರವೀಂದ್ರ ಔಟ್.
ಮೊಹಮ್ಮದ್ ಶಮಿ ಎಸೆದ 8ನೇ ಓವರ್ನ 4ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ರಚಿನ್ ರವೀಂದ್ರ.
22 ಎಸೆತಗಳಲ್ಲಿ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರಚಿನ್ ರವೀಂದ್ರ.
ಕ್ರೀಸ್ನಲ್ಲಿ ಕೇನ್ ವಿಲಿಯಮ್ಸನ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 6ನೇ ಓವರ್ನ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಡೆವೊನ್ ಕಾನ್ವೆ.
15 ಎಸೆತಗಳಲ್ಲಿ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಡೆವೊನ್ ಕಾನ್ವೆ.
ಟೀಮ್ ಇಂಡಿಯಾಗೆ ಮೊದಲ ಯಶಸ್ಸು.
5 ಓವರ್ಗಳ ಮುಕ್ತಾಯದ ವೇಳೆಗೆ 30 ರನ್ ಕಲೆಹಾಕಿದ ನ್ಯೂಝಿಲೆಂಡ್.
ನ್ಯೂಝಿಲೆಂಡ್ ಆರಂಭಿಕರಿಂದ ಉತ್ತಮ ಆರಂಭ.
ಕ್ರೀಸ್ನಲ್ಲಿ ಎಡಗೈ ದಾಂಡಿಗರಾದ ಡೆವೊನ್ ಕಾನ್ವೆ ಹಾಗೂ ರಚಿನ್ ರವೀಂದ್ರ ಬ್ಯಾಟಿಂಗ್.
ನ್ಯೂಝಿಲೆಂಡ್ಗೆ 298 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
ಮೊಹಮ್ಮದ್ ಸಿರಾಜ್ ಎಸೆದ 2ನೇ ಓವರ್ನ 5ನೇ ಎಸೆತದಲ್ಲಿ ಥರ್ಡ್ ಮ್ಯಾನ್ ಫೀಲ್ಡರ್ನತ್ತ ಫೋರ್ ಬಾರಿಸಿದ ರಚಿನ್ ರವೀಂದ್ರ.
ಕ್ರೀಸ್ನಲ್ಲಿ ಡೆವೊನ್ ಕಾನ್ವೆ ಹಾಗೂ ರಚಿನ್ ರವೀಂದ್ರ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ ಮೊದಲ ಓವರ್ನಲ್ಲಿ ಆಫ್ ಸೈಡ್ನತ್ತ ಎರಡು ಆಕರ್ಷಕ ಬೌಂಡರಿಗಳನ್ನು ಬಾರಿಸಿದ ಡೆವೊನ್ ಕಾನ್ವೆ.
ಕ್ರೀಸ್ನಲ್ಲಿ ಡೆವೊನ್ ಕಾನ್ವೆ ಹಾಗೂ ರಚಿನ್ ರವೀಂದ್ರ ಬ್ಯಾಟಿಂಗ್.
ಟಿಮ್ ಸೌಥಿ ಎಸೆದ ಕೊನೆಯ ಓವರ್ನಲ್ಲಿ ಸಿಕ್ಸ್-ಫೋರ್ಗಳೊಂದಿಗೆ 15 ರನ್ ಕಲೆಹಾಕಿದ ಕೆಎಲ್ ರಾಹುಲ್-ಗಿಲ್.
50 ಓವರ್ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 397 ರನ್ ಕಲೆಹಾಕಿದ ಟೀಮ್ ಇಂಡಿಯಾ.
ನ್ಯೂಝಿಲೆಂಡ್ ತಂಡಕ್ಕೆ 398 ರನ್ಗಳ ಕಠಿಣ ಗುರಿ ನೀಡಿದ ಭಾರತ ತಂಡ.
ಟ್ರೆಂಟ್ ಬೌಲ್ಟ್ ಎಸೆದ 49ನೇ ಓವರ್ನ 5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಲಾಂಗ್ ಆನ್ ಬೌಂಡರಿ ಲೈನ್ನಲ್ಲಿ ಕ್ಯಾಚ್ ಆದ ಶ್ರೇಯಸ್ ಅಯ್ಯರ್.
70 ಎಸೆತಗಳಲ್ಲಿ 105 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಶ್ರೇಯಸ್ ಅಯ್ಯರ್.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
67 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 3 ಫೋರ್ ಗಳೊಂದಿಗೆ ಶತಕ ಪೂರೈಸಿದ ಶ್ರೇಯಸ್ ಅಯ್ಯರ್.
ಕೊನೆಯ 2 ಓವರ್ಗಳು ಬಾಕಿ, ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ.
ಕ್ರೀಸ್ ನಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
45 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 341 ರನ್ಗಳು.
ರೋಹಿತ್ ಶರ್ಮಾ (47) ಹಾಗೂ ವಿರಾಟ್ ಕೊಹ್ಲಿ (117) ಔಟ್.
ಸ್ನಾಯು ಸೆಳೆತದ ಕಾರಣ ನಿವೃತ್ತಿ ಪಡೆದ ಶುಭ್ಮನ್ ಗಿಲ್ (79).
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
ಟಿಮ್ ಸೌಥಿ ಎಸೆದ 44ನೇ ಓವರ್ನ ಕೊನೆಯ ಎಸೆತದಲ್ಲಿ ಡೆವೊನ್ ಕಾನ್ವೆಗೆ ಕ್ಯಾಚ್ ನೀಡಿದ ವಿರಾಟ್ ಕೊಹ್ಲಿ.
113 ಎಸೆತಗಳಲ್ಲಿ 117 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಕಿಂಗ್ ಕೊಹ್ಲಿ.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
42 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 303 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
ಲಾಕಿ ಫರ್ಗುಸನ್ ಎಸೆದ 40ನೇ ಓವರ್ನ 3ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಶ್ರೇಯಸ್ ಅಯ್ಯರ್.
95 ರನ್ ಬಾರಿಸಿ ಶತಕದತ್ತ ಮುನ್ನುಗ್ಗುತ್ತಿರುವ ವಿರಾಟ್ ಕೊಹ್ಲಿ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
35 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅರ್ಧ ಶತಕ ಪೂರೈಸಿದ ಶ್ರೇಯಸ್ ಅಯ್ಯರ್.
37 ಓವರ್ಗಳಲ್ಲಿ 270 ರನ್ ಕಲೆ ಹಾಕಿರುವ ಟೀಮ್ ಇಂಡಿಯಾ.
ಕ್ರೀಸ್ ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
35 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 248 ರನ್ಗಳು.
ರೋಹಿತ್ ಶರ್ಮಾ (47) ವಿಕೆಟ್ ಪಡೆಯಲು ಮಾತ್ರ ಯಶಸ್ವಿಯಾಗಿರುವ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
ಸ್ನಾಯು ಸೆಳೆತದ ಕಾರಣ ನಿವೃತ್ತಿ (ರಿಟೆರ್ಡ್ ಹರ್ಟ್) ತೆಗೆದುಕೊಂಡಿರುವ ಶುಭ್ಮನ್ ಗಿಲ್ (79).
ಈ ಪಂದ್ಯದಲ್ಲಿ 80 ರನ್ ಪೂರೈಸುವುದರೊಂದಿಗೆ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
ಟಿಮ್ ಸೌಥಿ ಎಸೆದ 33ನೇ ಓವರ್ನ 3ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಬಾರಿಸಿದ ಶ್ರೇಯಸ್ ಅಯ್ಯರ್.
33 ಓವರ್ಗಳಲ್ಲಿ 238 ರನ್ ಕಲೆಹಾಕಿರುವ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
ಟಿಮ್ ಸೌಥಿ ಎಸೆದ 30ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಆಕರ್ಷಕ ಸಿಕ್ಸ್ ಬಾರಿಸಿದ ವಿರಾಟ್ ಕೊಹ್ಲಿ.
30 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 214 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
29 ಓವರ್ಗಳಲ್ಲಿ ದ್ವಿಶತಕ ಪೂರೈಸಿದ ಟೀಮ್ ಇಂಡಿಯಾ.
ಕೇವಲ 1 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿರುವ ನ್ಯೂಝಿಲೆಂಡ್.
ಬೃಹತ್ ಮೊತ್ತ ಪೇರಿಸುವ ಇರಾದೆಯಲ್ಲಿ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
ರಚಿನ್ ರವೀಂದ್ರ ಎಸೆದ 3ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಶ್ರೇಯಸ್ ಅಯ್ಯರ್.
59 ಎಸೆತಗಳಲ್ಲಿ 5 ಫೋರ್ಗಳೊಂದಿಗೆ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ.
ಇದು ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿಯ 72ನೇ ಅರ್ಧಶತಕ ಎಂಬುದು ವಿಶೇಷ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
25 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 178 ರನ್ಗಳು.
ರೋಹಿತ್ ಶರ್ಮಾ (47) ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿರುವ ನ್ಯೂಝಿಲೆಂಡ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
79 ರನ್ ಬಾರಿಸಿ ನಿವೃತ್ತಿ (ರಿಟೆರ್ಡ್ ಹರ್ಟ್) ತೆಗೆದುಕೊಂಡಿರುವ ಶುಭ್ಮನ್ ಗಿಲ್.
ಮಿಚೆಲ್ ಸ್ಯಾಂಟ್ನರ್ ಎಸೆದ 23ನೇ ಓವರ್ನ 3ನೇ ಎಸೆತದಲ್ಲಿ ಲಾಂಗ್ ಆನ್ನತ್ತ ಆಕರ್ಷಕ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
ಸ್ಯಾಯು ಸೆಳೆತದ ಕಾರಣ ಮೈದಾನದಿಂದ ಹೊರ ನಡೆದ ಶುಭ್ಮನ್ ಗಿಲ್.
65 ಎಸೆತಗಳಲ್ಲಿ 79 ರನ್ ಬಾರಿಸಿ ರಿಟೆರ್ಡ್ ಹರ್ಟ್ ತೆಗೆದುಕೊಂಡ ಗಿಲ್.
ಗ್ಲೆನ್ ಫಿಲಿಪ್ಸ್ ಎಸೆದ 20ನೇ ಓವರ್ನ 3ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಶುಭ್ಮನ್ ಗಿಲ್.
ಈ ಸಿಕ್ಸ್ನೊಂದಿಗೆ 150 ರನ್ ಪೂರೈಸಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ (26) ಹಾಗೂ ಶುಭ್ಮನ್ ಗಿಲ್ (74) ಬ್ಯಾಟಿಂಗ್.
2ನೇ ವಿಕೆಟ್ಗೆ 67 ರನ್ಗಳ ಜೊತೆಯಾಟವಾಡಿರುವ ಕೊಹ್ಲಿ-ಗಿಲ್
18 ಓವರ್ಗಳಲ್ಲಿ 138 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿರುವ ನ್ಯೂಝಿಲೆಂಡ್.
15 ಓವರ್ಗಳ ಮುಕ್ತಾಯದ ವೇಳೆಗೆ 118 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಟೀಮ್ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ (47) ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ (16) ಹಾಗೂ ಶುಭ್ಮನ್ ಗಿಲ್ (52) ಬ್ಯಾಟಿಂಗ್.
41 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅರ್ಧಶತಕ ಪೂರೈಸಿದ ಶುಭ್ಮನ್ ಗಿಲ್.
ರಚಿನ್ ರವೀಂದ್ರ ಎಸೆದ 14ನೇ ಓವರ್ನ 5ನೇ ಎಸೆತದಲ್ಲಿ ಎಕ್ಸ್ಟ್ರಾ ಕವರ್ನತ್ತ ಆಕರ್ಷಕ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಲಾಕಿ ಫರ್ಗುಸನ್ ಎಸೆದ 13ನೇ ಓವರ್ನ ಮೊದಲ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಶುಭ್ಮನ್ ಗಿಲ್.
2ನೇ ಎಸೆತದಲ್ಲಿ ಗಿಲ್ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್.
ಈ ಸಿಕ್ಸ್ನೊಂದಿಗೆ ಶತಕ ಪೂರೈಸಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಲಾಕಿ ಫರ್ಗುಸನ್ ಎಸೆದ 10ನೇ ಓವರ್ನಲ್ಲಿ ಲೆಗ್ ಸೈಡ್ನತ್ತ 2 ಫೋರ್ಗಳನ್ನು ಬಾರಿಸಿದ ಶುಭ್ಮನ್ ಗಿಲ್.
10 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 84 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ರೋಹಿತ್ ಶರ್ಮಾ (47) ಔಟ್.
ಟಿಮ್ ಸೌಥಿ ಎಸೆದ 9ನೇ ಓವರ್ನ 2ನೇ ಎಸೆತದಲ್ಲಿ ಕೇನ್ ವಿಲಿಯಮ್ಸನ್ಗೆ ಕ್ಯಾಚ್ ನೀಡಿದ ರೋಹಿತ್ ಶರ್ಮಾ.
29 ಎಸೆತಗಳಲ್ಲಿ 47 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಎಸೆದ 6ನೇ ಓವರ್ನ 2ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ರೋಹಿತ್ ಶರ್ಮಾ.
3ನೇ ಎಸೆತದಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಮತ್ತೊಂದು ಭರ್ಜರಿ ಸಿಕ್ಸ್.
ಈ ಫೋರ್-ಸಿಕ್ಸ್ನೊಂದಿಗೆ ಅರ್ಧಶತಕ ಪೂರೈಸಿದ ಟೀಮ್ ಇಂಡಿಯಾ.
ಟ್ರೆಂಟ್ ಬೌಲ್ಟ್ ಎಸೆದ 5ನೇ ಓವರ್ನ 2ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ರೋಹಿತ್ ಶರ್ಮಾ.
5 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾದ ಸ್ಕೋರ್ 47 ರನ್ಗಳು.
ಟೀಮ್ ಇಂಡಿಯಾಗೆ ಸಿಡಿಲಬ್ಬರದ ಆರಂಭ ಒದಗಿಸಿದ ರೋಹಿತ್ ಶರ್ಮಾ (34) ಹಾಗೂ ಶುಭ್ಮನ್ ಗಿಲ್ (11).
ಟಿಮ್ ಸೌಥಿ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ರೋಹಿತ್ ಶರ್ಮಾ.
4ನೇ ಎಸೆತದಲ್ಲಿ ಫ್ಲಿಕ್ ಮಾಡಿ ಚೆಂಡನ್ನು ಸಿಕ್ಸರ್ಗೆ ಅಟ್ಟಿದ ಹಿಟ್ಮ್ಯಾನ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಟ್ರೆಂಟ್ ಬೌಲ್ಟ್ ಎಸೆದ 3ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಕವರ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ.
ಇದು ಟೀಮ್ ಇಂಡಿಯಾ ಇನಿಂಗ್ಸ್ನ ಮೊದಲ ಸಿಕ್ಸರ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಬಲಗೈ ವೇಗಿ ಟಿಮ್ ಸೌಥಿ ಎಸೆದ 2ನೇ ಓವರ್ನ 3ನೇ ಮತ್ತು 4ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಶುಭ್ಮನ್ ಗಿಲ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಜೆಡಿಎಸ್ ಪಾರ್ಟಿನೇ ಅಲ್ಲ, ಅದು ದೇವೇಗೌಡ & ಫ್ಯಾಮಿಲಿ ಪಾರ್ಟಿ ಎಂದು ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮುಂದಿನ ದಿನಗಳಲ್ಲಿ ಮತಗಳು, ರಾಜಕಾರಣ ಧ್ರುವೀಕರಣ ಆಗುತ್ತದೆ. ಜೆಡಿಎಸ್ ಮುಂದೆ ಬಿಜೆಪಿ ಜೊತೆ ವಿಲೀನವಾದರೂ ಆಶ್ಚರ್ಯ ಇಲ್ಲ. ಹೆಚ್.ಡಿ.ದೇವೇಗೌಡರು ಇರುವಷ್ಟು ದಿನ ಜೆಡಿಎಸ್ ಇರಬಹುದು. ಆ ಮೇಲೆ ಬಿಜೆಪಿ ಜೊತೆ ಜೆಡಿಎಸ್ ಪಕ್ಷ ವಿಲೀನ ಆಗಿಯೇ ಆಗುತ್ತೆ ಎಂದು JDS ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರ್ನ 4ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ರೋಹಿತ್ ಶರ್ಮಾ.
5ನೇ ಎಸೆತದಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ ಎಕ್ಸ್ಟ್ರಾ ಕವರ್ನತ್ತ ಫೋರ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
🚨 Toss Update from Mumbai 🚨
Rohit Sharma wins the toss and #TeamIndia have elected to bat in Semi-Final 1 🙌
Follow the match ▶️ https://t.co/FnuIu53xGu#CWC23 | #MenInBlue | #INDvNZ pic.twitter.com/HZW9piWA4u
— BCCI (@BCCI) November 15, 2023
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Published On - 1:33 pm, Wed, 15 November 23