ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬೆಳಿಗ್ಗೆ 9.30 ರಿಂದ ಶುರುವಾಗಬೇಕಿದ್ದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಬೆಳಿಗ್ಗೆ 9 ಗಂಟೆಗೆ ನಡೆಯಬೇಕಿದ್ದ ಟಾಸ್ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಮಳೆ ನಿಲ್ಲುವ ಸೂಚನೆ ಸಿಕ್ಕ ಬಳಿಕವಷ್ಟೇ ಟಾಸ್ ನಡೆಯಲಿದೆ. ಆದರೆ ಬುಧವಾರ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ನಡೆಯುವುದು ಅನುಮಾನ.
ಇನ್ನು ಎರಡನೇ ದಿನದಾಟದ ವೇಳೆಯು ಶೇ. 80 ರಷ್ಟು ಮಳೆಯಾಗಲಿದೆ ಎಂದು ವೆದರ್.ಕಾಮ್ ವರದಿ ಹೇಳಿದೆ. ಹೀಗಾಗಿ ಮೊದಲೆರಡು ದಿನದಾಟಗಳು ನಡೆಯುವುದು ಅನುಮಾನ ಎನ್ನಬಹುದು.
ಮೂರನೇ ಮತ್ತು ನಾಲ್ಕನೇ ದಿನದಾಟಗಳಲ್ಲಿ ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿರುವುದರಿಂದ ಪೂರ್ಣ ಆಟವನ್ನು ನಿರೀಕ್ಷಿಸುವಂತಿಲ್ಲ. ಅಲ್ಲದೆ ಐದನೇ ದಿನದಾಟದಂದು ಶೇ.70 ರಷ್ಡು ಮಳೆಯಾಗಲಿದೆ ವೆದರ್.ಕಾಮ್ ವರದಿಯಲ್ಲಿ ತಿಳಿಸಲಾಗಿದೆ.
ಹೀಗಾಗಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುವ ಸಾಧ್ಯತೆಯಿಲ್ಲ. ಇದಾಗ್ಯೂ ಪಂದ್ಯ ಆರಂಭವಾದರೂ ಮಳೆ ಅಡ್ಡಿಪಡಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಅಕ್ಟೋಬರ್ 28 ರವರೆಗೆ ಜರುಗಲಿದೆ. ಇನ್ನು ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿದ್ದು, ಈ ಪಂದ್ಯವು ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ನಡೆಯಲಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: IPL 2025: RCB ತಂಡದಿಂದ ಗ್ರೀನ್ಗೆ ಗೇಟ್ ಪಾಸ್..!
ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಕೇನ್ ವಿಲಿಯಮ್ಸನ್ (ಮೊದಲ ಪಂದ್ಯಕ್ಕೆ ಅಲಭ್ಯ), ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್ (ಮೊದಲನೇ ಟೆಸ್ಟ್ಗೆ ಮಾತ್ರ), ಇಶ್ ಸೋಧಿ (ಮೊದಲ ಪಂದ್ಯಕ್ಕೆ ಅಲಭ್ಯ).