ಇಂದು ಕ್ರೈಸ್ಟ್‌ಚರ್ಚ್‌ನಲ್ಲಿ (Christchurch) ಭಾರತ ಮತ್ತು ನ್ಯೂಜಿಲೆಂಡ್ (India and New Zealand) ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ನಡೆಯುತ್ತಿದೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆತಿಥೇಯ ನ್ಯೂಜಿಲೆಂಡ್ 1-0ಯಿಂದ ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ಆದರೆ, ಈ ಪಂದ್ಯಕ್ಕೆ ಮಳೆ ಕಾಟ ನೀಡದಿದ್ದರೆ ಮಾತ್ರ ಈ ಪಂದ್ಯದ ಫಲಿತಾಂಶ ಹೊರಬೀಳಲಿದೆ. ನಿಗಧಿತ ಸಮಯಕ್ಕೂ ಕೊಂಚ ತಡವಾಗಿ ಟಾಸ್ ನಡೆದಿದ್ದು, ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ನಾಯಕ ಎಂದಿನಂತೆ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ನಾಯಕ ಧವನ್ (Shikhar Dhawan) ಈ ಸರಣಿಯ 3 ಪಂದ್ಯಗಳ ಟಾಸ್ ಸೋತಿರುವುದು ಇಲ್ಲಿ ವಿಶೇಷ. ಟಾಸ್ ಬಳಿಕ ಉಭಯ ತಂಡಗಳು ತಮ್ಮ ತಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡದೆ ಎರಡನೇ ಏಕದಿನ ಪಂದ್ಯಕ್ಕೆ ಕಣಕ್ಕಿಳಿಸಿದ ತಂಡವನ್ನೇ ಇಂದು ಕೂಡ ಆಡಿಸುತ್ತಿದೆ. ಆದರೆ ಕಿವೀಸ್ ಪಡೆ ಮಾತ್ರ ಒಂದು ಬದಲಾವಣೆ ಮಾಡಿದೆ.
ಈಗಾಗಲೇ ಒಂದು ಪಂದ್ಯ ಸೋತು ಸರಣಿಯಲ್ಲಿ ಹಿನ್ನಡೆ ಅನುಭವಿಸಿರುವ ಧವನ್ ಪಡೆಗೆ ಈ ಮೈದಾನದ ಅಂಕಿ ಅಂಶಗಳು ಮತ್ತಷ್ಟು ಹಿನ್ನಡೆಯುಂಟು ಮಾಡಿವೆ. ಕ್ರೈಸ್ಟ್‌ಚರ್ಚ್‌ನಲ್ಲಿ ಟೀಂ ಇಂಡಿಯಾ ಆಡಿರುವ 6 ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆದ್ದಿದೆ. ಅಲ್ಲದೆ ಟೀಂ ಇಂಡಿಯಾ ಕಿವೀಸ್ ವಿರುದ್ಧ ಆಡಿರುವ ಕಳೆದ 5 ಏಕದಿನ ಪಂದ್ಯಗಳಲ್ಲಿ 4 ರಲ್ಲಿ ಸೋತಿದೆ. ಹೀಗಾಗಿ ಸರಣಿಯನ್ನು ಸಮಬಲಗೊಳಿಸಲು ಭಾರತ ಇಂದು ಯಾವುದೇ ಬೆಲೆ ತೆತ್ತಾದರೂ ಪಂದ್ಯ ಗೆಲ್ಲಬೇಕಿದೆ.
? Toss Update ?
New Zealand have elected to bowl against #TeamIndia in the third #NZvIND ODI.
Follow the match ? https://t.co/NGs0HnQVMX pic.twitter.com/jgNd3L60cC
— BCCI (@BCCI) November 30, 2022
ಇದನ್ನೂ ಓದಿ: IND vs NZ ODI Cricket Live Score: ಮತ್ತೆ ಟಾಸ್ ಸೋತ ಧವನ್; ಕಿವೀಸ್ ಮೊದಲು ಬೌಲಿಂಗ್
ಎರಡೂ ತಂಡಗಳು ಹೀಗಿವೆ
ಭಾರತದ ಪ್ಲೇಯಿಂಗ್ ಇಲೆವೆನ್: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್.
? Team News#TeamIndia remain unchanged. #NZvIND
Follow the match ? https://t.co/NGs0HnQVMX
A look at our Playing XI ? pic.twitter.com/GtVFwgYHqR
— BCCI (@BCCI) November 30, 2022
ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:05 am, Wed, 30 November 22