IND vs NZ 1st Test, Day 1: ಟಾಸ್ ಗೆದ್ದ ಟೀಮ್ ಇಂಡಿಯಾ: ಮೂವರು ಸ್ಪಿನ್ನರ್​ಗಳು ಕಣಕ್ಕೆ: ಇಲ್ಲಿದೆ ಭಾರತ ಪ್ಲೇಯಿಂಗ್ XI

India vs New Zealand 1st Test Day 1 Score Updates: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಭಾರತದಲ್ಲಿ ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಲಾಗಿದೆ.

IND vs NZ 1st Test, Day 1: ಟಾಸ್ ಗೆದ್ದ ಟೀಮ್ ಇಂಡಿಯಾ: ಮೂವರು ಸ್ಪಿನ್ನರ್​ಗಳು ಕಣಕ್ಕೆ: ಇಲ್ಲಿದೆ ಭಾರತ ಪ್ಲೇಯಿಂಗ್ XI
India vs New Zealand
Follow us
TV9 Web
| Updated By: Vinay Bhat

Updated on:Nov 25, 2021 | 9:25 AM

ಕಾನ್ಪುರದ ಗ್ರೀನ್ ಪಾರ್ಕ್​ ಸ್ಟೇಡಿಯಂನಲ್ಲಿ ಆರಂಭವಾಗಿರುವ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕ ಅಜಿಂಕ್ಯಾ ರಹಾನೆ (Ajinkya Rahane) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಭಾರತದಲ್ಲಿ ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಲಾಗಿದೆ. ಜೊತೆಗೆ ಶ್ರೇಯಸ್ ಅಯ್ಯರ್ (Shreyas Iyer) ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದು, ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಕ್ಯಾಪ್ ಕೊಟ್ಟು ಆಹ್ವಾನಿಸಿದರು. ಕಾನ್ಪುರದ ಪಿಚ್‌ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಮೊದಲ ಎರಡು ದಿನ ಬ್ಯಾಟ್ಸ್‌ಮನ್‌ಗಳ ಪರವಾಗಿ ವರ್ತಿಸುವ ಸಾಧ್ಯತೆ ದಟ್ಟವಾಗಿದ್ದು, ಚಳಿಗಾಲವಾದ ಕಾರಣ ಆರಂಭಿಕ ಅವಧಿಯಲ್ಲಿ ವೇಗದ ಬೌಲರ್‌ಗಳಿಗೆ ನೆರವಾಗಬಹುದು. ಮೊದಲು ಬ್ಯಾಟ್‌ ಮಾಡಿರುವ ತಂಡಗಳೇ ಇಲ್ಲಿ ಹೆಚ್ಚಿನ ಗೆಲುವ ಸಾಧಿಸಿರುವ ಕಾರಣ ಟೀಮ್ ಇಂಡಿಯ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತದ ಪ್ಲೇಯಿಂಗ್ XI:

ಶುಭ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಶ್ರೇಯಸ್ ಅಯ್ಯರ್, ಅಜಿಂಕ್ಯಾ ರಹಾನೆ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಉಮೇಶ್ ಯಾದವ್.

ನ್ಯೂಜಿಲೆಂಡ್ ಪ್ಲೇಯಿಂಗ್ XI:

ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಅಜಾಜ್ ಪಟೇಲ್, ಟಿಮ್ ಸೌಥಿ, ಕೈಲ್ ಜೇಮಿಸನ್, ವಿಲಿಯಮ್ ಸೋಮರ್ವಿಲ್ಲೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​ನಲ್ಲಿ ಲೈವ್ ವೀಕ್ಷಿಸಬಹುದು. ಡಿಸ್ನಿ+ ಹಾಟ್​ಸ್ಟಾರ್​ನಲ್ಲೂ ನೇರಪ್ರಸಾರ ಕಾಣಲಿದೆ.

ಟಿವಿ9 ಕನ್ನಡ ವೆಬ್​ಸೈಟ್​ನಲ್ಲೂ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಲೈವ್ ಅಪ್ಡೇಟ್ ಅನ್ನು ನೋಡಬಹುದು.

ಭಾರತ ತಂಡ ಕೊನೇ ಬಾರಿ 2016ರಲ್ಲಿ ಕಾನ್ಪುರದಲ್ಲಿ ಕಿವೀಸ್ ವಿರುದ್ಧ ಆಡಿದಾಗ ಅಶ್ವಿನ್-ಜಡೇಜಾ ಜೋಡಿ 16 ವಿಕೆಟ್ ಹಂಚಿಕೊಂಡಿತ್ತು. ಗ್ರೀನ್ ಪಾರ್ಕ್ ಪಿಚ್ ಎಷ್ಟರ ಮಟ್ಟಿಗೆ ಸ್ಪಿನ್ ಸ್ನೇಹಿ ಎಂಬುದನ್ನು ಈ ಅಂಕಿ-ಅಂಶವೇ ಸಾರುತ್ತಿದೆ. ಅಲ್ಲದೆ ಕಾನ್ಪುರದಲ್ಲಿ ಭಾರತ ಇದುವರೆಗೆ 22 ಟೆಸ್ಟ್ ಆಡಿದ್ದು, 7ರಲ್ಲಿ ಗೆದ್ದು, 3ರಲ್ಲಿ ಸೋತಿದೆ. 12 ಟೆಸ್ಟ್ ಡ್ರಾಗೊಂಡಿದೆ. ನ್ಯೂಜಿಲೆಂಡ್ ತಂಡ ಕಾನ್ಪುರದಲ್ಲಿ ಇದುವರೆಗೆ 3 ಟೆಸ್ಟ್ ಆಡಿದ್ದು, 2ರಲ್ಲಿ ಸೋತು, 1ರಲ್ಲಿ ಡ್ರಾ ಸಾಧಿಸಿದೆ.

ಒಟ್ಟಾರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ಮಹತ್ವಾಕಾಂಕ್ಷೆಯೊಂದಿಗೆ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಮೊದಲ ಪಂದ್ಯಕ್ಕೆ ಸಜ್ಜಾಗಿದೆ. ನಾಯಕ ವಿರಾಟ್ ಕೊಹ್ಲಿ ಸಹಿತ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿರುವ ನಡುವೆಯೂ ಭಾರತ ತಂಡ ತವರಿನ ಲಾಭವನ್ನು ಹೊಂದಿದ್ದು, ಗ್ರೀನ್ ಪಾರ್ಕ್‌ನಲ್ಲಿ ನಡೆಯಲಿರುವ ಈ ಟೆಸ್ಟ್‌ ಸಾಕಷ್ಟು ಕುತೂಹಲ ಕೆರಳಿಸಿದೆ.

India vs New Zealand 1st Test: ಭಾರತ ಮತ್ತು ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ ಯಾವುದರಲ್ಲಿ ನೇರಪ್ರಸಾರ?, ಲೈವ್ ವೀಕ್ಷಿಸುವುದು ಹೇಗೆ?

India vs New Zealand 1st Test: ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸುತ್ತಾ ಭಾರತ: ಕಾನ್ಪುರ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

(India vs New Zealand 1st Test India have won the toss and have opted to bat)

Published On - 9:16 am, Thu, 25 November 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ