AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಸಂಜು ಸ್ಯಾಮ್ಸನ್‌ಗಿಲ್ಲ ಸ್ಥಾನ! ಕಿವೀಸ್ ತಂಡದಲ್ಲಿ ಒಂದು ಬದಲಾವಣೆ; ಹೀಗಿವೆ ಉಭಯ ತಂಡಗಳು

IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ನಾಯಕ ಎಂದಿನಂತೆ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ನಾಯಕ ಧವನ್ ಈ ಸರಣಿಯ 3 ಪಂದ್ಯಗಳ ಟಾಸ್ ಸೋತಿರುವುದು ಇಲ್ಲಿ ವಿಶೇಷ.

IND vs NZ: ಸಂಜು ಸ್ಯಾಮ್ಸನ್‌ಗಿಲ್ಲ ಸ್ಥಾನ! ಕಿವೀಸ್ ತಂಡದಲ್ಲಿ ಒಂದು ಬದಲಾವಣೆ; ಹೀಗಿವೆ ಉಭಯ ತಂಡಗಳು
Follow us
TV9 Web
| Updated By: ಪೃಥ್ವಿಶಂಕರ

Updated on:Nov 30, 2022 | 7:19 AM

ಇಂದು ಕ್ರೈಸ್ಟ್‌ಚರ್ಚ್‌ನಲ್ಲಿ (Christchurch) ಭಾರತ ಮತ್ತು ನ್ಯೂಜಿಲೆಂಡ್ (India and New Zealand) ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ನಡೆಯುತ್ತಿದೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆತಿಥೇಯ ನ್ಯೂಜಿಲೆಂಡ್ 1-0ಯಿಂದ ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ಆದರೆ, ಈ ಪಂದ್ಯಕ್ಕೆ ಮಳೆ ಕಾಟ ನೀಡದಿದ್ದರೆ ಮಾತ್ರ ಈ ಪಂದ್ಯದ ಫಲಿತಾಂಶ ಹೊರಬೀಳಲಿದೆ. ನಿಗಧಿತ ಸಮಯಕ್ಕೂ ಕೊಂಚ ತಡವಾಗಿ ಟಾಸ್ ನಡೆದಿದ್ದು, ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ನಾಯಕ ಎಂದಿನಂತೆ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ನಾಯಕ ಧವನ್ (Shikhar Dhawan) ಈ ಸರಣಿಯ 3 ಪಂದ್ಯಗಳ ಟಾಸ್ ಸೋತಿರುವುದು ಇಲ್ಲಿ ವಿಶೇಷ. ಟಾಸ್ ಬಳಿಕ ಉಭಯ ತಂಡಗಳು ತಮ್ಮ ತಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡದೆ ಎರಡನೇ ಏಕದಿನ ಪಂದ್ಯಕ್ಕೆ ಕಣಕ್ಕಿಳಿಸಿದ ತಂಡವನ್ನೇ ಇಂದು ಕೂಡ ಆಡಿಸುತ್ತಿದೆ. ಆದರೆ ಕಿವೀಸ್ ಪಡೆ ಮಾತ್ರ ಒಂದು ಬದಲಾವಣೆ ಮಾಡಿದೆ.

ಈಗಾಗಲೇ ಒಂದು ಪಂದ್ಯ ಸೋತು ಸರಣಿಯಲ್ಲಿ ಹಿನ್ನಡೆ ಅನುಭವಿಸಿರುವ ಧವನ್ ಪಡೆಗೆ ಈ ಮೈದಾನದ ಅಂಕಿ ಅಂಶಗಳು ಮತ್ತಷ್ಟು ಹಿನ್ನಡೆಯುಂಟು ಮಾಡಿವೆ. ಕ್ರೈಸ್ಟ್‌ಚರ್ಚ್‌ನಲ್ಲಿ ಟೀಂ ಇಂಡಿಯಾ ಆಡಿರುವ 6 ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆದ್ದಿದೆ. ಅಲ್ಲದೆ ಟೀಂ ಇಂಡಿಯಾ ಕಿವೀಸ್ ವಿರುದ್ಧ ಆಡಿರುವ ಕಳೆದ 5 ಏಕದಿನ ಪಂದ್ಯಗಳಲ್ಲಿ 4 ರಲ್ಲಿ ಸೋತಿದೆ. ಹೀಗಾಗಿ ಸರಣಿಯನ್ನು ಸಮಬಲಗೊಳಿಸಲು ಭಾರತ ಇಂದು ಯಾವುದೇ ಬೆಲೆ ತೆತ್ತಾದರೂ ಪಂದ್ಯ ಗೆಲ್ಲಬೇಕಿದೆ.

ಇದನ್ನೂ ಓದಿ: IND vs NZ ODI Cricket Live Score: ಮತ್ತೆ ಟಾಸ್ ಸೋತ ಧವನ್; ಕಿವೀಸ್ ಮೊದಲು ಬೌಲಿಂಗ್

ಎರಡೂ ತಂಡಗಳು ಹೀಗಿವೆ

ಭಾರತದ ಪ್ಲೇಯಿಂಗ್ ಇಲೆವೆನ್: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್.

ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:05 am, Wed, 30 November 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ