AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಕೊಹ್ಲಿ ಪಡೆಗೆ ಬಿಗ್ ಶಾಕ್: ಶುಕ್ರವಾರ ಭಾರತ-ನ್ಯೂಜಿಲೆಂಡ್ 2ನೇ ಟೆಸ್ಟ್ ಆರಂಭ ಅನುಮಾನ: ಯಾಕೆ ಗೊತ್ತೇ?

IND vs NZ, 2nd Test Updates: ಬುಧವಾರ ದಿನವಿಡೀ ಮಳೆಯಿಂದಾಗಿ ಭಾರತ- ನ್ಯೂಜಿಲೆಂಡ್ ಎರಡೂ ತಂಡಗಳು ತಮ್ಮ ತರಬೇತಿಯನ್ನು ಕೂಡ ರದ್ದುಗೊಳಿಸಬೇಕಾಯಿತು. ಹವಾಮಾನ ವೈಪರೀತ್ಯ ಕಾರಣ ಎಡೆ ಬಿಡದೇ ಮಳೆ ಸುರಿಯುತ್ತಿರುವ ಕಾರಣ ಟೆಸ್ಟ್ ಪಂದ್ಯದ ಮೊದಲ ಎರಡೂ ದಿನದಾಟ ಅನುಮಾನ ಎಂದು ಹೇಳಲಾಗಿದೆ.

India vs New Zealand: ಕೊಹ್ಲಿ ಪಡೆಗೆ ಬಿಗ್ ಶಾಕ್: ಶುಕ್ರವಾರ ಭಾರತ-ನ್ಯೂಜಿಲೆಂಡ್ 2ನೇ ಟೆಸ್ಟ್ ಆರಂಭ ಅನುಮಾನ: ಯಾಕೆ ಗೊತ್ತೇ?
Virat Kohli India vs New Zealand 2nd Test
TV9 Web
| Updated By: Vinay Bhat|

Updated on: Dec 02, 2021 | 12:21 PM

Share

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಎರಡನೇ ಟೆಸ್ಟ್ ಪಂದ್ಯ ಶುಕ್ರವಾರದಿಂದ ಆರಂಭವಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂ (Wankhede Stadium, Mumbai) ಈ ಕುತೂಹಲಕಾರಿ ಪಂದ್ಯಕ್ಕೆ ವೇದಿಕೆ ಸಜ್ಜು ಮಾಡುತ್ತಿದೆ. ಹೀಗಿರುವಾಗ ದೊಡ್ಡ ಆಘಾತವೊಂದು ಎದುರಾಗಿದೆ. ನ್ಯೂಜಿಲೆಂಡ್ ವಿರುದ್ಧ ತನ್ನ ಅಜೇಯ ಸರಣಿ ಗೆಲುವಿನ ಓಟ ಮುಂದುವರೆಸುವ ಇರಾದೆಯಲ್ಲಿದ್ದ ವಿರಾಟ್ ಕೊಹ್ಲಿ (Virat Kohli) ಪಡೆಗೆ ವರುಣ ವಿಲನ್ ಆಗಿ ಪರಿಣಮಿಸಿದ್ದಾರೆ. ಹೌದು, ಬರೋಬ್ಬರಿ ಐದು ವರ್ಷಗಳ ಬಳಿಕ ಟೆಸ್ಟ್‌ ಕ್ರಿಕೆಟ್​ಗೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಆತಿಥ್ಯ ವಹಿಸುತ್ತಿದೆ. ಆದರೆ, ಈ ರೋಚಕ ಪಂದ್ಯಕ್ಕೆ ಮಳೆರಾಯ ತಣ್ಣೀರೆರಚುವ ಸಾಧ್ಯತೆ ಇದೆ (Mumbai Rain). ಹವಾಮಾನ ವೈಪರೀತ್ಯ ಕಾರಣ ಎಡೆ ಬಿಡದೇ ಮಳೆ ಸುರಿಯುತ್ತಿರುವ ಕಾರಣ ಟೆಸ್ಟ್ ಪಂದ್ಯದ ಮೊದಲ ಎರಡೂ ದಿನದಾಟ ಅನುಮಾನ ಎಂಬಂತ್ತಾಗಿದೆ. ಹೀಗಾಗಿ ಶುಕ್ರವಾರ ಪಂದ್ಯ ಆರಂಭವಾಗುವುದು ಅನುಮಾನ.

ಬುಧವಾರ ಡಿಸೆಂಬರ್ 1 ರಂದು ದಿನವಿಡೀ ಮಳೆಯಿಂದಾಗಿ ಎರಡೂ ತಂಡಗಳು ತಮ್ಮ ತರಬೇತಿಯನ್ನು ಕೂಡ ರದ್ದುಗೊಳಿಸಬೇಕಾಯಿತು. “ಮಳೆ ಕಾರಣ ಟೀಮ್ ಇಂಡಿಯಾದ ಅಭ್ಯಾಸವನ್ನು ರದ್ದು ಪಡಿಸಲಾಗಿದೆ,” ಎಂದು ಬಿಸಿಸಿಐ ಬುಧವಾರ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಗುರುವಾರ ಕೂಡ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಔಟ್ ಫೀಲ್ಡ್ ತೇವವಾಗಿರುತ್ತದೆ. ಹೀಗಾಗಿ ಇಂದು ಕೂಡ ಅಭ್ಯಾಸ ನಡೆಸುವುದು ಅನುಮಾನ ಎಂದು ಹೇಳಲಾಗಿದೆ.

ಉತ್ತರ ಗುಜರಾತ್‌ ವಾಯುವ್ಯ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ಪಾಲ್ಘರ್‌, ಥಾಣೆ, ಮುಂಬೈನಲ್ಲಿ ಹೆಚ್ಚು ಹಾನಿಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಹೀಗಾಗಿ ಎರಡನೇ ಟೆಸ್ಟ್​ಗೆ ವರುಣನ ಕಾಟ ಇರುವುದು ಖಚಿತ.

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ನಡೆಯಲಿರುವ 2ನೇ ಹಾಗೂ ನಿರ್ಣಾಯಕ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಂಪೂರ್ಣವಾಗಿ ಸ್ಪಿನ್ ಸ್ನೇಹಿಯಾದ ಪಿಚ್ ನಿರ್ಮಾಣಗೊಳ್ಳುವ ನಿರೀಕ್ಷೆ ಇದೆ. ಆದರೆ ಪಿಚ್ ಹಸಿರಾಗಿರಲಿದೆ ಎಂದು ಕೆಲ ವರದಿಗಳು ತಿಳಿಸಿವೆ. ಇದರಿಂದಾಗಿ ವಾಂಖೆಡೆ ಪಿಚ್ ಬಗ್ಗೆ ಹೆಚ್ಚಿನ ಕುತೂಹಲ ಮೂಡಿದೆ. ಮೊದಲ ದಿನದಿಂದಲೇ ಸ್ಪಿನ್ನರ್‌ಗಳಿಗೆ ನೆರವಾಗುವ ಪಿಚ್ ಸಿದ್ಧಗೊಳಿಸಿದ್ದೇವೆ. ಆತಿಥೇಯ ತಂಡದ ಬಲಕ್ಕೆ ತಕ್ಕ ಪಿಚ್ ನಿರ್ಮಿಸಿದ್ದೇವೆ ಎಂದು ಆತಿಥೇಯ ಮುಂಬೈ ಕ್ರಿಕೆಟ್ ಸಂಸ್ಥೆಯ ಮೂಲಗಳು ತಿಳಿಸಿವೆ. ಇದರಿಂದಾಗಿ ಈ ಬಾರಿ ಕಿವೀಸ್‌ಗೆ ಹೆಚ್ಚಿನ ಸ್ಪಿನ್ ಸವಾಲು ಎದುರಾಗುವ ನಿರೀಕ್ಷೆ ಇದೆ.

ಅಲ್ಲದೆ ಮಳೆಯಿಂದಾಗಿ ಪಿಚ್ ಮೇಲೆ ತೇವಾಂಶ ಉಳಿದುಕೊಂಡರೆ ಕೂಡ ವೇಗಿಗಳಿಗೆ ಅದು ನೆರವಾಗಲಿದೆ. ಇದರಿಂದ ಭಾರತ ಮತ್ತೊಮ್ಮೆ 3 ಸ್ಪಿನ್ನರ್ ಗಳನ್ನು ಆಡಿಸುವ ಬಗ್ಗೆ ಅನುಮಾನವಿದೆ. ಮೂರನೇ ವೇಗಿಯಾಗಿ ಅಥವಾ ಇಶಾಂತ್ ಶರ್ಮ ಬದಲಿಗೆ ಮೊಹಮದ್ ಸಿರಾಜ್ ಆಡಲಿದ್ದಾರೆ ಎಂದೂ ಹೇಳಲಾಗಿದೆ. ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ವಿರಾಟ್ ಕೊಹ್ಲಿ ಗುರುವಾರ ಪಿಚ್ ಪರಿಶೀಲಿಸಿದ ಬಳಿಕವೇ ತಂಡ ಸಂಯೋಜನೆ ಅಂತಿಮವಾಗಲಿದೆ ಎನ್ನಲಾಗಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI: ಕೆಎಸ್ ಭರತ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್‌, ಚೇತೇಶ್ವರ್ ಪೂಜಾರ, ವಿರಾಟ್‌ ಕೊಹ್ಲಿ(ನಾಯಕ), ಅಜಿಂಕ್ಯಾ ರಹಾನೆ, ಶ್ರೇಯಸ್‌ ಅಯ್ಯರ್‌, ರವೀಂದ್ರ ಜಡೇಜಾ, ಆರ್‌ ಅಶ್ವಿನ್‌, ಅಕ್ಷರ್‌ ಪಟೇಲ್‌, ಉಮೇಶ್‌ ಯಾದವ್, ಇಶಾಂತ್ ಶರ್ಮಾ/ ಮೊಹಮ್ಮದ್‌ ಸಿರಾಜ್‌.

India vs South Africa: ಓಮಿಕ್ರಾನ್ ಭೀತಿ: ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ

India vs New Zealand Test: 2ನೇ ಟೆಸ್ಟ್​ಗೆ ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

(India vs New Zealand 2nd Test likely to postponed duto rain in Mumbai know here the mumbai weather)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ