IND vs NZ: ಕಿವೀಸ್ ಸ್ಪಿನ್ ದಾಳಿಗೆ ತತ್ತರಿಸಿದ ಭಾರತ 156 ರನ್​​ಗಳಿಗೆ ಆಲೌಟ್

|

Updated on: Oct 25, 2024 | 1:22 PM

IND vs NZ: ಮೊದಲ ಇನ್ನಿಂಗ್ಸ್​ನಲ್ಲಿ ಕಿವೀಸ್ ತಂಡವನ್ನು 259 ರನ್​ಗಳಿಗೆ ಆಲೌಟ್ ಮಾಡಿ, ಬ್ಯಾಟಿಂಗ್ ಆರಂಭಿಸಿದ್ದ ರೋಹಿತ್ ಪಡೆ ಇದೀಗ ಎರಡನೇ ದಿನದಾಟದ ಎರಡನೇ ಸೆಷನ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 156 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 103 ರನ್​ಗಳ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ.

IND vs NZ: ಕಿವೀಸ್ ಸ್ಪಿನ್ ದಾಳಿಗೆ ತತ್ತರಿಸಿದ ಭಾರತ 156 ರನ್​​ಗಳಿಗೆ ಆಲೌಟ್
ಭಾರತ- ನ್ಯೂಜಿಲೆಂಡ್
Follow us on

ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಕಿವೀಸ್ ವೇಗಿಗಳ ಮುಂದೆ ಮಂಡಿಯೂರಿದ್ದ ಟೀಂ ಇಂಡಿಯಾ ಇದೀಗ ಪುಣೆ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಸ್ಪಿನ್ನರ್​ಗಳ ದಾಳಿಗೆ ನಲುಗಿ ಹೋಗಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಕಿವೀಸ್ ತಂಡವನ್ನು 259 ರನ್​ಗಳಿಗೆ ಆಲೌಟ್ ಮಾಡಿ, ಬ್ಯಾಟಿಂಗ್ ಆರಂಭಿಸಿದ್ದ ರೋಹಿತ್ ಪಡೆ ಇದೀಗ ಎರಡನೇ ದಿನದಾಟದ ಎರಡನೇ ಸೆಷನ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 156 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 103 ರನ್​ಗಳ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ. ಕಿವೀಸ್ ಪರ ಸ್ಪಿನ್ ಜಾದೂ ತೊರಿದ ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ 7 ವಿಕೆಟ್ ಪಡೆದು ಟೀಂ ಇಂಡಿಯಾವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

ಭಾರತದ ಬ್ಯಾಟಿಂಗ್ ವೈಫಲ್ಯ

ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 16 ರನ್ ಕಲೆಹಾಕಿದ್ದ ಟೀಂ ಇಂಡಿಯಾ ಇಲ್ಲಿಂದ ತನ್ನ ಎರಡನೇ ದಿನದಾಟವನ್ನು ಮುಂದುವರೆಸಿತು. ಮೊದಲ ದಿನವೇ ನಾಯಕ ರೋಹಿತ್ ಶರ್ಮಾ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಇನ್ನು ಎರಡನೇ ದಿನದಾಟವನ್ನು ಮುಂದುವರೆಸಿದ ಗಿಲ್ ಹಾಗೂ ಜೈಸ್ವಾಲ್ ಕೆಲ ಹೊತ್ತು ಉತ್ತಮ ಜೊತೆಯಾಟ ನಿರ್ಮಿಸಿದರು.

ಆದರೆ ಈ ವೇಳೆ 30 ರನ್ ಕಲೆಹಾಕಿದ್ದ ಗಿಲ್, ಸ್ಯಾಂಟ್ನರ್ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದರು. ಆ ನಂತರ ಬಂದ ವಿರಾಟ್ ಕೊಹ್ಲಿ ಕೂಡ ವಿಶೇಷ ಏನನ್ನೂ ಮಾಡಲಾಗದೆ ಒಂದು ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಉಳಿದಂತೆ ರಿಷಬ್ ಪಂತ್ 18 ರನ್, ಸರ್ಫರಾಜ್ ಖಾನ್ 11 ರನ್, ಆರ್ ಅಶ್ವಿನ್ 4 ರನ್, ಆಕಾಶ್ ದೀಪ್ 6 ರನ್ ಕಲೆಹಾಕಿದರೆ, ಬುಮ್ರಾ ಖಾತೆ ತೆರೆಯದೆ ಔಟಾದರು. ತಂಡದ ಪರ ರವೀಂದ್ರ ಜಡೇಜಾ ಗರಿಷ್ಠ 38 ರನ್ ಬಾರಿಸಿದರೆ, ವಾಷಿಂಗ್ಟನ್ ಸುಂದರ್ 18 ರನ್ ಗಳಿಸಿ ಅಜೇಯರಾಗಿ ಉಳಿದರು.

ಸ್ಯಾಂಟ್ನರ್ ಸ್ಪಿನ್ ಮ್ಯಾಜಿಕ್

ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ 7 ವಿಕೆಟ್ ಕಬಳಿಸಿದ ಮಿಚೆಲ್ ಸ್ಯಾಂಟ್ನರ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ 5 ವಿಕೆಟ್ ಕಬಳಿಸಿದ ಸಾಧನೆ ಮಾಡಿದರು. ಅಷ್ಟೇ ಅಲ್ಲ, ಭಾರತದಲ್ಲಿ ನ್ಯೂಜಿಲೆಂಡ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು 2021ರಲ್ಲಿ ಅಜಾಜ್ ಪಟೇಲ್ 119 ರನ್ ನೀಡಿ 10 ವಿಕೆಟ್ ಪಡೆದಿದ್ದರು. 1976ರಲ್ಲಿ ರಿಚರ್ಡ್ ಹ್ಯಾಡ್ಲಿ 23 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು. ಇದೀಗ ಸ್ಯಾಂಟ್ನರ್ 53 ರನ್ ನೀಡಿ 7 ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Fri, 25 October 24