IND vs NZ: ಇಂದಿನಿಂದ ಭಾರತ vs ನ್ಯೂಝಿಲೆಂಡ್ 2ನೇ ಟೆಸ್ಟ್ ಶುರು

|

Updated on: Oct 24, 2024 | 7:09 AM

India vs New Zealand, 2nd Test: ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಈವರೆಗೆ 63 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 22 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 14 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನುಳಿದ 27 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.

IND vs NZ: ಇಂದಿನಿಂದ ಭಾರತ vs ನ್ಯೂಝಿಲೆಂಡ್ 2ನೇ ಟೆಸ್ಟ್ ಶುರು
IND vs NZ
Follow us on

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಇಂದಿನಿಂದ (ಅ.24) ಶುರುವಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ ಸೋತಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

ಇದೀಗ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಟೀಮ್ ಇಂಡಿಯಾ ಪುಣೆಯಲ್ಲಿ ಇಂದಿನಿಂದ ಶುರುವಾಗಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲಲೇಬೇಕು. ಒಂದು ವೇಳೆ ಸೋತರೆ ಸರಣಿ ನ್ಯೂಝಿಲೆಂಡ್ ತಂಡದ ವಶವಾಗಲಿದೆ.

ಇತಿಹಾಸ ನಿರ್ಮಿಸಲಿದೆಯಾ ಕಿವೀಸ್ ಪಡೆ:

ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಈವರೆಗೆ ಕೇವಲ ಮೂರು ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಇದೀಗ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿರುವ ನ್ಯೂಝಿಲೆಂಡ್ ತಂಡವು ಎರಡನೇ ಅಥವಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು.

ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಸರಣಿ ಗೆಲ್ಲಲು ನ್ಯೂಝಿಲೆಂಡ್ ತಂಡಕ್ಕೆ ಉತ್ತಮ ಅವಕಾಶವಿದೆ. ಈ ಅವಕಾಶವನ್ನು ಬಳಸಿಕೊಳ್ಳುವ ಮೂಲಕ ಕಿವೀಸ್ ಪಡೆ ಭಾರತದಲ್ಲಿ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

ಎಷ್ಟು ಗಂಟೆಗೆ ಮ್ಯಾಚ್ ಶುರು?

ಈ ಸರಣಿಯ ಎಲ್ಲಾ ಪಂದ್ಯಗಳು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 9 ಗಂಟೆಗೆ ನಡೆಯಲಿದೆ.

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?

ಭಾರತ ಮತ್ತು–ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಇನ್ನು ಜಿಯೋ ಸಿನಿಮಾ ಆ್ಯಪ್ ನಲ್ಲಿ ಉಚಿತವಾಗಿ ಲೈವ್ ವೀಕ್ಷಿಸಬಹುದು.

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಕೇನ್ ವಿಲಿಯಮ್ಸನ್ (ದ್ವಿತೀಯ ಪಂದ್ಯಕ್ಕೆ ಅಲಭ್ಯ).