ಟಾಸ್ ಗೆದ್ದ ನ್ಯೂಝಿಲೆಂಡ್: ಭಾರತದ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಚೇಂಜ್
India vs New Zealand, 2nd ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 121 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 63 ಮ್ಯಾಚ್ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7 ಮ್ಯಾಚ್ಗಳು ಕಾರಣಾಂತರಗಳಿಂದ ರದ್ದಾದರೆ, ಒಂದು ಪಂದ್ಯವು ಟೈನಲ್ಲಿ ಅಂತ್ಯಗೊಂಡಿತ್ತು.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಮ್ಯಾಚ್ ಶುರುವಾಗಿದೆ. ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್‌ವೆಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇಂದಿನ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ಸಿಕ್ಕಿದೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ನ್ಯೂಝಿಲೆಂಡ್ ಪ್ಲೇಯಿಂಗ್ XI: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ನಾಯಕ), ಝಕಾರಿ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಜೇಡನ್ ಲೆನ್ನೊಕ್ಸ್.
ಸರಣಿ ನಿರ್ಣಾಯಕ ಪಂದ್ಯ:
ಈ ಮ್ಯಾಚ್ನಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಏಕೆಂದರೆ ಮೂರು ಪಂದ್ಯಗಳ ಸರಣಿ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ಜಯಿಸುವ ಅವಕಾಶ ಟೀಮ್ ಇಂಡಿಯಾ ಮುಂದಿದೆ.
ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಇಂದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲ್ಲಲೇಬೇಕು. ಹೀಗಾಗಿ ಕಿವೀಸ್ ಪಡೆ ಪಾಲಿಗೆ ಇಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.
Published On - 1:04 pm, Wed, 14 January 26
