IND VS NZ: ಕಿವೀಸ್ ಪ್ರವಾಸದಲ್ಲಿ ಪಂತ್ ಆರಂಭಿಕ..? ಓಪನಿಂಗ್ ರೇಸ್​ನಲ್ಲಿ ಐವರು ಆಟಗಾರರು

IND VS NZ: ದಿಗ್ಗಜ ಬ್ಯಾಟ್ಸ್‌ಮನ್‌ಗಳ ಅನುಪಸ್ಥಿತಿಯಲ್ಲಿ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕ ಹೇಗಿರುತ್ತದೆ ಎಂಬುದು ಒಂದು ಪ್ರಶ್ನೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮುಖ ಪ್ರಶ್ನೆಯೆಂದರೆ ಆರಂಭಿಕ ಸ್ಥಾನದ ಬಗ್ಗೆ.

IND VS NZ: ಕಿವೀಸ್ ಪ್ರವಾಸದಲ್ಲಿ ಪಂತ್ ಆರಂಭಿಕ..? ಓಪನಿಂಗ್ ರೇಸ್​ನಲ್ಲಿ ಐವರು ಆಟಗಾರರು
Rishabh Pant
Follow us
TV9 Web
| Updated By: ಪೃಥ್ವಿಶಂಕರ

Updated on: Nov 16, 2022 | 6:10 PM

2022 ರ ಟಿ20 ವಿಶ್ವಕಪ್‌ನ (T20 World Cup 2022) ಸೆಮಿಫೈನಲ್‌ನಲ್ಲಿ ಸೋತ ನಂತರ ಭಾರತ ಹಾಗೂ ನ್ಯೂಜಿಲೆಂಡ್ (India-New Zealand) ತಂಡಗಳು ಈಗ ಟಿ20 ಸರಣಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯವು ಶುಕ್ರವಾರ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ. ಈ ಪ್ರವಾಸದಲ್ಲಿ ರೋಹಿತ್, ವಿರಾಟ್ ಮತ್ತು ರಾಹುಲ್​ರಂತಹ (Rohit, Virat, Rahul) ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ ಈ ಸರಣಿಯಲ್ಲಿ ಟೀಂ ಇಂಡಿಯಾ ಯುವ ಆಟಗಾರರೊಂದಿಗೆ ಕಣಕ್ಕಿಳಿಯಲಿದೆ. ಈಗ ಈ ದಿಗ್ಗಜ ಬ್ಯಾಟ್ಸ್‌ಮನ್‌ಗಳ ಅನುಪಸ್ಥಿತಿಯಲ್ಲಿ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕ ಹೇಗಿರುತ್ತದೆ ಎಂಬುದು ಒಂದು ಪ್ರಶ್ನೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮುಖ ಪ್ರಶ್ನೆಯೆಂದರೆ ಆರಂಭಿಕ ಸ್ಥಾನದ ಬಗ್ಗೆ.

ಟಿ20 ಸರಣಿಯಲ್ಲಿ ಭಾರತದ ಆರಂಭಿಕ ಆಟಗಾರ ಯಾರು? ಈ ಪ್ರಶ್ನೆಗೆ ಪಾಂಡ್ಯ ಮತ್ತು ಲಕ್ಷ್ಮಣ್ ಜೋಡಿಯಲ್ಲೇ ಉತ್ತರ ಸಿಗಬೇಕಿದೆ. ಭಾರತ ತಂಡದಲ್ಲಿ ಆರಂಭಿಕ ಸ್ಥಾನಕ್ಕೆ ಐವರು ಸ್ಪರ್ಧಿಗಳಿದ್ದಾರೆ. ಈ ಐವರಲ್ಲಿ ಯಾರು ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ ಎಂಬುದು ಪ್ರಶ್ನೆ.

ರಿಷಬ್ ಪಂತ್ ಓಪನರ್?

ರಿಷಬ್ ಪಂತ್ ನ್ಯೂಜಿಲೆಂಡ್ ಟಿ20 ಸರಣಿಯಲ್ಲಿ ತಂಡದ ಉಪನಾಯಕರಾಗಿದ್ದು, ಅವರನ್ನು ಓಪನರ್ ಆಗಿ ಕಣಕ್ಕಿಳಿಸಬೇಕಂದು ನಿರಂತರವಾಗಿ ಮಾತು ಕೇಳಿಬರುತ್ತಿದೆ. ಇಂಗ್ಲೆಂಡ್ ವಿರುದ್ಧ ಪಂತ್‌ಗೆ ಓಪನಿಂಗ್ ಅವಕಾಶ ಸಿಕ್ಕಿತು ಆದರೆ ಓಪನರ್ ಆಗಿ ಪಂತ್ ಬ್ಯಾಟ್ ಸದ್ದು ಮಾಡಲಿಲ್ಲ. ರಿಷಭ್ ತನ್ನ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಓಪನರ್ ಆಗಿಯೇ ಕಣಕ್ಕಿಳಿಯುತ್ತಿದ್ದರು. ಹೀಗಾಗಿ ಪಂತ್​ರನ್ನು ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಪಂತ್ ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಚ್ಚು ಹೆಸರುವಾಸಿಯಾಗಿದ್ದು, ಮೊದಲ 6 ಓವರ್‌ಗಳಲ್ಲಿ ವೇಗವಾಗಿ ರನ್ ಗಳಿಸುವ ಸಾಮಥ್ರ್ಯ ಅವರಲ್ಲಿದೆ.

ಇದನ್ನೂ ಓದಿ:  ICC T20 Rankings: ಸೂರ್ಯನಿಗೆ ಸರಿಸಾಟಿ ಯಾರಿಲ್ಲ..! ಭರ್ಜರಿ ಬಡ್ತಿ ಪಡೆದ ಹಾರ್ದಿಕ್ ಪಾಂಡ್ಯ

ಇಶಾನ್ ಕಿಶನ್​ಗೆ ಯಾವ ಆರ್ಡರ್

ಮತ್ತೊಬ್ಬ ಎಡಗೈ ಬ್ಯಾಟ್ಸ್‌ಮನ್ ಕಿಶನ್ ಕೂಡ ಆರಂಭಿಕ ಆಯ್ಕೆಯಾಗಿದ್ದಾರೆ. ಕಿಶನ್ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲೂ ಉತ್ತಮ ಇನ್ನಿಂಗ್ಸ್ ಆಡಿದ್ದಾರೆ. ಆದರೆ, ಅವರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಈಗ ಇಶಾನ್ ಕಿಶನ್ 2024 ರ ಟಿ20 ವಿಶ್ವಕಪ್​ನಲ್ಲಿ ಓಪನಿಂಗ್ ಸ್ಥಾನಕ್ಕೆ ಪ್ರಮುಖ ಆಯ್ಕೆಯಾಗಿದ್ದಾರೆ.

ಸಂಜು ಸ್ಯಾಮ್ಸನ್ ಕೂಡ ಆರಂಭಿಕ ಆಯ್ಕೆ

ಸಂಜು ಸ್ಯಾಮ್ಸನ್ ಕೂಡ ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಆರಂಭಿಕರಾಗಿ ಸ್ಪರ್ಧೆಯಲ್ಲಿದ್ದಾರೆ. ಈ ಆಟಗಾರ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅವರನ್ನು ಟೀಮ್ ಇಂಡಿಯಾದ ಮುಂದಿನ ಫಿನಿಶರ್ ಎಂದು ಪರಿಗಣಿಸಲಾಗಿದ್ದರೂ, ಟಿ 20 ಸ್ವರೂಪದಲ್ಲಿ, ಸ್ಯಾಮ್ಸನ್​ಗೆ ಆರಂಭಿಕರಾಗಿ ಕಣಕ್ಕಿಳಿಯುವ ಎಲ್ಲಾ ಅರ್ಹತೆಗಳು ಅವರಲ್ಲಿವೆ.

ಹೂಡಾ ಮತ್ತು ಗಿಲ್ ಕೂಡ ಸ್ಪರ್ಧಿಗಳು

ದೀಪಕ್ ಹೂಡಾ ಕೂಡ ಓಪನಿಂಗ್‌ಗೆ ಸ್ಪರ್ಧಿಯಾಗಿದ್ದಾರೆ. ಐರ್ಲೆಂಡ್ ಟಿ20 ಸರಣಿಯಲ್ಲಿ, ಹೂಡ್ ಅಗ್ರ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಶತಕ ಬಾರಿಸಿದರು. ಅಂತಹ ಪರಿಸ್ಥಿತಿಯಲ್ಲಿ, ಹೂಡಾ ಆರಂಭಿಕ ಸ್ಥಾನಕ್ಕೆ ಉತ್ತಮ ಆಯ್ಕೆಯಾಗಿದ್ದಾರೆ. ಇವರ ಹೊರತಾಗಿ ಶುಭಮನ್ ಗಿಲ್ ಕೂಡ ಓಪನಿಂಗ್‌ಗೆ ಸ್ಪರ್ಧಿಯಾಗಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಐಪಿಎಲ್‌ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಅನುಭವ ಹೊಂದಿದ್ದಾರೆ. ಇದರ ಹೊರತಾಗಿ, ಗಿಲ್ ಏಕದಿನ ಮತ್ತು ಟೆಸ್ಟ್ ಸ್ವರೂಪಗಳಲ್ಲಿಯೂ ಉತ್ತಮ ಆರಂಭಿಕ ಅನುಭವವನ್ನು ಹೊಂದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ