India vs New Zealand 1st Test: ಅಯ್ಯರ್ ಶತಕದ ಫಲ: ಬೋಜನ ವಿರಾಮದ ವೇಳೆಗೆ ಭಾರತ 339-8

Shreyas Iyer Century: ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಸದ್ಯ ಬೋಜನ ವಿರಾಮದ ಹೊತ್ತಿಗೆ 8 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದೆ. ಆರ್. ಅಶ್ವಿನ್ 38 (54) ಮತ್ತು ಉಮೇಶ್ ಯಾದವ್ 4 (28) ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

India vs New Zealand 1st Test: ಅಯ್ಯರ್ ಶತಕದ ಫಲ: ಬೋಜನ ವಿರಾಮದ ವೇಳೆಗೆ ಭಾರತ 339-8
ಶ್ರೇಯಸ್ ಅಯ್ಯರ್
Follow us
TV9 Web
| Updated By: Vinay Bhat

Updated on: Nov 26, 2021 | 11:52 AM

ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಭಾರತ (India vs New Zealand 1st Test) ಉತ್ತಮ ಮೊತ್ತ ಕಲೆಹಾಕಿದೆ. ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಸದ್ಯ ಬೋಜನ ವಿರಾಮದ ಹೊತ್ತಿಗೆ 8 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದೆ. ಶ್ರೇಯಸ್ ಅಯ್ಯರ್ (Shreyas Iyer) ಶತಕ ಸಿಡಿಸಿ ಔಟ್ ಆಗಿದ್ದು ಸದ್ಯ ಕ್ರೀಸ್​ನಲ್ಲಿ ರವಿಂದ್ರನ್ ಅಶ್ವಿನ್ (Ravichandran Ashwin) ಮತ್ತು ಉಮೇಶ್ ಯಾದವ್ ಇದ್ದಾರೆ. ಅಶ್ವಿನ್ ಭರ್ಜರಿ ಬ್ಯಾಟಿಂಗ್ ನಡೆಸಿ ಅರ್ಧಶತಕದತ್ತ ದಾಪುಗಾಲಿಡುತ್ತಿದ್ದರೆ, ಇತ್ತ ಭಾರತ 400ರ ಆಸುಪಾಸಿನ ಮೊತ್ತ ಕಲೆಹಾಕುವ ಯೋಜನೆಯಲ್ಲಿದೆ.

ನಿನ್ನೆ ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 84 ಓವರ್‌ಗಳಿಗೆ ನಾಲ್ಕು ವಿಕೆಟ್‌ಗಳ ಅಂತ್ಯಕ್ಕೆ 258 ರನ್‌ ಗಳಿಸಿ ದೊಡ್ಡ ಮೊತ್ತದತ್ತ ಸಂಪಾದಿಸುವ ಸೂಚನೆ ನೀಡಿತ್ತು. ಆರಂಭಿಕ ದಿನ ಜವಾಬ್ದಾರಿಯುತ ಬ್ಯಾಟ್‌ ಮಾಡಿ ತಂಡವನ್ನು ಅಪಾಯದಿಂದ ಪಾರು ಮಾಡಿದ ಅಯ್ಯರ್‌ ಅಜೇಯ 75 ಮತ್ತು ರವೀಂದ್ರ ಜಡೇಜಾ ಅಜೇಯ 50 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಅದರಂತೆ ಎರಡನೇ ದಿನದಾಟ ಆರಂಭಿಸಿದಾಗ ನ್ಯೂಜಿಲೆಂಡ್ ಪ್ಲಾನ್ ಬೇರೆಯೇ ಆಗಿತ್ತು. ಭಾರತವನ್ನು ಆರಂಭದಲ್ಲೇ ಕಟ್ಟಿಹಾಕುವಲ್ಲಿ ಸಫಲರಾದರು.

ಮೊದಲಿಗರಾಗಿ ರವೀಂದ್ರ ಜಡೇಜಾ 50 ರನ್​ಗೆವೇ ಟಿಮ್ ಸೌದೀ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಉತ್ತಮ ಇನ್ನಿಂಗ್ಸ್ ಆಡುವಲ್ಲಿ ಮತ್ತೆ ಎಡವಿದ ವೃದ್ದಿಮಾನ್ ಸಾಹ ಆಟ ಕೇವಲ 1 ರನ್​ಗೆ ಅಂತ್ಯವಾಯಿತು. ಇದರ ನಡುವೆ ಶ್ರೇಯಸ್ ಅಯ್ಯರ್ ಚೊಚ್ಚಕ ಶತಕ ಸಿಡಿಸಿ ಮಿಂಚಿದರು. ಈ ಮೂಲಕ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿದ ಮೂರನೇ ಹಿರಿಯ ಆಟಗಾರ ಎನಿಸಿಕೊಂಡರು. ಜೊತೆಗೆ ಡೆಬ್ಯೂ ಪಂದ್ಯದಲ್ಲಿ ವೇಗವಾಗಿ 100 ರನ್ ಗಳಿಸಿದ ನಾಲ್ಕನೇ ಪ್ಲೇಯರ್ ಎಂಬ ಸಾಧನೆ ಮಾಡಿದ್ದಾರೆ. ಶತಕದ ಬಳಿಕ ಅಯ್ಯರ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 171 ಎಸೆತಗಳಲ್ಲಿ 13 ಬೌಂಡರಿ, 2 ಸಿಕ್ಸರ್​ನೊಂದಿಗೆ 105 ರನ್ ಬಾರಿಸಿ ಔಟ್ ಆದರು.

ಬಳಿಕ ರವಿಚಂದ್ರನ್ ಅಶ್ವಿನ್ ಜೊತೆಯಾದ ಅಕ್ಷರ್ ಪಟೇಲ್ ನಿರೀಕ್ಷೆ ಹುಸಿ ಮಾಡಿದರು. ಪಟೇಲ್ ಆಟ 3 ರನ್​ಗೆ ಅಂತ್ಯವಾಯಿತು. ಸದ್ಯ ಅಶ್ವಿನ್​ಗೆ ಉಮೇಶ್ ಯಾದವ್ ಸಾಥ್ ನೀಡುತ್ತಿದ್ದು ತಂಡದ ಮೊತ್ತವನ್ನು ಏರಿಸಲು ಸಹಾಯ ಮಾಡುತ್ತಿದ್ದಾರೆ. ಭೋಜನ ವಿರಾಮದ ವೇಳೆಗೆ ಭಾರತ 109 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 339 ರನ್ ಕಲೆಹಾಕಿದೆ. ಆರ್. ಅಶ್ವಿನ್ 38 (54) ಮತ್ತು ಉಮೇಶ್ ಯಾದವ್ 4 (28) ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಇದಕ್ಕೂ ಮುನ್ನ ಮೊದಲ ದಿನ ಟಾಸ್ ಗೆದ್ದು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ನಿರಾಸೆ ಮೂಡಿಸಿತು. ಕರ್ನಾಟಕದ ಮಯಂಕ್ ಅಗರ್ವಾಲ್ ಕೇವಲ 13 ರನ್ ಗಳಿಸಿ ಔಟಾದರು. ಆದರೆ, ನಂತರ ಶುಭ್ಮನ್ ಗಿಲ್ ಮತ್ತು ಚೇತೇಶ್ವರ್ ಪೂಜಾರ 2ನೇ ವಿಕೆಟ್​ಗೆ 61 ರನ್ ಜೊತೆಯಾಟ ಆಡಿದ್ದು ತಂಡದ ಇನ್ನಿಂಗ್ಸ್​ಗೆ ಜೀವ ಸಿಕ್ಕಿತು. ಶುಬ್ಮನ್ ಗಿಲ್ 1 ಸಿಕ್ಸರ್ ಸಹಿತ 93 ಬಾಲ್​ನಲ್ಲಿ 52 ರನ್ ಗಳಿಸಿದರು. ತಾಳ್ಮೆಯುತ ಆಟ ಪ್ರದರ್ಶಿಸುತ್ತಿದ್ದ ಪೂಜಾರ ಕೂಡ 26 ರನ್ ಗಳಿಸಿದ್ದಾಗ ವೇಗಿ ಸೋಥಿ ಬೌಲಿಂಗ್‍ನಲ್ಲಿ ಔಟಾದರು.

Shreyas Iyer: ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

(India vs New Zealand 1st Test Day 2 Shreyas Iyer Century help Team India reach 339-8 at lunch break)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ