
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಇಂದು (ಜ.14) ನಡೆಯಲಿದೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ವಡೋದರಾದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಅಲ್ಲದೆ ಅವರ ಬದಲಿಗೆ ಇದೀಗ ಟೀಮ್ ಇಂಡಿಯಾಗೆ ಯುವ ಆಲ್ರೌಂಡರ್ ಆಯುಷ್ ಬದೋನಿ ಆಯ್ಕೆಯಾಗಿದ್ದಾರೆ.
ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರಗುಳಿದಿರುವ ಕಾರಣ ದ್ವಿತೀಯ ಪಂದ್ಯದಲ್ಲಿ ಮತ್ತೋರ್ವ ಆಲ್ರೌಂಡರ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. ಅದರಂತೆ ಈ ಬಾರಿ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳಬಹುದು.
ಅದರಂತೆ ಆರಂಭಿಕರಾಗಿ ಈ ಪಂದ್ಯದಲ್ಲೂ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕ ವಿರಾಟ್ ಕೊಹ್ಲಿಗೆ ಫಿಕ್ಸ್. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.
ವಿಕೆಟ್ ಕೀಪರ್ ಬ್ಯಾಟರ್ ಆಗಿ ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಯಲಿದ್ದಾರೆ.
ಹಾಗೆಯೇ ಬೌಲರ್ಗಳಾಗಿ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಕುಲ್ದೀಪ್ ಯಾದವ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಭಾರತ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆಯುಷ್ ಬದೋನಿ.
ಇದನ್ನೂ ಓದಿ: ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB
Published On - 8:53 am, Wed, 14 January 26