IND Vs NZ Live Streaming: ಗೆದ್ದರೆ ಭಾರತಕ್ಕೆ ಸರಣಿ; 2ನೇ ಏಕದಿನ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ

IND Vs NZ Live Streaming: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆಲ್ಲುವುದರೊಂದಿಗೆ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

IND Vs NZ Live Streaming: ಗೆದ್ದರೆ ಭಾರತಕ್ಕೆ ಸರಣಿ; 2ನೇ ಏಕದಿನ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ
ಭಾರತ- ನ್ಯೂಜಿಲೆಂಡ್ ಏಕದಿನ ಸರಣಿ
Follow us
TV9 Web
| Updated By: ಪೃಥ್ವಿಶಂಕರ

Updated on:Jan 20, 2023 | 8:00 PM

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ (India Vs New Zealand) ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆಲ್ಲುವುದರೊಂದಿಗೆ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) ನ್ಯೂಜಿಲೆಂಡ್ ತಂಡವನ್ನು 12 ರನ್‌ಗಳಿಂದ ಸೋಲಿಸಿತ್ತು. ಇತ್ತ ಮೊದಲ ಏಕದಿನ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಇರಾದೆಯೊಂದಿಗೆ ಕಿವೀಸ್ ಪಡೆ ಕಣಕ್ಕಿಳಿಯಲಿದೆ. ಅಲ್ಲದೆ ಈ ಪಂದ್ಯವನ್ನು ಗೆದ್ದರಷ್ಟೇ ಕಿವೀಸ್ ತಂಡ ಸರಣಿಯಲ್ಲಿ ಜೀವಂತವಾಗಿರಲಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಲು ನ್ಯೂಜಿಲೆಂಡ್ ತಂಡ ಶತಾಯಗತಾಯ ಹೋರಾಡಲಿದೆ.

ಟೀಂ ಇಂಡಿಯಾ ಈ ಹಿಂದೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೀಲಂಕಾವನ್ನು 3-0 ಅಂತರದಿಂದ ಸೋಲಿಸಿತ್ತು. ಇದೀಗ ನ್ಯೂಜಿಲೆಂಡ್ ವಿರುದ್ಧವೂ ರೋಹಿತ್ ನಾಯಕತ್ವದ ಭಾರತ ತಂಡವೂ ಅದೇ ಪ್ರಯತ್ನದಲ್ಲಿದೆ. ಆದರೆ ಕೊನೆಯ ಪಂದ್ಯವನ್ನು ನೋಡಿದರೆ, ಟೀಂ ಇಂಡಿಯಾ ತನ್ನ ಬೌಲಿಂಗ್ ವಿಭಾಗದಲ್ಲಿ ಸುಧಾರಣೆ ಕಾಣಲೇಬೇಕಾಗಿದೆ. ಇಲ್ಲದಿದ್ದರೆ ನ್ಯೂಜಿಲೆಂಡ್ ತಂಡ ಟೀಂ ಇಂಡಿಯಾ ವೇಗಿಗಳ ಎದುರು ಪ್ರಾಬಲ್ಯ ಸಾಧಿಸುವುದರೊಂದೊಗೆ ಸರಣಿಯನ್ನು ಸಮಬಲಗೊಳಿಸುವುದಂತೂ ಖಚಿತ. ನ್ಯೂಜಿಲೆಂಡ್ ತನ್ನ ಮೂವರು ಪ್ರಮುಖ ಆಟಗಾರರಿಲ್ಲದೆ ಭಾರತ ಪ್ರವಾಸಕ್ಕೆ ಬಂದಿದ್ದರೂ ಉಳಿದ ಆಟಗಾರರು ಉತ್ತಮ ಪ್ರದರ್ಶನ ತೋರಬೇಕಾಗಿದೆ.

ಫುಟ್ಬಾಲ್ ದೈತ್ಯರಾದ ರೊನಾಲ್ಡೊ, ಎಂಬಪ್ಪೆ, ಮೆಸ್ಸಿ ಜೊತೆ ಕಾಣಿಸಿಕೊಂಡ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್; ಫೋಟೋ ವೈರಲ್

ಇದನ್ನೂ ಓದಿ

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಜನವರಿ 20ರ ಶನಿವಾರ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ಆರಂಭವಾಗಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ನೇ ಏಕದಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?

Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9Kannada.com ನಲ್ಲಿಯೂ ಓದಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:56 pm, Fri, 20 January 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್