India vs New Zealand 1st Test: ಭಾರತ ಮತ್ತು ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ ಯಾವುದರಲ್ಲಿ ನೇರಪ್ರಸಾರ?, ಲೈವ್ ವೀಕ್ಷಿಸುವುದು ಹೇಗೆ?

India vs New Zealand 1st Test Live Streaming: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಪಂದ್ಯವನ್ನು ಲೈವ್ ಆಗಿ ಹೇಗೆ ವೀಕ್ಷಿಸುವುದು? (India vs New Zealand 1st Test Live) ಯಾವುದರಲ್ಲಿ ನೇರಪ್ರಸಾರ? ಎಂಬ ಬಗೆಗಿನ ಮಾಹಿತಿ ಇಲ್ಲಿದೆ.

India vs New Zealand 1st Test: ಭಾರತ ಮತ್ತು ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ ಯಾವುದರಲ್ಲಿ ನೇರಪ್ರಸಾರ?, ಲೈವ್ ವೀಕ್ಷಿಸುವುದು ಹೇಗೆ?
India vs New Zealand Live
Follow us
| Updated By: Vinay Bhat

Updated on: Nov 25, 2021 | 8:53 AM

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದ ಭಾರತ ತಂಡ ಇದೀಗ ಟೆಸ್ಟ್ ಸರಣಿ (Test Series) ಮೇಲೆ ಕಣ್ಣಿಟ್ಟಿದೆ. ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದಿನಿಂದ ಕಾನ್ಪುರದ (Kanpur Test) ಗ್ರೀನ್ ಪಾರ್ಕ್​ನಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ಕೇನ್ ವಿಲಿಯಮ್ಸನ್ (Kane Williomson) ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದು, ರಾಸ್ ಟೇಲರ್ ಸೇರಿದಂತೆ ಅಪಾಯಕಾರಿ ಆಟಗಾರರ ದಂಡೇ ಇದೆ. ಇತ್ತ ಭಾರತ ವಿರಾಟ್ ಕೊಹ್ಲಿ (Virat Kohli), ಜಸ್​ಪ್ರೀತ್ ಬುಮ್ರಾ, ರೋಹಿತ್ ಶರ್ಮಾರಂತಹ (Rohit Sharma) ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಪಂದ್ಯ ಬೆಳಗ್ಗೆ 9:30ಕ್ಕೆ ಆರಂಭವಾಗಲಿದ್ದು, 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಹಾಗಾದ್ರೆ ಪಂದ್ಯವನ್ನು ಲೈವ್ ಆಗಿ ಹೇಗೆ ವೀಕ್ಷಿಸುವುದು? (India vs New Zealand 1st Test Live) ಯಾವುದರಲ್ಲಿ ನೇರಪ್ರಸಾರ? ಎಂಬ ಬಗೆಗಿನ ಮಾಹಿತಿ ಇಲ್ಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​ನಲ್ಲಿ ಲೈವ್ ವೀಕ್ಷಿಸಬಹುದು. ಡಿಸ್ನಿ+ ಹಾಟ್​ಸ್ಟಾರ್​ನಲ್ಲೂ ನೇರಪ್ರಸಾರ ಕಾಣಲಿದೆ.

ಟಿವಿ9 ಕನ್ನಡ ವೆಬ್​ಸೈಟ್​ನಲ್ಲೂ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಲೈವ್ ಅಪ್ಡೇಟ್ ಅನ್ನು ನೋಡಬಹುದು.

ಈ ಪಂದ್ಯ ನಡೆಯಲಿರುವ ಕಾನ್ಪುರದ ಪಿಚ್‌ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಮೊದಲ ಎರಡು ದಿನ ಬ್ಯಾಟ್ಸ್‌ಮನ್‌ಗಳ ಪರವಾಗಿ ವರ್ತಿಸುವ ಸಾಧ್ಯತೆ ದಟ್ಟವಾಗಿದ್ದು, ಚಳಿಗಾಲವಾದ ಕಾರಣ ಆರಂಭಿಕ ಅವಧಿಯಲ್ಲಿ ವೇಗದ ಬೌಲರ್‌ಗಳಿಗೆ ನೆರವಾಗಬಹುದು. ಮೊದಲು ಬ್ಯಾಟ್‌ ಮಾಡಿರುವ ತಂಡಗಳೇ ಹೆಚ್ಚಿನ ಗೆಲುವ ಸಾಧಿಸಿದ್ದು, ಟಾಸ್‌ ಗೆಲ್ಲುವ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಳ್ಳುವುದು ಉತ್ತಮ ಆಯ್ಕೆ.

ಭಾರತ ತಂಡ ಕೊನೇ ಬಾರಿ 2016ರಲ್ಲಿ ಕಾನ್ಪುರದಲ್ಲಿ ಕಿವೀಸ್ ವಿರುದ್ಧ ಆಡಿದಾಗ ಅಶ್ವಿನ್-ಜಡೇಜಾ ಜೋಡಿ 16 ವಿಕೆಟ್ ಹಂಚಿಕೊಂಡಿತ್ತು. ಗ್ರೀನ್ ಪಾರ್ಕ್ ಪಿಚ್ ಎಷ್ಟರ ಮಟ್ಟಿಗೆ ಸ್ಪಿನ್ ಸ್ನೇಹಿ ಎಂಬುದನ್ನು ಈ ಅಂಕಿ-ಅಂಶವೇ ಸಾರುತ್ತಿದೆ. ಅಲ್ಲದೆ ಕಾನ್ಪುರದಲ್ಲಿ ಭಾರತ ಇದುವರೆಗೆ 22 ಟೆಸ್ಟ್ ಆಡಿದ್ದು, 7ರಲ್ಲಿ ಗೆದ್ದು, 3ರಲ್ಲಿ ಸೋತಿದೆ. 12 ಟೆಸ್ಟ್ ಡ್ರಾಗೊಂಡಿದೆ. ನ್ಯೂಜಿಲೆಂಡ್ ತಂಡ ಕಾನ್ಪುರದಲ್ಲಿ ಇದುವರೆಗೆ 3 ಟೆಸ್ಟ್ ಆಡಿದ್ದು, 2ರಲ್ಲಿ ಸೋತು, 1ರಲ್ಲಿ ಡ್ರಾ ಸಾಧಿಸಿದೆ.

ಒಟ್ಟಾರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ಮಹತ್ವಾಕಾಂಕ್ಷೆಯೊಂದಿಗೆ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಮೊದಲ ಪಂದ್ಯಕ್ಕೆ ಸಜ್ಜಾಗಿದೆ. ನಾಯಕ ವಿರಾಟ್ ಕೊಹ್ಲಿ ಸಹಿತ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿರುವ ನಡುವೆಯೂ ಭಾರತ ತಂಡ ತವರಿನ ಲಾಭವನ್ನು ಹೊಂದಿದ್ದು, ಗ್ರೀನ್ ಪಾರ್ಕ್‌ನಲ್ಲಿ ನಡೆಯಲಿರುವ ಈ ಟೆಸ್ಟ್‌ ಸಾಕಷ್ಟು ಕುತೂಹಲ ಕೆರಳಿಸಿದೆ.

India vs New Zealand 1st Test: ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸುತ್ತಾ ಭಾರತ: ಕಾನ್ಪುರ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

India vs New Zealand 1st Test: ಇಂದು ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಆರಂಭ: ಶ್ರೇಯಸ್ ಅಯ್ಯರ್ ಪದಾರ್ಪಣೆ

(India vs New Zealand 1st Test Live Streaming Where to watch the live of the IND vs NZ 1st Test match)

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ