IND vs NZ: ಟಾಸ್ ಗೆದ್ದ ಭಾರತ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
India vs New Zealand, 1st Test: ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಎರಡನೇ ಪಂದ್ಯವು ಪುಣೆಯಲ್ಲಿ ಜರುಗಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆತಿಥ್ಯವಹಿಸಲಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಶುರುವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಬುಧವಾರದಿಂದ ಆರಂಭವಾಗಬೇಕಿದ್ದ ಈ ಪಂದ್ಯದ ಮೊದಲ ದಿನದಾಟವು ಮಳೆಯಿಂದಾಗಿ ರದ್ದಾಗಿತ್ತು.
ಇದೀಗ ಎರಡನೇ ದಿನದಾಟದೊಂದಿಗೆ ಪಂದ್ಯ ಶುರುವಾಗಿದ್ದು, ಅದರಂತೆ ಟಾಸ್ ಗೆದ್ದಿರುವ ಭಾರತ ತಂಡವು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ. ಇನ್ನು ಈ ಪಂದ್ಯದಿಂದ ಟೀಮ್ ಇಂಡಿಯಾದ ಯುವ ಆಟಗಾರ ಶುಭ್ಮನ್ ಗಿಲ್ ಹೊರಗುಳಿದಿದ್ದಾರೆ.
ಕತ್ತು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶುಭ್ಮನ್ ಗಿಲ್ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಮತ್ತೋರ್ವ ಯುವ ದಾಂಡಿಗ ಸರ್ಫರಾಝ್ ಖಾನ್ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಹಾಗೆಯೇ ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿದಿದ್ದ ಆಕಾಶ್ ದೀಪ್ ಬದಲಿಗೆ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಇದನ್ನೂ ಓದಿ: IPL 2025: ಬರೋಬ್ಬರಿ 23 ಕೋಟಿ ರೂ.ಗೆ ಹೆನ್ರಿಕ್ ಕ್ಲಾಸೆನ್ ರಿಟೈನ್..!
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮತ್ತು ಮೊಹಮ್ಮದ್ ಸಿರಾಜ್, ಶುಭ್ಮನ್ ಗಿಲ್.
Published On - 8:49 am, Thu, 17 October 24