AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 10 ವಿಕೆಟ್, 107 ರನ್: ನಿರ್ಣಾಯಕ ದಿನದಂದು ಹೇಗಿರಲಿದೆ ಬೆಂಗಳೂರು ಹವಾಮಾನ?

IND vs NZ Bengaluru Day 5 weather report: ಅಕ್ಯುವೆದರ್ ಪ್ರಕಾರ, ಬೆಂಗಳೂರಿನಲ್ಲಿ ಅಕ್ಟೋಬರ್ 20 ರಂದು ಅಂದರೆ ಟೆಸ್ಟ್ ಪಂದ್ಯದ 5 ನೇ ದಿನದಲ್ಲಿ ಶೇ 80 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಶೇ.51 ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಈ ಕಾರಣದಿಂದ ಪಂದ್ಯ ಆರಂಭವಾಗುವುದು ತಡವಾಗಬಹುದು

IND vs NZ: 10 ವಿಕೆಟ್, 107 ರನ್: ನಿರ್ಣಾಯಕ ದಿನದಂದು ಹೇಗಿರಲಿದೆ ಬೆಂಗಳೂರು ಹವಾಮಾನ?
ಬೆಂಗಳೂರು ಹವಾಮಾನ
ಪೃಥ್ವಿಶಂಕರ
|

Updated on: Oct 19, 2024 | 10:26 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ 4 ದಿನಗಳ ಆಟ ಮುಗಿದಿದ್ದು, ಪಂದ್ಯದ ಕೊನೆಯ ದಿನದಂದು ನ್ಯೂಜಿಲೆಂಡ್ ತಂಡ ಗೆಲ್ಲಲು 107 ರನ್‌ಗಳ ಗುರಿಯನ್ನು ಬೆನ್ನಟ್ಟಬೇಕಿದೆ. ಇತ್ತ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಬೇಕಾದರೆ ಕಿವೀಸ್​ ತಂಡದ 10 ವಿಕೆಟ್ ಕಬಳಿಸಬೇಕು. ಸದ್ಯದ ಪರಿಸ್ಥಿತಿ ಗಮನಿಸಿದರೆ, ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದೆ. ಹೀಗಾಗಿ ಈ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಬೇಕೆಂದರೆ ಕಿವೀಸ್ ತಂಡವನ್ನು ಬೇಗನೇ ಆಲೌಟ್ ಮಾಡಬೇಕಿದೆ. ಅಥವಾ ಪಂದ್ಯ ನಡೆಯದಂತೆ ವರುಣ ರಾಯ ತಡೆಯಬೇಕಿದೆ. ಇದಕ್ಕೆ ಪೂರಕವಾಗಿ ನಾಳಿನ ಬೆಂಗಳೂರು ಹವಾಮಾನ ವರದಿಯೂ ಟೀಂ ಇಂಡಿಯಾಕ್ಕೆ ನೆರವಾಗುವ ಸೂಚನೆಯನ್ನು ನೀಡಿದೆ.

ಮೊದಲ ಟೆಸ್ಟ್​ಗೆ ಮಳೆಯ ಅಡೆಚಣೆ

ಬೆಂಗಳೂರು ಟೆಸ್ಟ್ ಪಂದ್ಯಕ್ಕೆ ಮೊದಲ ದಿನದಿಂದಲೂ ಮಳೆಯ ಅವಕೃಪೆ ಎದುರಾಗಿದೆ. ಹೀಗಾಗಿ ಪಂದ್ಯದ ಮೊದಲ ದಿನ ಮಳೆಯಿಂದಾಗಿ ಒಂದೇ ಒಂದು ಚೆಂಡು ಬೌಲ್ ಆಗಲಿಲ್ಲ, ಟಾಸ್ ಕೂಡ ನಡೆಯಲಿಲ್ಲ. ಆದರೆ ಎರಡನೇ ಮತ್ತು ಮೂರನೇ ದಿನ ಮಾತ್ರ ಯಾವುದೇ ಅಡೆಚಣೆ ಇಲ್ಲದೆ ಪಂದ್ಯ ನಡೆದಿತ್ತು. ನಾಲ್ಕನೇ ದಿನ ಮತ್ತೆ ಅಖಾಡಕ್ಕಿಳಿದ ಮಳೆರಾಯ ಆಗಾಗ್ಗೆ ಪಂದ್ಯಕ್ಕೆ ಅಡ್ಡಿಪಡಿಸಿದ. ಮಳೆಯಿಂದಾಗಿ ದಿನದಾಟವನ್ನು ಬೇಗನೇ ಮುಗಿಸಬೇಕಾಯಿತು. ಇದೀಗ 5ನೇ ದಿನದ ಆಟದಲ್ಲಿ ಮಳೆಯ ಭೀತಿ ಎದುರಾಗಿದ್ದು ಪಂದ್ಯ ಡ್ರಾದಲ್ಲಿ ಅಂತ್ಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ.

5ನೇ ದಿನದ ಹವಾಮಾನ ವರದಿ ಹೀಗಿದೆ

ಅಕ್ಯುವೆದರ್ ಪ್ರಕಾರ, ಬೆಂಗಳೂರಿನಲ್ಲಿ ಅಕ್ಟೋಬರ್ 20 ರಂದು ಅಂದರೆ ಟೆಸ್ಟ್ ಪಂದ್ಯದ 5 ನೇ ದಿನದಲ್ಲಿ ಶೇ 80 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಶೇ.51 ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಈ ಕಾರಣದಿಂದ ಪಂದ್ಯ ಆರಂಭವಾಗುವುದು ತಡವಾಗಬಹುದು. ಇದರ ನಂತರ, ದಿನವಿಡೀ ಮಳೆಯ ಸಂಭವನೀಯತೆ 45 ರಿಂದ 50%ರಷ್ಟಿದೆ. ಇಷ್ಟು ಮಾತ್ರವಲ್ಲದೆ ಸಂಜೆ 4 ಗಂಟೆಯ ವೇಳೆಗೂ ಶೇ.39ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ಪಂದ್ಯ ಪ್ರಾರಂಭವಾದರೂ ಆಗಾಗ್ಗೆ ಮಳೆರಾಯ ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

ಟೀಂ ಇಂಡಿಯಾ ಮೇಲೆ ಒತ್ತಡ

ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 402 ರನ್ ಗಳಿಸಿತ್ತು. ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ 462 ರನ್ ಗಳಿಸಿತು. ತಂಡದ ಪರ ಸರ್ಫರಾಜ್ ಅಹ್ಮದ್ 150 ರನ್​ಗಳ ಇನ್ನಿಂಗ್ಸ್ ಆಡಿದರೆ, ರಿಷಬ್ ಪಂತ್ 99 ರನ್ ಬಾರಿಸಿದರು. ಅಂತಿಮವಾಗಿ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ 107 ರನ್​ಗಳ ಟಾರ್ಗೆಟ್ ನೀಡಿದ್ದು, ಟೀಂ ಇಂಡಿಯಾಗೆ ಡಿಫೆಂಡ್ ಮಾಡಿಕೊಳ್ಳುವುದು ತುಂಬಾ ಕಷ್ಟಕರವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ