ನ್ಯೂಜಿಲೆಂಡ್ ವಿರುದ್ದ ಟಿ20 ಸರಣಿ ಗೆದ್ದಿರುವ ಟೀಮ್ ಇಂಡಿಯಾ (India vs New Zealand 1st Test) ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಾಳೆಯಿಂದ (ನವೆಂಬರ್ 25) ಶುರುವಾಗಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಮೊದಲ ಪಂದ್ಯದಲ್ಲಿ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಇತ್ತ ಕೆಎಲ್ ರಾಹುಲ್ ಕೂಡ ಗಾಯಗೊಂಡು ತಂಡದಿಂದ ಹೊರನಡೆದಿದ್ದು, ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಮೊದಲ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಹಾಗೂ ಶುಭ್ಮನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಆಡಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡುವುದನ್ನು ನಾಯಕ ರಹಾನೆ ಈಗಾಗಲೇ ಖಚಿತಪಡಿಸಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಶ್ರೇಯಸ್ ನಾಲ್ಕನೇ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ಹಾಗೆಯೇ 5ನೇ ಸ್ಥಾನದಲ್ಲಿ ರಹಾನೆ ಆಡಬಹುದು. ವಿಕೆಟ್‌ಕೀಪರ್ ಆಗಿ ವೃದ್ಧಿಮಾನ್ ಸಹಾ, ಆಲ್ರೌಂಡರ್ ಸ್ಪಿನ್ನರ್ಗಳಾಗಿ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಅವರನ್ನು ಆಯ್ಕೆ ಮಾಡಬಹುದು. ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಮತ್ತು ಇಶಾಂತ್ ಶರ್ಮಾ ಹಾಗೂ ಉಮೇಶ್ ಯಾದವ್ ಆಡುವ ಸಾಧ್ಯತೆಯಿದೆ.
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ: ಶುಭಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ವೃದ್ಧಿಮಾನ್ ಸಹಾ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
ಇದನ್ನೂ ಓದಿ: ಹಲಾಲ್ ಮಾಂಸ ಅಥವಾ ಹಲಾಲ್ ಕಟ್ ಎಂದರೇನು?
ಇದನ್ನೂ ಓದಿ: IPL 2022: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ ಜೆರ್ಸಿ ಫೋಟೋ ವೈರಲ್
(India vs New Zealand 1st Test Playing 11)