AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಭರ್ಜರಿ ಜಯದೊಂದಿಗೆ ಟೀಮ್ ಇಂಡಿಯಾದ ಕಿವಿ ಹಿಂಡಿದ ಕಿವೀಸ್ ಪಡೆ

India vs New Zealand 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಸತತ ಗೆಲುವುಗಳಿಂದ ಬೀಗುತ್ತಿದ್ದ ಭಾರತೀಯ ಪಡೆಗೆ ಸೋಲಿನ ರುಚಿ ತೋರಿಸುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

IND vs NZ: ಭರ್ಜರಿ ಜಯದೊಂದಿಗೆ ಟೀಮ್ ಇಂಡಿಯಾದ ಕಿವಿ ಹಿಂಡಿದ ಕಿವೀಸ್ ಪಡೆ
IND vs NZ
Follow us
ಝಾಹಿರ್ ಯೂಸುಫ್
|

Updated on: Oct 20, 2024 | 12:21 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕ ನಿರ್ಧಾರ ತಪ್ಪು ಎಂಬುದನ್ನು ಮೊದಲ 10 ಓವರ್‌ಗಳಲ್ಲೇ ಕಿವೀಸ್ ಬೌಲರ್‌ಗಳು ನಿರೂಪಿಸಿದ್ದರು. ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ (2) ಕ್ಲೀನ್ ಬೌಲ್ಡ್ ಮಾಡುವ ಮೂಲಕ ಟಿಮ್ ಸೌಥಿ ನ್ಯೂಝಿಲೆಂಡ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (0) ಒರೋಕ್ ಎಸೆತದಲ್ಲಿ ಕ್ಯಾಚ್ ನೀಡಿದರು. ಆ ಬಳಿಕ ಬಂದ ಸರ್ಫರಾಝ್ ಖಾನ್ (0) ಮ್ಯಾಟ್ ಹೆನ್ರಿ ಎಸೆತದಲ್ಲಿ ಕ್ಯಾಚಿತ್ತು ನಿರ್ಗಮಿಸಿದರು.

ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ಆಡಿದ ಯಶಸ್ವಿ ಜೈಸ್ವಾಲ್ 63 ಎಸೆತಗಳನ್ನು ಎದುರಿಸಿ 13 ರನ್ ಕಲೆಹಾಕಿದರು. ಆದರೆ ಒರೋಕ್ ಎಸೆತದಲ್ಲಿ ಅಜಾಝ್ ಪಟೇಲ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಜೈಸ್ವಾಲ್ ಇನಿಂಗ್ಸ್​ ಕೂಡ ಅಂತ್ಯಗೊಂಡಿತು. ಆ ಬಳಿಕ ಬಂದ ಕೆಎಲ್ ರಾಹುಲ್ (0) ಹಾಗೂ ರವೀಂದ್ರ ಜಡೇಜಾ (0) ಸೊನ್ನೆಯೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು. ಇನ್ನು ರಿಷಭ್ ಪಂತ್ 20 ರನ್ ಬಾರಿಸಿ ಮ್ಯಾಟ್ ಹೆನ್ರಿ ಎಸೆತದಲ್ಲಿ ಕ್ಯಾಚ್ ನೀಡಿದರು. ಇದರ ಬೆನ್ನಲ್ಲೇ ರವಿಚಂದ್ರನ್ ಅಶ್ವಿನ್ (0) ಹಾಗೂ ಜಸ್​ಪ್ರೀತ್ ಬುಮ್ರಾ (2) ಔಟಾದರು.

ಕೊನೆಯ ವಿಕೆಟ್​ಗೆ ಜೊತೆಗೂಡಿದ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ 6 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಹೆನ್ರಿ ಎಸೆತದಲ್ಲಿ ಕ್ಯಾಚ್ ನೀಡಿ ಕುಲ್ದೀಪ್ ಯಾದವ್ (2) ಇನಿಂಗ್ಸ್ ಅಂತ್ಯಗೊಳಿಸಿದರು. ಈ ಮೂಲಕ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ನ್ಯೂಝಿಲೆಂಡ್ ಪರ ಡೆವೊನ್ ಕಾನ್ವೆ 91 ರನ್ ಬಾರಿಸಿದರೆ, ರಚಿನ್ ರವೀಂದ್ರ 134 ರನ್ ಚಚ್ಚಿದರು. ಈ ಮೂಲಕ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 402 ರನ್ ಕಲೆಹಾಕಿ ಆಲೌಟ್ ಆಯಿತು.

356 ರನ್​ಗಳ ಹಿನ್ನಡೆ:

ಪ್ರಥಮ ಇನಿಂಗ್ಸ್​ನಲ್ಲಿ 356 ರನ್​ಗಳ ಹಿನ್ನಡೆ ಅನುಭವಿಸಿದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 35 ರನ್ ಬಾರಿಸಿದರೆ, ರೋಹಿತ್ ಶರ್ಮಾ (52) ಅರ್ಧಶತಕ ಸಿಡಿಸಿದರು. ಇನ್ನು ವಿರಾಟ್ ಕೊಹ್ಲಿ 70 ರನ್​ಗಳ ಕೊಡುಗೆ ನೀಡಿದರು.

ಮತ್ತೊಂದೆಡೆ ಶ್ರೇಷ್ಠ ಪ್ರದರ್ಶನ ನೀಡಿದ ಸರ್ಫರಾಝ್ ಖಾನ್ 110 ಎಸೆತಗಳಲ್ಲಿ ಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಅಲ್ಲದೆ 195 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 18 ಫೋರ್​ಗಳೊಂದಿಗೆ 150 ರನ್ ಕಲೆಹಾಕಿದರು. ಸರ್ಫರಾಝ್​ಗೆ ಉತ್ತಮ ಸಾಥ್ ನೀಡಿದ ರಿಷಭ್ ಪಂತ್ 105 ಎಸೆತಗಳಲ್ಲಿ 99 ರನ್ ಬಾರಿಸಿ ಕೇವಲ ಒಂದು ರನ್​ನಿಂದ ಶತಕ ವಂಚಿತರಾದರು.

ಇದಾಗ್ಯೂ ಪಂತ್ ಹಾಗೂ ಸರ್ಫರಾಝ್ ಅವರ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಟೀಮ್ ಇಂಡಿಯಾ 400 ರನ್​ಗಳ ಗಡಿದಾಟಿತು. ಆದರೆ ಇವರಿಬ್ಬರ ನಿರ್ಗಮನದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಭಾರತ ತಂಡವು ದ್ವಿತೀಯ ಇನಿಂಗ್ಸ್​ ಅನ್ನು 462 ರನ್​ಗಳೊಂದಿಗೆ ಅಂತ್ಯಗೊಳಿಸಿತು.

107 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನ ಮುನ್ನಡೆಯೊಂದಿಗೆ ನ್ಯೂಝಿಲೆಂಡ್ ತಂಡಕ್ಕೆ ಗೆಲ್ಲಲು ಕೇವಲ 107 ರನ್​ಗಳ ಅವಶ್ಯಕತೆಯಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಲಾರಂಭಿಸಿದ ಕಿವೀಸ್ ಪಡೆಗೆ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾಗ್ಯೂ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ ನ್ಯೂಝಿಲೆಂಡ್ ಬ್ಯಾಟರ್​ಗಳು ಒಂದೊಂದು ರನ್ ಕಲೆಹಾಕುತ್ತಾ ಗುರಿಯತ್ತ ಸಾಗಿದರು.

ಅಂತಿಮವಾಗಿ 2 ವಿಕೆಟ್ ಕಳೆದುಕೊಂಡು 107 ರನ್​ಗಳ ಗುರಿ ಮುಟ್ಟುವ ಮೂಲಕ ನ್ಯೂಝಿಲೆಂಡ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಝಿಲೆಂಡ್ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ವಿಲ್ ಯಂಗ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ವಿಲಿಯಂ ಒರೋಕ್, ಅಜಾಝ್ ಪಟೇಲ್.

ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ