ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ನ್ಯೂಝಿಲೆಂಡ್ ತಂಡವು 255 ರನ್ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 259 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೇವಲ 156 ರನ್ಗಳಿಗೆ ಆಲೌಟ್ ಆಗಿದ್ದರು.
ಮೊದಲ ಇನಿಂಗ್ಸ್ನಲ್ಲಿ 103 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕಿವೀಸ್ ಪರ ನಾಯಕ ಟಾಮ್ ಲ್ಯಾಥಮ್ 133 ಎಸೆತಗಳಲ್ಲಿ 10 ಫೋರ್ಗಳೊಂದಿಗೆ 86 ರನ್ ಬಾರಿಸಿದರು.
ಇನ್ನು ಟಾಮ್ ಬ್ಲಂಡೆಲ್ 41 ರನ್ಗಳ ಕೊಡುಗೆ ನೀಡಿದರೆ, ಗ್ಲೆನ್ ಫಿಲಿಪ್ಸ್ ಅಜೇಯ 47 ರನ್ ಬಾರಿಸಿದರು. ಈ ಮೂಲಕ ನ್ಯೂಝಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 255 ರನ್ಗಳಿಸಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್ನಲ್ಲಿ 7 ವಿಕೆಟ್ ಪಡೆದಿದ್ದ ವಾಷಿಂಗ್ಟನ್ ಸುಂದರ್ ದ್ವಿತೀಯ ಇನಿಂಗ್ಸ್ನಲ್ಲಿ 4 ವಿಕೆಟ್ ಕಬಳಿಸಿದರು. ಹಾಗೆಯೇ ರವೀಂದ್ರ ಜಡೇಜಾ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಮೊದಲ ಇನಿಂಗ್ಸ್ನಲ್ಲಿನ 103 ರನ್ಗಳ ಹಿನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 359 ರನ್ಗಳ ಗುರಿ ಪಡೆದುಕೊಂಡಿದೆ. ಇನ್ನೂ ಎರಡುವರೆ ದಿನದಾಟಗಳು ಬಾಕಿಯಿದ್ದು, ಇದರೊಳಗೆ ಭಾರತ ತಂಡವು ಈ ಗುರಿ ಮುಟ್ಟಿದರೆ ಗೆಲುವು ತನ್ನದಾಗಿಸಿಕೊಳ್ಳಬಹುದು.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷರ್ಭ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್.
ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್, ಅಜಾಝ್ ಪಟೇಲ್, ವಿಲಿಯಂ ಒರೋಕ್.
ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡವು ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ಗಳಿಂದ ಪರಾಜಯಗೊಂಡಿತ್ತು.
ಇದೀಗ ಎರಡನೇ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಹಾಗಾಗಿ ಟೀಮ್ ಇಂಡಿಯಾ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಇದೀಗ ಈ ನಿರ್ಣಾಯಕ ಪಂದ್ಯವು ಕೊನೆಯ ಇನಿಂಗ್ಸ್ನತ್ತ ಸಾಗಿದ್ದು, ಅದರಂತೆ ಭಾರತ ತಂಡವು 359 ರನ್ಗಳಿಸಿದರೆ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಬಹುದು.
Published On - 10:35 am, Sat, 26 October 24